ಡಿಕ್ಕಿಯ ರಭಸಕ್ಕೆ ಬೆಂಕಿಗಾಹುತಿಯಾದ ಬಸ್​; 20 ಮಂದಿ ಸಜೀವ ದಹನ

ದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ ಮೃತಪಟ್ಟ ಕುಟುಂಬಸ್ಥರಿಗೆ 2 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ 50 ಸಾವಿರ ಪರಿಹಾರ ನೀಡುವುದಾಗಿ ಹೇಳಿದ್ದಾರೆ.

news18-kannada
Updated:January 11, 2020, 8:19 AM IST
ಡಿಕ್ಕಿಯ ರಭಸಕ್ಕೆ ಬೆಂಕಿಗಾಹುತಿಯಾದ ಬಸ್​; 20 ಮಂದಿ ಸಜೀವ ದಹನ
ಸಾಂದರ್ಭಿಕ ಚಿತ್ರ
  • Share this:
ಉತ್ತರ ಪ್ರದೇಶ(ಜ.11): ಖಾಸಗಿ ಬಸ್​ ಮತ್ತು ಟ್ರಕ್​ ಮುಖಾಮುಖಿ ಡಿಕ್ಕಿಯಾಗಿ ಸುಮಾರು 20 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಪ್ರದೇಶದ ಕನ್ನೌಜ್​ ಜಿಲ್ಲೆಯ ಚಿಲೋಯಿ ಗ್ರಾಮದ ಸಮೀಪ ನಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಲೀಪರ್ ಬಸ್​ ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, ಬಸ್​ನಲ್ಲಿದ್ದ ಸುಮಾರು 20 ಜನ ಸಜೀವ ದಹನಗೊಂಡಿದ್ದಾರೆ.

ನಿನ್ನೆ ರಾತ್ರಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ 20 ಮಂದಿ ಮೃತಪಟ್ಟರೆ, ಇನ್ನು ಹಲವು ಮಂದಿ ಗಂಭೀರ ಗಾಯಗೊಂಡಿದ್ಧಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಪಘಾತಕ್ಕೀಡಾದ ಬಸ್​ ಫರೂಕಾಬಾದ್​ನಿಂದ ಜೈಪುರಕ್ಕೆ ತೆರಳುತ್ತಿತ್ತು. ಬಸ್​ನಲ್ಲಿ ಸುಮಾರು 45 ಮಂದಿ ಪ್ರಯಾಣಿಸುತ್ತಿದ್ದರು. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ರಕ್ಷಣಾ ಕಾರ್ಯ ಮಾಡಿದ್ದಾರೆ. ಘಟನೆಯಲ್ಲಿ 21 ಪ್ರಯಾಣಿಕರನ್ನು ರಕ್ಷಿಸಲಾಗಿದೆ.

Lunar Eclipse 2020: ತೋಳ ಚಂದ್ರಗ್ರಹಣಕ್ಕೆ ಕೆಲವೇ ಕ್ಷಣಗಳು ಬಾಕಿ; ಭಾರತದ ಈ ಪ್ರದೇಶದಲ್ಲಿ ವೀಕ್ಷಣೆ ಮಾಡಬಹುದು

ದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ ಮೃತಪಟ್ಟ ಕುಟುಂಬಸ್ಥರಿಗೆ 2 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ 50 ಸಾವಿರ ಪರಿಹಾರ ನೀಡುವುದಾಗಿ ಹೇಳಿದ್ದಾರೆ. ದುರಂತದಲ್ಲಿ ಸಾವನ್ನಪ್ಪಿದವರಿಗೆ ಯೋಗಿ ಆದಿತ್ಯನಾಥ್​ ಸಂತಾಪ ಸೂಚಿಸಿದ್ದಾರೆ.

ಇನ್ನು, ಸಜೀವ ದಹನಗೊಂಡಿರುವವರನ್ನು ಗುರುತು ಹಚ್ಚಲು ಕಷ್ಟವಾಗಿದೆ. ಹೀಗಾಗಿ ಡಿಎನ್​ಎ ಪರೀಕ್ಷೆ ಮಾಡಿ ಪ್ರಯಾಣಿಕರನ್ನು ಪತ್ತೆ ಹಚ್ಚಬೇಕಿದೆ. ಪ್ರಯಾಣಿಕರ ದೇಹಗಳ ಸಂಪೂರ್ಣ ಸುಟ್ಟು ಕರಕಲಾಗಿವೆ. ಮೂಳೆಗಳು ಮುರಿದಿವೆ. ಹೀಗಾಗಿ ಡಿಎನ್​ಎ ಪರೀಕ್ಷೆ ಮಾಡಿ ಬಳಿಕ ಸತ್ತವರ ಗುರುತನ್ನು ಪತ್ತೆ ಹಚ್ಚಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

M Chidananda Murthy Passed Away: ಹಿರಿಯ ಸಾಹಿತಿ, ಸಂಶೋಧಕ ಡಾ.ಎಂ. ಚಿದಾನಂದಮೂರ್ತಿ ಇನ್ನಿಲ್ಲ
First published: January 11, 2020, 8:12 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading