ಅಮೆರಿಕದಲ್ಲಿ ಗಾಂಧಿ ಪ್ರತಿಮೆ ಧ್ವಂಸ: ಇದೊಂದು ನಾಚಿಕೆಗೇಡಿನ ಸಂಗತಿ ಎಂದ ಡೊನಾಲ್ಡ್​ ಟ್ರಂಪ್ ಆಕ್ರೋಶ​​​​

ಹೌದು, ಭಾರತೀಯ ರಾಯಭಾರಿ ಕಚೇರಿ ಬಳಿ ಪಾರ್ಕ್​​ನಲ್ಲಿರುವ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ಈ ಘಟನೆ ಜೂನ್​​​ 2 ಅಥವಾ 3ನೇ ತಾರೀಕಿನಂದು ನಡೆದಿರಬಹುದು ಎನ್ನಲಾಗುತ್ತಿದೆ. ಈ ಸಂಬಂಧ ಸ್ಥಳೀಯ ಕಾನೂನು ಜಾರಿ ಏಜೆನ್ಸಿಗೆ ಭಾರತೀಯ ರಾಯಭಾರಿ ಅಧಿಕಾರಿಗಳು ದೂರು ನೀಡಿದ್ಧಾರೆ.

ಡೊನಾಲ್ಡ್​ ಟ್ರಂಪ್

ಡೊನಾಲ್ಡ್​ ಟ್ರಂಪ್

 • Share this:
  ವಾಷಿಂಗ್ಟನ್(ಜೂ.09): ಅಮೆರಿಕದಲ್ಲಿ ಜಾರ್ಜ್ ಫ್ಲಾಯ್ಡ್ ಎಂಬ ಕಪ್ಪು ಜನಾಂಗೀಯ ವ್ಯಕ್ತಿಯನ್ನು ಪೊಲೀಸರು ಸಾಯಿಸಿದ್ದಾರೆ ಎಂದು ಆರೋಪಿಸಿ ಬೃಹತ್ ಪ್ರತಿಭಟನೆಗಳು ನಡೆಯುತ್ತಿವೆ. ಲಕ್ಷಾಂತರ ಜನ ಬೀದಿಗಿಳಿದು ದೊಡ್ಡ ಸಂಖ್ಯೆಯಲ್ಲಿ ಹೋರಾಟ ಮಾಡುತ್ತಿದ್ದಾರೆ. ಹೀಗಿರುವಾಗಲೇ ಯಾರೋ ಕಿಡಿಗೇಡಿಗಳು ಮಹಾತ್ಮ ಗಾಂಧಿ ಪ್ರತಿಮೆಯನ್ನು ವಿರೂಪಗೊಳಿಸಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಇದನ್ನು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಖಂಡಿಸಿದ್ದಾರೆ.

  ಹೌದು, ಭಾರತೀಯ ರಾಯಭಾರಿ ಕಚೇರಿ ಬಳಿ ಪಾರ್ಕ್​​ನಲ್ಲಿರುವ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ಈ ಘಟನೆ ಜೂನ್​​​ 2 ಅಥವಾ 3ನೇ ತಾರೀಕಿನಂದು ನಡೆದಿರಬಹುದು ಎನ್ನಲಾಗುತ್ತಿದೆ. ಈ ಸಂಬಂಧ ಸ್ಥಳೀಯ ಕಾನೂನು ಜಾರಿ ಏಜೆನ್ಸಿಗೆ ಭಾರತೀಯ ರಾಯಭಾರಿ ಅಧಿಕಾರಿಗಳು ದೂರು ನೀಡಿದ್ಧಾರೆ.

  ಇನ್ನು, ಮಹಾತ್ಮ ಗಾಂಧಿಯವರ ಪ್ರತಿಮೆ ಧ್ವಂಸ ಪ್ರಕರಣ ಸಂಬಂಧ ಶ್ವೇತಭವನದಲ್ಲಿ ಪ್ರತಿಕ್ರಿಯಿಸಿರುವ ಡೊನಾಲ್ಡ್ ಟ್ರಂಪ್, ಇದೊಂದು ನಾಚಿಕೆಗೇಡಿನ ಸಂಗತಿ. ಈ ಪ್ರಕರಣ ಸಂಬಂಧ ತನಿಖೆ ನಡೆಸಿ ಎಂದು ಅಮೆರಿಕಾದ ಸ್ಟೇಟ್ ಡಿಪಾರ್ಟ್ ಮೆಂಟ್ ಮತ್ತು ಸ್ಥಳೀಯ ಪೊಲೀಸರಿಗೆ ಭಾರತೀಯ ರಾಯಭಾರಿ ಅಧಿಕಾರಿಗಳು ದೂರು ಸಲ್ಲಿಸಿದ್ದಾರೆ. ಪ್ರಕರಣ ತನಿಖೆಗೆ ನಾನು ಸೂಚನೆ ನೀಡಿದ್ದೇನೆ ಎಂದರು.

  ಇದನ್ನೂ ಓದಿ: ಕರ್ನಾಟಕದಲ್ಲಿ ಬಹುತೇಕ ಆಗಸ್ಟ್​​​ ನಂತರ ಶಾಲೆಗಳ ಆರಂಭ - ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಸ್ಪಷ್ಟನೆ

  ಸದ್ಯ ಅಮೆರಿಕಾದ ಸ್ಟೇಟ್ ಡಿಪಾರ್ಟ್ ಮೆಂಟ್, ಮೆಟ್ರೋಪಾಲಿಟಿನ್ ಪೊಲೀಸ್ ಮತ್ತು ನ್ಯಾಷನಲ್ ಪಾರ್ಕ್ ಸರ್ವಿಸ್ ಈ ಪ್ರಕರಣ ತನಿಖೆ ನಡೆಸುತ್ತಿದೆ. ಹಾಗೆಯೇ ಮತ್ತದೇ ಉದ್ಯಾನವನದಲ್ಲಿ ಗಾಂಧಿ ಪ್ರತಿಮೆ ಪುನರ್ ಸ್ಥಾಪಿಸುವ ನಿಟ್ಟಿನಲ್ಲಿ ಭಾರತೀಯ ರಾಯಭಾರಿ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ.
  First published: