news18-kannada Updated:October 3, 2020, 10:42 AM IST
ಡೊನಾಲ್ಡ್ ಟ್ರಂಪ್
ವಾಷಿಂಗ್ಟನ್(ಅ.03): ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಕೊರೋನಾ ಸೋಂಕು ತಗುಲಿದ್ದು, ಶುಕ್ರವಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಟ್ರಂಪ್ ಅವರನ್ನು ಮಿಲಿಟಿರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಕೋವಿಡ್ -19 ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಪ್ರಾಯೋಗಿಕ ಕೋವಿಡ್ -19 ಚಿಕಿತ್ಸೆಯನ್ನು ನೀಡಲಾಗುತ್ತಿದ್ದು, ನಾನು ಚೇತರಿಸಿಕೊಳ್ಳುತ್ತಿದ್ದೇನೆ ಎಂದು ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ. ಟ್ರಂಪ್ ಜೊತೆಗೆ ಅವರ ಪತ್ನಿ ಮೆಲಾನಿಯಾ ಟ್ರಂಪ್ ಗೂ ಸಹ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಶುಕ್ರವಾರ ಡೊನಾಲ್ಡ್ ಟ್ರಂಪ್ ಹಾಗೂ ಮೊದಲ ಮಹಿಳೆ ಮೆಲಾನಿಯಾ ಟ್ರಂಪ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಕೊರೋನಾ ಪಾಸಿಟಿವ್ ಬಂದ ಬಳಿಕ ಸಾರ್ವಜನಿಕವಾಗಿ ಕಾಣಿಸಿಕೊಂಡ ಡೊನಾಲ್ಡ್ ಟ್ರಂಪ್, ಶುಕ್ರವಾರ ಸಂಜೆ ಶ್ವೇತಭವನದಿಂದ ಹೊರನಡೆದರು. ಮಾಸ್ಕ್ ಧರಿಸಿ, ಹೆಲಿಕಾಪ್ಟರ್ ಮೂಲಕ ವಾಷಿಂಗ್ಟನ್ಗೆ ತೆರಳಿದರು.
ಶ್ವೇತ ಭವನದೊಳಗೆ ರೆಕಾರ್ಡ್ ಮಾಡಲಾದ ಹಾಗೂ ಟ್ವಿಟರ್ನಲ್ಲಿ ಪೋಸ್ಟ್ ಮಾಡಲಾಗಿರುವ 18 ಸೆಕೆಂಡ್ಗಳ ವಿಡಿಯೋದಲ್ಲಿ, ಡೊನಾಲ್ಡ್ ಟ್ರಂಪ್ ಅವರು ಆಸ್ಪತ್ರೆಗೆ ದಾಖಲಾಗುತ್ತಿರುವ ವಿಷಯವನ್ನು ಹೇಳಿದ್ದರು. ಜೊತೆಗೆ ನಾನು ಉತ್ತಮ ಕೆಲಸ ಮಾಡುತ್ತಿದ್ದೇನೆ ಎಂದು ಭಾವಿಸಿದ್ದೇನೆ ಎಂದಿದ್ದರು. ಜೊತೆಗೆ ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಕೂಡ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದರು.
ಆನೇಕಲ್ನಲ್ಲಿ ಉತ್ತಮ ಮಳೆ; ರಾಗಿ ಕಣಜ ತುಂಬುವ ನಿರೀಕ್ಷೆಯಲ್ಲಿ ಅನ್ನದಾತ
ಟ್ರಂಪ್ ಮುಂದಿನ ಕೆಲ ದಿನಗಳವರೆಗೆ ವಾಲ್ಟರ್ ರೀಡ್ನಲ್ಲಿರುವ ಅಧ್ಯಕ್ಷೀಯ ಕಚೇರಿಯಿಂದ ಕೆಲಸ ಮಾಡುವಂತೆ ವೈದ್ಯಕೀಯ ತಜ್ಞರು ಸೂಚನೆ ನೀಡಿದ್ದಾರೆ ಎಂದು ಪತ್ರಿಕಾ ಕಾರ್ಯದರ್ಶಿ ಕೇಯ್ಲಿ ಮೆಕ್ ಎನಾನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಡೊನಾಲ್ಡ್ ಟ್ರಂಪ್ ಅವರಿಗೆ ಕಾಣಿಸಿಕೊಂಡಿರುವ ಮೃದು(ಮೈಲ್ಡ್) ಲಕ್ಷಣಗಳಿಂದ ಆರೋಗ್ಯ ಹದಗೆಡದಂತೆ ನೋಡಿಕೊಳ್ಳಲು ಪ್ರಯತ್ನಿಸಲಾಗುತ್ತಿದೆ.
ಅಮೆರಿಕ ಅಧ್ಯಕ್ಷೀಯ ಚುನಾವಣೆಯು ನವೆಂಬರ್ 3ರಂದು ನಡೆಯಲಿದ್ದು, ಇನ್ನು ಕೇವಲ ಒಂದು ತಿಂಗಳಷ್ಟೇ ಬಾಕಿ ಇದೆ. ಹೀಗಿರುವಾಗಲೇ ಡೊನಾಲ್ಡ್ ಟ್ರಂಪ್ ಅವರಿಗೆ ಕೊರೋನಾ ಸೋಂಕು ತಗುಲಿರುವುದು ಆತಂಕಕ್ಕೆ ಕಾರಣವಾಗಿದೆ.
ಟ್ರಂಪ್ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದ್ದು, ಅವರು ತುಂಬಾ ಉತ್ಸಾಹದಲ್ಲಿದ್ದಾರೆ. ಜೊತೆಗೆ ಸ್ಟ್ರಾಂಗ್ ಕೂಡ ಇದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
Published by:
Latha CG
First published:
October 3, 2020, 10:42 AM IST