President of India: 15ನೇ ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ ದ್ರೌಪದಿ ಮುರ್ಮು

ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅಧಿಕಾರ ಸ್ವೀಕಾರ

ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅಧಿಕಾರ ಸ್ವೀಕಾರ

ಸುಪ್ರೀಂ ಕೋರ್ಟ್ (Supreme Court) ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ (NV Ramana) ದ್ರೌಪದಿ ಮುರ್ಮು ಅವರಿಗೆ ಇಂದು ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಬೋಧಿಸಿದರು. ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿದಂತೆ ಪ್ರಮುಖರು ಹಾಜರಿದ್ದರು.

ಮುಂದೆ ಓದಿ ...
  • Share this:

ದ್ರೌಪದಿ ಮುರ್ಮು (Draupadi Murmur) ಅವರು ಭಾರತದ 15 ನೇ ರಾಷ್ಟ್ರಪತಿಯಾಗಿ (15th President of India) ಪ್ರಮಾಣವಚನ ಸ್ವೀಕರಿಸಿದ್ದಾರೆ. ಸುಪ್ರೀಂ ಕೋರ್ಟ್ (Supreme Court) ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ (NV Ramana) ದ್ರೌಪದಿ ಮುರ್ಮು ಅವರಿಗೆ ಇಂದು ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಬೋಧಿಸಿದರು. ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರ ಸಚಿವರು, ಸಂಸದರು ಮತ್ತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಸಮಾರಂಭದಲ್ಲಿ ಭಾಗವಹಿಸಿದ್ದರು.
ಜನರ ಆಶೀರ್ವಾದದಿಂದ ಇಲ್ಲಿವರೆಗೆ ಪ್ರಯಾಣ


ಇದೇ ವೇಳೆ ದೇಶದ ಜನರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಧನ್ಯವಾದ ಅರ್ಪಿಸಿದ್ದಾರೆ. ದೇಶದ ಜನರ ಆಶೀರ್ವಾದದಿಂದ ಇಲ್ಲಿವರೆಗೆ ಪ್ರಯಾಣ ನಡೆಯುತ್ತಿದೆ. ನನ್ನ ಪ್ರಯಾಣ ದೇಶದ ಕೋಟ್ಯಾಂತರ ಮಹಿಳೆಯರು ಮತ್ತು ಯುವತಿಯರ ಕನಸಿನ ಶಕ್ತಿ ನನ್ನ ಜೊತೆ ಇದೆ. ಶತಮಾನಗಳಿಂದ ವಂಚಿತರಾದವರು, ಅಭಿವೃದ್ಧಿಯ ಲಾಭದಿಂದ ದೂರವಿರುವವರು, ಬಡವರು, ದಲಿತರು, ಹಿಂದುಳಿದವರು ಮತ್ತು ಬುಡಕಟ್ಟು ಜನಾಂಗದವರು ನನ್ನಲ್ಲಿ ತಮ್ಮ ಪ್ರತಿಬಿಂಬವನ್ನು ಕಾಣುತ್ತಿರುವುದು ನನಗೆ ತುಂಬಾ ತೃಪ್ತಿ ತಂದಿದೆ ಅಂತ ಹೇಳಿದ್ದಾರೆ.


“ಇದು ಪ್ರಜಾಪ್ರಭುತ್ವ ಹುದ್ದೆಯ ಶಕ್ತಿಯಾಗಿದೆ”


ಬಡವರ ಮನೆಯಲ್ಲಿ ಜನಿಸಿದ ಹೆಣ್ಣು ಮಗಳು ದೂರದ ಬುಡಕಟ್ಟು ಪ್ರದೇಶದಲ್ಲಿ ಹುಟ್ಟಿ ಭಾರತದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು ತಲುಪುವುದು ನಮ್ಮ ಪ್ರಜಾಪ್ರಭುತ್ವದ ಶಕ್ತಿಯಾಗಿದೆ ಅಂತ ಅವರು ಅಭಿಪ್ರಾಯಪಟ್ಟಿದ್ದಾರೆ. ನಾನು ಬುಡಕಟ್ಟು ಸಮಾಜಕ್ಕೆ ಸೇರಿದವನು, ಮತ್ತು ನಾನು ವಾರ್ಡ್ ಕೌನ್ಸಿಲರ್‌ನಿಂದ ಭಾರತದ ರಾಷ್ಟ್ರಪತಿಯಾಗುವವರೆಗೆ ಹೋಗಲು ಅವಕಾಶವನ್ನು ಪಡೆದಿದ್ದೇನೆ. ಇದು ಪ್ರಜಾಪ್ರಭುತ್ವದ ತಾಯಿಯಾದ ಭಾರತದ ಹಿರಿಮೆ ಅಂತ ಶ್ಲಾಘಿಸಿದ್ದಾರೆ.


ಇದನ್ನೂ ಓದಿ: Draupadi Murmu: ದ್ರೌಪದಿ ಮುರ್ಮು ಯಾರು? ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ಹಿನ್ನೆಲೆ ಇಲ್ಲಿದೆ


“ನನ್ನ ಜವಾಬ್ದಾರಿ ಹೆಚ್ಚಾಗಿದೆ”


ಮುಂದಿನ 25 ವರ್ಷಗಳ ಕಾಲ ಭಾರತ ತನ್ನ ದೃಷ್ಟಿಯನ್ನು ಸಾಧಿಸಲು ಸಜ್ಜಾಗುತ್ತಿರುವ ಇಂತಹ ಐತಿಹಾಸಿಕ ಸಮಯದಲ್ಲಿ ನನಗೆ ಈ ಜವಾಬ್ದಾರಿಯನ್ನು ನೀಡಿರುವುದು ದೊಡ್ಡ ಸೌಭಾಗ್ಯ ಅಂತ ಇದೇ ವೇಳೆ ದ್ರೌಪದಿ ಮುರ್ಮು ನುಡಿದರು.


ನೂತನ ರಾಷ್ಟ್ರಪತಿಗಳಿಗೆ ಗೌರವ


ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ನಡೆದ ಸಮಾರಂಭದ ಸಮಾರೋಪ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳು 'ರಾಷ್ಟ್ರಪತಿ ಭವನ'ಕ್ಕೆ ತೆರಳಲಿದರೆ, ಇಂಟರ್ ಸರ್ವೀಸ್ ಗಾರ್ಡ್ ಆಫ್ ಆನರ್' ನೀಡಿ ನಿರ್ಗಮಿಸುವ ರಾಷ್ಟ್ರಪತಿಗಳಿಗೆ ಗೌರವ ವಂದನೆ ಸಲ್ಲಿಸಲಾಯಿತು.


ಮಹಾತ್ಮಾ ಗಾಂಧಿ ಸ್ಮಾರಕಕ್ಕೆ ಗೌರವ


ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ದ್ರೌಪದಿ ಮುರ್ಮು ಅವರು ರಾಜ್ ಘಾಟ್‌ನಲ್ಲಿರುವ ಮಹಾತ್ಮ ಗಾಂಧಿ ಅವರ ಸ್ಮಾರಕಕ್ಕೆ ಗೌರವ ವಂದನೆಯನ್ನು ಸಲ್ಲಿಸಿ ಬಳಿಕ ರಾಜಭವನಕ್ಕೆ ಆಗಮಿಸಿದ್ದರು. ಇದಕ್ಕೂ ಮುನ್ನ ರಾಷ್ಟ್ರಪತಿ ಭವನದಲ್ಲಿ ನಿರ್ಗಮಿತ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಹಾಗು ಅವರ ಕುಟುಂಬಸ್ಥರನ್ನು ಭೇಟಿ ಮಾಡಿದರು. ರಾಷ್ಟ್ರಪತಿ ಕೋವಿಂದ್‌ ಹಾಗೂ ಅವರ ಪತ್ನಿ ಹೂಗುಚ್ಛ  ನೀಡಿ ದ್ರೌಪದಿ ಮುರ್ಮು ಅವರನ್ನು ಸ್ವಾಗತಿಸಿದರು.


ಇದನ್ನೂ ಓದಿ: President of India: ರಾಷ್ಟ್ರಪತಿ ಹುದ್ದೆ ಎಷ್ಟು ಮಹತ್ವದ್ದು? ಅವರ ಸಂಬಳ, ಸವಲತ್ತುಗಳೇನು?


ಕೋವಿಂದ್, ಮೋದಿ ಸೇರಿ ಗಣ್ಯರ ಉಪಸ್ಥಿತಿ


ಇನ್ನು ನೂತನ ರಾಷ್ಟ್ರಪತಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಸಚಿವರು, ರಾಜ್ಯಪಾಲರು, ಮುಖ್ಯಮಂತ್ರಿಗಳು, ರಾಜತಾಂತ್ರಿಕ ನಿಯೋಗಗಳ ಮುಖ್ಯಸ್ಥರು, ಸಂಸತ್ತಿನ ಸದಸ್ಯರು, ಸರ್ಕಾರಿ ನಾಗರಿಕ ಮತ್ತು ಮಿಲಿಟರಿ ಅಧಿಕಾರಿಗಳ ಮುಖ್ಯಸ್ಥರು ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

First published: