ನವ ದೆಹಲಿ (ಸೆಪ್ಟೆಂಬರ್ 24); ಡ್ರಗ್ಸ್ ಜಾಲದ ಜೊತೆಗೆ ನಂಟು ಹೊಂದಿದ್ದಾರೆ ಎಂಬ ಆರೋಪದ ಮೇಲೆ ಬಂಧಿತರಾಗಿರುವ ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಮತ್ತು ಅವರ ಸಹೋದರ ಶೋಯಿಕ್ ಅವರ ಜಾಮೀನು ಅರ್ಜಿಗಳನ್ನು ಮುಂದಿನ ಮಂಗಳವಾರ ವಿಚಾರಣೆ ನಡೆಸಲಾಗುವುದು ಎಂದು ಬಾಂಬೆ ಹೈಕೋರ್ಟ್ ಇಂದು ತಿಳಿಸಿದೆ. ಈ ಮೂಲಕ ಬಾಂಬೆ ಹೈಕೋಟ್ರ್ ಇದು ಎರಡನೇ ಬಾರಿಗೆ ನಟಿಯ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದೂಡಿದಂತಾಗಿದೆ. ನಟ ಸುಶಾಂತ್ ಸಿಂಗ್ ರಜಪೂತ್ ತನಿಖೆಗೆ ಸಂಬಂಧಿಸಿದಂತೆ ಡ್ರಗ್ಸ್ ಆರೋಪದ ಮೇಲೆ ಇಬ್ಬರನ್ನು ಈ ತಿಂಗಳ ಆರಂಭದಲ್ಲೇ ಬಂಧಿಸಲಾಗಿದ್ದು, ಅವರನ್ನು ಅಕ್ಟೋಬರ್ 6 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಜೂನ್ 14 ರಂದು ಆತ್ಮಹತ್ಯೆಗೆ ಶರಣಾದ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ತನಿಖೆಗೆ ಆರಂಭಿಸಿದ್ದ ಪೊಲೀಸರು ಈ ಸಾವಿಗೂ ಡ್ರಗ್ಸ್ ಜಾಲಕ್ಕೂ ನಂಟಿರುವ ಕುರಿತು ಸಂಶಯ ಮೂಡಿತ್ತು. ಹೀಗಾಗಿ ಈ ಸಂಬಂಧ ಡ್ರಗ್ಸ್ ಜಾಲದ ಜೊತೆಗೆ ನಂಟು ಹೊಂದಿದ್ದ ಆರೋಪದ ಮೇಲೆ ರಿಯಾ ಚಕ್ರವರ್ತಿಯನ್ನು ಸೆಪ್ಟೆಂಬರ್ 9 ರಂದು ಬಂಧಿಸಲಾಯಿತು. ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಅವರನ್ನು "ಡ್ರಗ್ ಸಿಂಡಿಕೇಟ್ನ ಸಕ್ರಿಯ ಸದಸ್ಯ" ಎಂದು ವಿವರಿಸಿದೆ.
ಹೀಗಾಗಿ ಇಂದು ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಜಾಮೀನು ಅರ್ಜಿಯನ್ನು ಕೈಗೆತ್ತಿಕೊಂಡ ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿ ಎಸ್.ವಿ. ಕೊತ್ವಾಲ್, “ಈ ಡ್ರಗ್ಸ್ ಪ್ರಕರಣದಲ್ಲಿ ವಿವಿಧ ಸಮಸ್ಯೆಗಳಿವೆ. ನೀವು ನ್ಯಾಯಾಲಯದ ಸಂಶಯಗಳನ್ನು ಒಂದೊಂದಾಗಿ ಪರಿಹರಿಸಬೇಕಾಗುತ್ತದೆ” ಎಂದು ಅಭಿಪ್ರಾಯ ಪಟ್ಟಿರುವ ನ್ಯಾಯಮೂರ್ತಿಗಳು ಪ್ರಕರಣ ವಿಚಾರಣೆಯನ್ನು ಮುಂದೂಡಿದ್ದಾರೆ.
ನಟಿ ರಿಯಾ ಚಕ್ರವರ್ತಿ ಅವರ ಜಾಮೀನು ಅರ್ಜಿಯನ್ನು ಈ ಹಿಂದೆ ಸೆಷನ್ಸ್ ನ್ಯಾಯಾಲಯದಿಂದ ತಿರಸ್ಕರಿಸಲ್ಪಟ್ಟಿತ್ತು. ಜಾಮೀನು ನೀಡಿದರೆ ಆಕೆ ಸಾಕ್ಷ್ಯವನ್ನು ನಾಶ ಮಾಡಬಹುದು ಎಂದು ಅಭಿಪ್ರಯಪಟ್ಟಿದ್ದ ನ್ಯಾಯಾಲಯ ಜಾಮೀನನ್ನು ನಿರಾಕರಿಸಿತ್ತು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ