Karnataka Politics: ಗೆದ್ದ ಕಾಂಗ್ರೆಸ್​ಗೆ ಪ್ರಶಾಂತ್ ಕಿಶೋರ್ ಎಚ್ಚರಿಕೆ!

ಪ್ರಶಾಂತ್ ಕಿಶೋರ್

ಪ್ರಶಾಂತ್ ಕಿಶೋರ್

ಪ್ರಶಾಂತ್ ಕಿಶೋರ್, ಕರ್ನಾಟಕ ವಿಧಾನಸಭೆ ಚುನಾವಣೆ ಗೆದ್ದ ಖುಷಿಯಲ್ಲಿರುವ ಕಾಂಗ್ರೆಸ್‌ ಪಕ್ಷವನ್ನು ಕುರಿತು ಎಚ್ಚರಿಕೆಯ ಸಂದೇಶವೊಂದನ್ನು ನೀಡಿದ್ದಾರೆ.

  • Trending Desk
  • 3-MIN READ
  • Last Updated :
  • Bangalore [Bangalore], India
  • Share this:

2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections) ಆಡಳಿತ ವಿರೋಧಿ ಅಲೆಗೆ ಸಿಲುಕಿದ ಬಿಜೆಪಿ (BJP)ಕೇವಲ 66 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ತೀರಾ ಕಳಪೆ ಸಾಧನೆ ಮಾಡಿದರೆ, 135 ಸ್ಥಾನಗಳಲ್ಲಿ ಗೆಲ್ಲುವುದರೊಂದಿಗೆ ಭಾರೀ ಬಹುಮತ ಗಳಿಸಿರುವ ಕಾಂಗ್ರೆಸ್ ಸರ್ಕಾರ ರಚನೆ ಮಾಡಿದೆ. ಈ ನಡುವೆ, ರಾಜಕೀಯ ತಂತ್ರಗಾರ ಹಾಗೂ ಚುನಾವಣಾ ಚಾಣಕ್ಯ ಎಂದೇ ಕರೆಯಿಸಿಕೊಳ್ಳುವ ಪ್ರಶಾಂತ್ ಕಿಶೋರ್ (Prashant Kishor), ಕರ್ನಾಟಕ ವಿಧಾನಸಭೆ ಚುನಾವಣೆ ಗೆದ್ದ ಖುಷಿಯಲ್ಲಿರುವ ಕಾಂಗ್ರೆಸ್‌ ಪಕ್ಷವನ್ನು ಕುರಿತು ಎಚ್ಚರಿಕೆಯ ಸಂದೇಶವೊಂದನ್ನು ನೀಡಿದ್ದಾರೆ.


ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷ ಸಾಧಿಸಿರುವ ಯಶಸ್ಸಿಗೆ ಖಂಡಿತವಾಗಿ ಅಭಿನಂದಿಸುತ್ತೇನೆ. ಆದರೆ, ವಿಧಾನಸಭೆ ಚುನಾವಣೆಯ ಫಲಿತಾಂಶವನ್ನು ಲೋಕಸಭೆ ಚುನಾವಣೆಯ ಮಾದರಿ ಫಲಿತಾಂಶ ಎಂದು ತಪ್ಪಾಗಿ ಗ್ರಹಿಸದಂತೆ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಿಗೆ ಎಚ್ಚರಿಕೆ ನೀಡಲು ಬಯಸುತ್ತೇನೆ' ಎಂದು ಪ್ರಶಾಂತ್‌ ಕಿಶೋರ್‌ ಹೇಳಿದ್ದಾರೆ.


ಇದನ್ನೂ ಓದಿ: Siddaramaiah- DK Shivakumar: ಸಿದ್ದು ಬಂದ್ರು, ಡಿಕೆಶಿ ಹೋದ್ರು! ‘ಟಗರು-ಬಂಡೆ’ ನಡುವೆ ಮೈಮನಸ್ಸು ವೇದಿಕೆ ಮೇಲೆಯೇ ಬಯಲಾಯ್ತಾ?


ಎಡಗಾಲಿನ ಸ್ನಾಯು ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ರಾಜ್ಯಾದ್ಯಂತ ನಡೆಯುತ್ತಿರುವ ಪಾದಯಾತ್ರೆಗೆ ಅವರು ವಿರಾಮ ನೀಡಿದ್ದು ಅಜ್ಞಾತ ಸ್ಥಳವೊಂದರಲ್ಲಿ ಅವರು ಚೇತರಿಸಿಕೊಳ್ಳುತ್ತಿದ್ದಾರೆ.


ಕಾಂಗ್ರೆಸ್‌ಗೆ ಎಚ್ಚರಿಕೆ ನೀಡಿದ ಪ್ರಶಾಂತ್ ಕಿಶೋರ್:


ಬಿಹಾರದಲ್ಲಿ ಜನ್ ಸೂರಜ್ ಯಾತ್ರೆ ನಡೆಸುತ್ತಿರುವ ಪ್ರಶಾಂತ್ ಕಿಶೋರ್ ಮಾತನಾಡಿ, ಕರ್ನಾಟಕದ ಫಲಿತಾಂಶ ಮುಂಬರುವ ಲೋಕಸಭೆ ಚುನಾವಣೆಯ ದಿಕ್ಸೂಚಿ ಎನ್ನುತ್ತಿರುವ ಕಾಂಗ್ರೆಸ್‌ ಪಕ್ಷಕ್ಕೆ, ಕರ್ನಾಟಕ ವಿಧಾನಸಭೆ ಗೆದ್ದ ಖುಷಿಯಲ್ಲಿ ಬೀಗಬೇಡಿ ಎಂದಿದ್ದಾರೆ.


"2013ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದರೂ, 2014ರ ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಕಡಿಮೆ ಸ್ಥಾನ ಗಳಿಸಿತು.


ಅಲ್ಲದೇ, 2019ರಲ್ಲಿ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ ರಾಜ್ಯಗಳಲ್ಲಿ ಬಿಜೆಪಿ ಸೋಲಿಸಿ ಕಾಂಗ್ರೆಸ್ ಗೆದ್ದರೂ, ಕೆಲವೇ ತಿಂಗಳುಗಳಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಮತ್ತೆ ನೆಲಕಚ್ಚಿತು ಎಂಬುದನ್ನು ಮರೆಯಬಾರದು," ಎಂದು ಪ್ರಶಾಂತ್ ಕಿಶೋರ್ ಗುಡುಗಿದ್ದಾರೆ.


"2012 ರಲ್ಲಿ ಸಮಾಜವಾದಿ ಪಕ್ಷವು ಉತ್ತರ ಪ್ರದೇಶದಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿತ್ತು ಅನ್ನೋದನ್ನ ಇಲ್ಲಿ ಸ್ಮರಿಸಿಕೊಳ್ಳುತ್ತೇನೆ. ಆದರೆ ಎರಡೇ ವರ್ಷಗಳ ನಂತರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಸಿಡಿ ರಾಜ್ಯದಲ್ಲಿ 80 ಸ್ಥಾನಗಳಲ್ಲಿ 73 ಸ್ಥಾನಗಳನ್ನು ಗೆದ್ದುಕೊಂಡಿತು," ಎಂದಿದ್ದಾರೆ.




ದೇಶದ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಮಾತನಾಡಿದ ಪ್ರಶಾಂತ್ ಕಿಶೋರ್, "ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಅಭಿನಂದಿಸುತ್ತೇನೆ. ಆದರೆ, ಇದನ್ನು ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದು ಪರಿಗಣಿಸಬಾರದು. ಗೆದ್ದ ಖುಷಿಯಲ್ಲಿ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಮೈಮರೆಯಬಾರದು," ಎಂದು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.


ಪ್ರಶಾಂತ್ ಕಿಶೋರ್ ಅವರು 2012ರ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರ ಪ್ರಚಾರ ಕಾರ್ಯಕ್ರಮದ ಪ್ರಮುಖ ತಂತ್ರಗಾರರಾಗಿ ಕೆಲಸ ಮಾಡಿದ ಬಳಿಕ ಪ್ರಸಿದ್ಧಿಯಾಗಿದ್ದರು. ಆ ಬಳಿಕ 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಪ್ರಮುಖ ಚುನಾವಣಾ ತಂತ್ರಗಾರನಾಗಿ ಕೆಲಸ ಮಾಡಿದರು.


ಈ ವೇಳೆ ಬಿಜೆಪಿ ಯಶಸ್ವಿ ಪ್ರಯತ್ನದಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಪ್ರಶಾಂತ್ ಕಿಶೋರ್ ಅವರಿಗೆ ಬೇಡಿಕೆ ಹೆಚ್ಚಾಯಿತು. ಬಿಜೆಪಿ ವಾರ್ ರೂಂನಿಂದ ಹೊರಬಂದ ಅವರು, ನಂತರ ಬಿಹಾರದಲ್ಲಿ ನಿತೀಶ್ ಕುಮಾರ್, ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್, ತಮಿಳುನಾಡಿನಲ್ಲಿ ಎಂಕೆ ಸ್ಟಾಲಿನ್, ಆಂಧ್ರಪ್ರದೇಶದಲ್ಲಿ ಜಗನ್‌ಮೋಹನ್ ರೆಡ್ಡಿ, ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಪರ ಚುನಾವಣಾ ತಂತ್ರಗಾರಿಕೆ ರೂಪಿಸಿದ್ದರು.

top videos


    2021ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ನಂತರ ಅವರು ರಾಜಕೀಯ ತಂತ್ರಗಾರಿಕೆ ಕೆಲಸಕ್ಕೆ ವಿದಾಯ ಹೇಳಿದ್ದರು. ಆದರೆ, ಅದಾದ ಬಳಿಕ ಕಾಂಗ್ರೆಸ್‌ ಪಕ್ಷಕ್ಕೆ ಮರುಜೀವ ನೀಡುವ ನಿಟ್ಟಿನಲ್ಲಿ ಮಾಡಿದ ಪ್ರಯತ್ನ ಫಲಕಾರಿಯಾಗದ ಬಳಿಕ ಜನ್‌ ಸೂರಜ್‌ ಅನ್ನು ಆರಂಭಿಸಿ ಅದರ ಪ್ರಚಾರದಲ್ಲಿ ನಿರತರಾಗಿದ್ದಾರೆ.

    First published: