Draupadi Murmu: ದ್ರೌಪದಿ ಮುರ್ಮು, ಬಿಜೆಪಿಯ ರಾಷ್ಟ್ರಪತಿ ಅಭ್ಯರ್ಥಿ; ಮಹಿಳೆಗೆ ಮಣೆ ಹಾಕಿದ ಬಿಜೆಪಿ

President Election: ಬಿಜೆಪಿಯಿಂದ ರಾಷ್ಟ್ರಪತಿ ಹುದ್ದೆಗೆ ಜಾರ್ಖಂಡ್‌ನ ಮಾಜಿ ರಾಜ್ಯಪಾಲ ದ್ರೌಪದಿ ಮುರ್ಮು ಆಯ್ಕೆಯಾಗಿದ್ದಾರೆ

ದ್ರೌಪದಿ ಮುರ್ಮು

ದ್ರೌಪದಿ ಮುರ್ಮು

 • Share this:
  ಬಹು ಕುತೂಹಲ ಹುಟ್ಟಿಸಿದ ಬಿಜೆಪಿ ರಾಷ್ಟ್ರಪತಿ ಅಭ್ಯರ್ಥಿ (President Election) ಹೆಸರು ಹೊರಬಿದ್ದಿದೆ.  ಬಿಜೆಪಿಯಿಂದ ರಾಷ್ಟ್ರಪತಿ ಹುದ್ದೆಗೆ ((President Candidate) ಜಾರ್ಖಂಡ್‌ನ ಮಾಜಿ ರಾಜ್ಯಪಾಲ ದ್ರೌಪದಿ ಮುರ್ಮು (Draupadi Murmu)  ಆಯ್ಕೆಯಾಗಿದ್ದಾರೆ. ಒಡಿಶಾದ ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು ಅವರು ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ  (Yashwant Sinha) ವಿರುದ್ಧ ಸ್ಪರ್ಧಿಸಲಿದ್ದಾರೆ.  ದ್ರೌಪದಿ ಮುರ್ಮು ಅವರು ಪರಿಶಿಷ್ಟ ಬುಡಕಟ್ಟು ಜಾತಿ ಸಮುದಾಯಕ್ಕೆ ಸೇರಿದವಳು. ಅವರು ಭಾರತೀಯ ಜನತಾ ಪಕ್ಷದ ಅವರು ಐದು ವರ್ಷಗಳ ಅವಧಿಯನ್ನು (2015-2021) ಪೂರ್ಣಗೊಳಿಸಿದ ಜಾರ್ಖಂಡ್‌ನ ಮೊದಲ ಗವರ್ನರ್ ಆಗಿದ್ದಾರೆ.

  ಕಾಂಗ್ರೆಸ್ ಸೇರಿ ಎಲ್ಲ ವಿಪಕ್ಷಗಳು ಯಶವಂತ್ ಸಿನ್ಹಾ ಅವರ ಹೆಸರನ್ನು ರಾಷ್ಟ್ರಪತಿ ಅಭ್ಯರ್ಥಿ ಸ್ಥಾನಕ್ಕೆ ಸೂಚಿಸಿದ್ದಾರೆ. ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ (NDA Government) ಕೇಂದ್ರ ಸಚಿವರಾಗಿ ಜವಾಬ್ದಾರಿ ನಿರ್ವಹಿಸಿದ್ದ ಯಶವಂತ್ ಸಿನ್ಹಾ ವಿರೋಧ ಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.

  ದ್ರೌಪದಿ ಮುರ್ಮು ಜೀವನದಲ್ಲಿ ನಡೆದಿತ್ತು ಕಹಿ ಘಟನೆ
  ದ್ರೌಪದಿ ಮುರ್ಮು ಶ್ಯಾಮ್ ಚರಣ್ ಮುರ್ಮು ಅವರನ್ನು ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಪುತ್ರರು ಮತ್ತು ಒಬ್ಬ ಪುತ್ರಿ ಇದ್ದರು. ಆದರೆ ದ್ರೌಪದಿ ಮುರ್ಮು ಅವರ ಜೀವನದಲ್ಲಿ ನಡೆದ ಕೆಲವು ದುರಂತಗಳಿಂದ ಅವರ ಪತಿ ಮತ್ತು ಇಬ್ಬರು ಪುತ್ರರು ವಿಧಿವಶರಾಗಿದ್ದಾರೆ. 

  ಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ (President Ramnath Kovind) ಅವರ ಅವಧಿ ಜುಲೈ 24ರಂದು ಮುಕ್ತಾಯವಾಗಲಿದೆ. ಜುಲೈ 18ರಂದು ಹೊಸ ರಾಷ್ಟ್ರಪತಿ ಚುನಾವಣೆ ನಡೆಯಲಿದೆ.

  ಇದನ್ನೂ ಓದಿ: PM Modi Childhood Friend: ಪ್ರಧಾನಿ ಮೋದಿ ಬಾಲ್ಯದ ಗೆಳೆಯ ಅಬ್ಬಾಸ್ ಈಗೆಲ್ಲಿದ್ದಾರೆ? ಮೋದಿಗೆ ಗೆಳೆಯನ ನೆನಪಿದೆಯೇ?

  ಒಗ್ಗಟ್ಟಿನಲ್ಲಿ ಬಲವಿದೆ ಎಂದ ವಿಪಕ್ಷಗಳು
  ರಾಷ್ಟ್ರಪತಿ ಚುನಾವಣೆಗೆ ಯಶವಂತ್ ಸಿನ್ಹಾ ಅವರ ಹೆಸರನ್ನು ವಿರೋಧ ಪಕ್ಷದ ಅಭ್ಯರ್ಥಿಯಾಗಿ  ಇಂದು ಹೆಸರಿಸಲಾಗಿದೆ. ಜುಲೈ ತಿಂಗಳಲ್ಲಿ ನಡೆಯಲಿರುವ ಚುನಾವಣೆಗೆ ಬಿಜೆಪಿ ಇನ್ನೂ ತನ್ನ ಅಭ್ಯರ್ಥಿಯ ಹೆಸರನ್ನು ಪ್ರಕಟಿಸಿಲ್ಲ. ಬಿಜೆಪಿ ಯಾರನ್ನು ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲಿದೆ ಎಂಬುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಸದ್ಯ ಕಾಂಗ್ರೆಸ್ ಸೇರಿ ಎಲ್ಲ ವಿರೋಧ ಪಕ್ಷಗಳೂ ಸಹ ಏಕಮತದಿಂದ ಯಶವಂತ್ ಸಿನ್ಹಾ ಅವರನ್ನು ಕಣಕ್ಕಿಳಿಸಿವೆ.

  ಇದನ್ನೂ ಓದಿ: President Poll: ಯಶವಂತ್ ಸಿನ್ಹಾ ವಿರೋಧ ಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ; ಒಗ್ಗಟ್ಟಿನಲ್ಲಿ ಬಲವಿದೆ ಎಂದ ವಿಪಕ್ಷಗಳು

  ಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ ನಾವು ಸಾಮಾನ್ಯ ಅಭ್ಯರ್ಥಿಯನ್ನು ಆಯ್ಕೆ ಮಾಡಲು ನಿರ್ಧರಿಸಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ಮಣಿಸಲು ಒಗ್ಗಟ್ಟಾಗಿ ಒಂದೇ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದ್ದೇವೆ. ಇಂದು ನಡೆದ ಸಭೆಯಲ್ಲಿ ನಾವು ಯಶವಂತ್ ಸಿನ್ಹಾ ಅವರನ್ನು ಸಾಮಾನ್ಯ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದೇವೆ. ನಾವು ಎಲ್ಲಾ ರಾಜಕೀಯ ಪಕ್ಷಗಳಿಗೆ ಯಶವಂತ್ ಸಿನ್ಹಾ ಅವರಿಗೆ ಮತ ನೀಡುವಂತೆ ಮನವಿ ಮಾಡುತ್ತೇವೆ ಎಂದು ಕಾಂಗ್ರೆಸ್​ನ ಸಂವಹನ ವಿಭಾಗದ ಮುಖ್ಯಸ್ಥ ಜೈರಾಮ್ ರಮೇಶ್ ಹೇಳಿದ್ದಾರೆ.

  ಶರದ್ ಪವಾರ್ ಸ್ಪರ್ಧಿಸಲ್ಲ
  ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಬೆಂಬಲಿತ ಅಭ್ಯರ್ಥಿಯಾಗಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗಿತ್ತು. ಇಷ್ಟು ದಿನ ಶರದ್ ಪವಾರ್ ರಾಷ್ಟ್ರಪತಿ ಅಭ್ಯರ್ಥಿ ಎಂದೇ ಬಿಂಬಿತವಾಗುತ್ತಿತ್ತು. ಆದರೆ "ನಾನು ರಾಷ್ಟ್ರಪತಿ ಚುನಾವಣೆಯ ರೇಸ್‌ನಲ್ಲಿ ಇಲ್ಲ, ನಾನು ರಾಷ್ಟ್ರಪತಿ ಹುದ್ದೆಗೆ ವಿರೋಧ ಪಕ್ಷದ ಅಭ್ಯರ್ಥಿಯಾಗುವುದಿಲ್ಲ" ಅಂತ 81 ವರ್ಷದ ಮಾಜಿ ರಕ್ಷಣಾ ಸಚಿವ, ಹಿರಿಯ ರಾಜಕಾರಣಿ ಶರದ್ ಪವಾರ್ ಹೇಳಿದ್ದಾರೆ.
  Published by:guruganesh bhat
  First published: