ಮೇ 25ರಿಂದ ಆರಂಭವಾಗಲಿದೆ ದೇಶೀಯ ನಾಗರೀಕ ವಿಮಾನಯಾನ ಸೇವೆ; ಹರ್ದೀಪ್‌ ಸಿಂಗ್ ಪುರಿ

ಮಾರಣಾಂತಿಕ ಕೊರೋನಾ ವೈರಸ್‌ ಸಾಮೂದಾಯಿಕವಾಗಿ ಹರಡುವುದನ್ನು ತಡೆಯುವ ಸಲುವಾಗಿ ಕಳೆದ ಮಾರ್ಚ್ 25 ರಿಂದ ದೇಶದಾದ್ಯಂತ ಕೇಂದ್ರ ಸರ್ಕಾರ ಲಾಕ್‌ಡೌನ್ ಘೋಷಣೆ ಮಾಡಿತ್ತು. ಹೀಗಾಗಿ ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನಯಾನವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.

MAshok Kumar | news18-kannada
Updated:May 20, 2020, 5:47 PM IST
ಮೇ 25ರಿಂದ ಆರಂಭವಾಗಲಿದೆ ದೇಶೀಯ ನಾಗರೀಕ ವಿಮಾನಯಾನ ಸೇವೆ; ಹರ್ದೀಪ್‌ ಸಿಂಗ್ ಪುರಿ
ಪ್ರಾತಿನಿಧಿಕ ಚಿತ್ರ.
  • Share this:
ನವ ದೆಹಲಿ (ಮೇ 20); ಲಾಕ್‌ಡೌನ್‌ನಿಂದಾಗಿ ಕಳೆದ ಎರಡು ತಿಂಗಳಿನಿಂದ ಸ್ಥಗಿತವಾಗಿದ್ದ ದೇಶೀಯ ನಾಗರೀಕ ವಿಮಾನಯಾನ ಮೇ 25, 2020 ರಿಂದ ಮತ್ತೆ ಕಾರ್ಯಾಚರಣೆ ಆರಂಭಿಸಲಿದೆ. ಎಂದು ನಾಗರೀಕ ವಿಮಾನಯಾನ ಸಚಿವ ಹರ್ದೀಪ್‌ ಸಿಂಗ್ ಪುರಿ ತಿಳಿಸಿದ್ದಾರೆ.

ಮಾರಣಾಂತಿಕ ಕೊರೋನಾ ವೈರಸ್‌ ಸಾಮೂದಾಯಿಕವಾಗಿ ಹರಡುವುದನ್ನು ತಡೆಯುವ ಸಲುವಾಗಿ ಕಳೆದ ಮಾರ್ಚ್ 25 ರಿಂದ ದೇಶದಾದ್ಯಂತ ಕೇಂದ್ರ ಸರ್ಕಾರ ಲಾಕ್‌ಡೌನ್ ಘೋಷಣೆ ಮಾಡಿತ್ತು. ಹೀಗಾಗಿ ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನಯಾನವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.ಈ ನಡುವೆ ಎರಡನೇ ಹಂತದ ಲಾಕ್‌ಡೌನ್ ಮುಗಿಯುವ ವೇಳೆ ಸ್ಥಳೀಯ ವಿಮಾನ ಸೇವೆ ಆರಂಭಿಸುವುದಾಗಿ ಏರ್‌ ಇಂಡಿಯಾ ತಿಳಿಸಿತ್ತು. ಆದರೆ, ಕಾರಣಾಂತರಗಳಿಂದ ಕೇಂದ್ರ ಸರ್ಕಾರ ಇದಕ್ಕೆ ಅನುಮತಿ ನೀಡಿರಲಿಲ್ಲ. ಈ ನಡುವೆ ಲಾಕ್‌ಡೌನ್‌ ಅನ್ನು ಹಂತ ಹಂತವಾಗಿ ಸಡಿಲಿಕೆ ಮಾಡಲಾಗಿದ್ದು, ಕೇಂದ್ರ ವಿಮಾನಯಾನ ಸಚಿವಾಲಯ ವಿಮಾನ ಸೇವೆ ಆರಂಭಕ್ಕೆ ಮುಂದಾಗಿದೆ.

ಈ ಕುರಿತು ಇಂದು ಟ್ವೀಟ್ ಮೂಲಕ ಮಾಹಿತಿ ನೀಡಿರುವ ಕೇಂದ್ರ ನಾಗರೀಕ ವಿಮಾನಯಾನ ಸಚಿವ ಹರ್ದೀಪ್‌ ಸಿಂಗ್ ಪುರಿ, "2020 ರ ಮೇ 25 ರಿಂದ ದೇಶೀಯ ನಾಗರಿಕ ವಿಮಾನಯಾನ ಕಾರ್ಯಾಚರಣೆಗಳು ಆರಂಭವಾಗಲಿದ್ದು, ಹಂತ ಹಂತವಾಗಿ ವಿಮಾನಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು. ಹೀಗಾಗಿ ಎಲ್ಲಾ ವಿಮಾನ ನಿಲ್ದಾಣಗಳು ಮತ್ತು ವಿಮಾನವಾಹಕ ನೌಕೆಗಳು ಮೇ 25 ರಿಂದ ಕಾರ್ಯಾಚರಣೆಗೆ ಸಿದ್ಧವಾಗುವಂತೆ ತಿಳಿಸಲಾಗುತ್ತಿದೆ. ಪ್ರಯಾಣಿಕರ ಸಂಚಾರಕ್ಕಾಗಿ ಎಸ್‌ಒಪಿಗಳನ್ನು ಸಹ ಪ್ರತ್ಯೇಕವಾಗಿ ನೀಡಲಾಗುತ್ತಿದೆ" ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಚೀನಾದಿಂದ ತೈವಾನ್‌ ಬೇರ್ಪಡಿಸುವ ಯಾವ ಪ್ರಯತ್ನವನ್ನು ನಾವು ಸಹಿಸುವುದಿಲ್ಲ; ಗುಡುಗಿದ ಡ್ಯ್ರಾಗನ್ ರಾಷ್ಟ್ರ
First published: May 20, 2020, 5:34 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading