DRDO Recruitment 2020: ಡಿಆರ್ಡಿಒ (ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ) ಹೈದರಾಬಾದ್ನಲ್ಲಿರುವ ಸಂಶೋಧನ ಕೇಂದ್ರದಲ್ಲಿ (ಆರ್ಸಿಐ) ಖಾಲಿ ಇರುವ ನಾಲ್ಕು ರಿಸರ್ಚ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅಧಿಕೃತ ವೆಬ್ಸೈಟ್ಗೆ ತೆರಳಿ ಅಧಿಸೂಚನೆಗಳನ್ನು ಓದಿ ನಂತರ ಅರ್ಜಿ ಸಲ್ಲಿಸಬೇಕಾಗಿ ತಿಳಿಸಿದೆ. ಸೆಪ್ಟೆಂಬರ್ 28ರವರೆಗೆ ಅರ್ಜಿಸಲ್ಲಿಸಲು ಸಮಯವಕಾಶವನ್ನು ನೀಡಿದೆ.
ವಿದ್ಯಾರ್ಹತೆ: ಡಿಆರ್ಡಿಒನಲ್ಲಿರುವ ಆರ್ಸಿಐ (ರಿಸರ್ಚ್ ಸೆಂಟ್ರಲ್ ಇಮ್ರಾತ್)ನಲ್ಲಿ ಖಾಲಿ ಇರುವ ರಿಸರ್ಚ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಭೌತಶಾಸ್ತ್ರದಲ್ಲಿ ಎಮ್ಎಸ್ಸಿ, ಲೇಸರ್ ಭೌತಶಾಸ್ತ್ರ ಮಾಡಿರಬೇಕು. ಜೊತೆಗೆ ಸಂಬಂಧಿಸಿದ ಕ್ಷೇತ್ರದಲ್ಲಿ ನಾಲ್ಕು ವರ್ಷ ಸಂಶೋಧನಾ ಅನುಭವ ಹೊಂದಿರಬೇಕು.
ಆಯ್ಕೆ ಪ್ರಕ್ರಿಯೆ:
ವಿಡಿಯೋ ಸಂದರ್ಶನ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ನಡೆಸಲಾಗುತ್ತದೆ.
ವೇತನದ ವಿವರ:
ಆಯ್ಕೆಯಾದ ಅಭ್ಯರ್ಥಿಗಳು 54 ಸಾವಿರ ರೂ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ:
ಆರ್ಸಿಐನಲ್ಲಿರುವ ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್
rcilab.in ಗೆ ಭೇಟಿ ನೀಡುವ ಮೂಲಕ ಅಲ್ಲಿ ನೀಡಲಾಡಗಿರುವ ಅಧಿಸೂಚನೆಯನ್ನು ಓದಿ ಅರ್ಜಿ ಸಲ್ಲಿಸಬಹುದಾಗಿದೆ. ಸೆಪ್ಟೆಂಬರ್ 28 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 28,2020
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ