Dog Rape: 20 ವರ್ಷದ ಯುವಕನಿಂದ ನಾಯಿಯ ಮೇಲೆ ಅತ್ಯಾಚಾರ; ಸಿಸಿಟಿವಿಯಲ್ಲಿ ಸೆರೆಯಾಯ್ತು ಕಾಮುಕನ ಕೃತ್ಯ

Mumbai Crime: ಮಹಾರಾಷ್ಟ್ರದ ಮುಂಬೈನಲ್ಲಿ ಹೆಣ್ಣು ನಾಯಿಯ ಮೇಲೆ 20 ವರ್ಷದ ತೌಫೀಕ್ ಅಹಮದ್ ಎಂಬಾತ ಅತ್ಯಾಚಾರ ನಡೆಸಿದ್ದು, ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆತನ ವಿರುದ್ಧ ಎಫ್​ಐಆರ್ ದಾಖಲಿಸಿಕೊಳ್ಳಲಾಗಿದೆ.

ನಾಯಿಯ ಮೇಲೆ ಯುವಕನಿಂದ ಅತ್ಯಾಚಾರ

ನಾಯಿಯ ಮೇಲೆ ಯುವಕನಿಂದ ಅತ್ಯಾಚಾರ

  • Share this:
ಮುಂಬೈ (ಮಾ. 20): ಮಹಿಳೆ, ಬಾಲಕಿ, ಹಸುಗೂಸಿನ ಮೇಲೂ ಲೈಂಗಿಕ ದೌರ್ಜನ್ಯ ನಡೆಸುವ ಮೃಗೀಯ ವರ್ತನೆ ಇನ್ನೂ ಕಡಿಮೆಯಾಗಿಲ್ಲ. ದಿನ ಬೆಳಗಾದರೆ ಒಂದಲ್ಲಾ ಒಂದು ಅತ್ಯಾಚಾರದ ಪ್ರಕರಣಗಳ ಬಗ್ಗೆ ಕೇಳುತ್ತಲೇ ಇರುತ್ತೇವೆ. ಆದರೆ, ಈ ಕಾಮುಕರು ಮನುಷ್ಯರನ್ನು ಮಾತ್ರವಲ್ಲ, ಪ್ರಾಣಿಗಳನ್ನೂ ಬಿಟ್ಟಿಲ್ಲ ಎಂದರೆ ಆಘಾತವಾಗದಿರದು. ಬೀದಿ ನಾಯಿಗಳನ್ನು ತಮ್ಮ ಕಾಮತೃಷೆಗೆ ಬಳಸಿಕೊಳ್ಳುವ ಕೆಲವು ಘಟನೆಗಳು ಈ ಹಿಂದೆ ಬೆಳಕಿಗೆ ಬಂದಿತ್ತು. ಇದೀಗ ಅದೇ ರೀತಿಯ ಮತ್ತೊಂದು ಆಘಾತಕಾರಿ ಘಟನೆ ಬಯಲಾಗಿದೆ.

ಮಹಾರಾಷ್ಟ್ರದ ಮುಂಬೈನಲ್ಲಿ ನಾಯಿಯ ಮೇಲೆ ಯುವಕನೊಬ್ಬ ಅತ್ಯಾಚಾರ ನಡೆಸಿದ್ದು, ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೆಣ್ಣು ನಾಯಿಯೊಂದರ ಮೇಲೆ 20 ವರ್ಷದ ಯುವಕನೊಬ್ಬ ಲೈಂಗಿಕ ದೌರ್ಜನ್ಯ ನಡೆಸಿದ್ದು, ಆತನ ವಿರುದ್ಧ ಎಫ್​ಐಆರ್ ದಾಖಲಿಸಿಕೊಳ್ಳಲಾಗಿದೆ. ಅನೈಸರ್ಗಿಕ ಲೈಂಗಿಕತೆ ನಡೆಸಿದ ಆತನ ವಿರುದ್ಧ ಕೇಸ್ ದಾಖಲಿಸಲಾಗಿದೆ ಎಂದು ಟೈಮ್ಸ್​ ಆಫ್ ಇಂಡಿಯಾ ವರದಿ ಮಾಡಿದೆ.

ಇದನ್ನೂ ಓದಿ: World Sleep Day 2021: ಉತ್ತಮ ಆರೋಗ್ಯಕ್ಕೆ ದಿನಕ್ಕೆ ಎಷ್ಟು ಗಂಟೆ ನಿದ್ರೆ ಅಗತ್ಯ?

ಈ ಬಗ್ಗೆ ಪ್ರಾಣಿ ರಕ್ಷಣಾ ಟ್ರಸ್ಟ್​ ಮುಖ್ಯಸ್ಥೆ ಸವಿತಾ ಮಹಾಜನ್, ಹೆಣ್ಣು ನಾಯಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಯುವಕನ ವಿರುದ್ಧ ವಕೋಲ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ. ಆ ಯುವಕನನ್ನು 20 ವರ್ಷದ ತೌಫೀಕ್ ಅಹಮದ್ ಎಂದು ಗುರುತಿಸಲಾಗಿದೆ. ಕಾರುಗಳ್ಳರ ಸಂಖ್ಯೆ ಹೆಚ್ಚಾಗಿದ್ದರಿಂದ ಆ ಸ್ಥಳದಲ್ಲಿ ಸಿಸಿಟಿವಿ ಅಳಡಿಸಲಾಗಿತ್ತು. ಆ ಸಿಸಿಟಿವಿಯಿಂದ ಈ ಕೃತ್ಯ ಬೆಳಕಿಗೆ ಬಂದಿದೆ ಎಂದು ತಿಳಿಸಿದ್ದಾರೆ.
ಆರೋಪಿ ತೌಫೀಕ್ ಅಹಮದ್ಯು ಸುತ್ತಮುತ್ತಲೂ ಬ್ರೆಡ್ ಮಾರಿಕೊಂಡು ಜೀವನ ನಡೆಸುತ್ತಿದ್ದ. ಆತ ರಾತ್ರಿ ನಾಯಿಯ ಮೇಲೆ ಅತ್ಯಾಚಾರ ನಡೆಸುತ್ತಿರುವುದು ಸಿಸಿಟಿವಿಯಲ್ಲಿ ಸ್ಪಷ್ಟವಾಗಿ ಗೋಚರವಾಗುತ್ತಿದೆ. ತನ್ನ ಮೇಲೆ ಕೇಸ್ ದಾಖಲಾಗಿರುವುದು ಗೊತ್ತಾಗುತ್ತಿದ್ದಂತೆ ಆತ ಮನೆ ಬಿಟ್ಟು ಪರಾರಿಯಾಗಿದ್ದಾನೆ. ಆತನಿಗಾಗಿ ಪೊಲೀಸರು ಹುಡುಕುತ್ತಿದ್ದಾರೆ.
Published by:Sushma Chakre
First published: