ಭೋಪಾಲ್: ಇತ್ತೀಚೆಗಷ್ಟೇ ಕಾಂಗ್ರೆಸ್ (Congress) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಸಂಸತ್ತಿನಲ್ಲಿ ನಾಯಿ (Dog)ಎಂಬ ಹೇಳಿಕೆ ನೀಡಿದ್ದರು. ಇದೀಗ ಈ ಹೇಳಿಕೆಗೆ ಮಧ್ಯಪ್ರದೇಶದ ಬಿಜೆಪಿ (BJP) ನಾಯಕ ರಾಮೇಶ್ವರ ಶರ್ಮಾ (MLA Rameshwar Sharma) ಪ್ರತಿಕ್ರಿಯಿಸಿದ್ದು, ಸಾಕಿರುವ ನಾಯಿಯಂತೆ ಸದಾ ಸೋನಿಯಾ ಗಾಂಧಿ (Sonia Gandhi) ಹಿಂದೆ ಓಡಾಡುವ ಕಾಂಗ್ರೆಸ್ ನಾಯಕರು, ಇತರರನ್ನು ಅದೇ ರೀತಿ ನೋಡುತ್ತಾರೆ ಎಂದು ತಿರುಗೇಟು ನೀಡಿದ್ದಾರೆ. ರಾಜಸ್ಥಾನದ ಅಲ್ವಾರ್ನಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಖರ್ಗೆ, "ಈ ವೇಳೆ ಕಾಂಗ್ರೆಸ್ ದೇಶಕ್ಕೆ ಸ್ವಾತಂತ್ರ್ಯವನ್ನು ತಂದು ಕೊಟ್ಟಿದೆ. ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರಂತಹ ಮಹಾ ನಾಯಕರು ದೇಶಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ. ಆದರೆ ನಿಮ್ಮ ಮನೆಯಲ್ಲಿ ಒಂದು ನಾಯಿಯಾದರೂ ದೇಶಕ್ಕಾಗಿ ಸತ್ತಿದ್ಯಾ? ಬಿಜೆಪಿಯವರು ದೇಶಭಕ್ತರೆಂದು ಹೇಳಿಕೊಂಡು ಓಡಾಡುತ್ತಾರೆ. ಆದರೆ ನಾವು ಏನನ್ನಾದರೂ ಹೇಳಿದರೆ ನಮ್ಮನ್ನು ದೇಶದ್ರೋಹಿಗಳು, ರಾಷ್ಟ್ರ ವಿರೋಧಿಗಳು ಎಂದು ಕರೆಯುತ್ತಾರೆ" ಎಂದು ವಾಗ್ದಾಳಿ ನಡೆಸಿದ್ದರು.
ಇದೇ ವೇಳೆ ಗಡಿಯಲ್ಲಿ ಚೀನಾ ಆಕ್ರಮಣ ನಡೆಸುತ್ತಿದ್ದು, ಚೀನಾ ವಿರುದ್ಧ ಬಿಜೆಪಿ ಸಿಂಹದಂತೆ ಮಾತನಾಡುತ್ತದೆ. ಆದರೆ ವರ್ತಿಸುತ್ತಿರುವುದು ಮಾತ್ರ ಇಲಿಯಂತೆ. ಸಂಸತ್ತಿನಲ್ಲಿ ಈ ವಿಚಾರ ಮಾತನಾಡುತ್ತಿದ್ದಂತೆಯೇ ತಪ್ಪಿಸಿಕೊಂಡು ಓಡಿ ಹೋಗುತ್ತಾರೆ ಎಂದು ವ್ಯಂಗ್ಯವಾಡಿದ್ದರು. ಖರ್ಗೆ ಅವರ ಈ ಹೇಳಿಕೆಗೆ ಆಡಳಿತ ಪಕ್ಷದ ನಾಯಕರು ರಾಜ್ಯಸಭೆಯಲ್ಲಿ ತೀವ್ರ ವಿರೋಧ ವ್ಯಕ್ತಪಡಿಸಿದರು. ಅಲ್ಲದೇ ಖರ್ಗೆ ಅವರು ಕ್ಷಮೆಯಾಚಿಸುವಂತೆ ಒತ್ತಾಯಿಸಿದರು.
ಖರ್ಗೆ ವಿರುದ್ಧ ಸಿಡಿದೆದ್ದ ಬಿಜೆಪಿ ನಾಯಕ ರಾಮೇಶ್ವರ ಶರ್ಮಾ
ಇದೀಗ ಈ ಸಂಬಂಧ ಪ್ರತಿಕ್ರಿಯಿಸಿರುವ ಮಧ್ಯಪ್ರದೇಶದ ಬಿಜೆಪಿ ನಾಯಕ ರಾಮೇಶ್ವರ ಶರ್ಮಾ ಅವರು, ಕಾಂಗ್ರೆಸ್ ನಾಯಕರು ಸೋನಿಯಾ ಗಾಂಧಿಯವರು ಸಾಕಿರುವ ನಾಯಿಯಂತೆ ಸದಾ ಹಿಂದೆ ತಿರುಗಾಡುತ್ತಿರುತ್ತಾರೆ. ಹಾಗಾಗಿ ಅವರು ಇತರರನ್ನು ಅದೇ ರೀತಿ ನೋಡುತ್ತಾರೆ ಎಂದು ತಿರುಗೇಟು ನೀಡಿದ್ದಾರೆ. ಕೇಂದ್ರ ಸಚಿವ ಕಿರಣ್ ರಿಜಿಜು ಅವರು, ಖರ್ಗೆ ನಿಂದನೀಯ ಭಾಷೆ ಬಳಸಿದ್ದಾರೆ. ಇದರಿಂದ ರಾಜಕಾರಣಿಗಳು ಜನರ ಮನಸ್ಸಿನಲ್ಲಿ ಅಪಹಾಸ್ಯಕ್ಕೆ ಒಳಗಾಗುತ್ತಾರೆ. ಖರ್ಗೆ ಅವರು ತುಂಬಾ ಕೆಳಮಟ್ಟಕ್ಕೆ ಇಳಿದಿದ್ದಾರೆ ಎಂಬುವುದನ್ನು ಯಾರಿಗೂ ನಂಬಲು ಸಾಧ್ಯವಾಗುತ್ತಿಲ್ಲ ಎಂದು ಕಿಡಿಕಾರಿದ್ದರು.
ಇಂತಹ ಹೇಳಿಕೆಗಳಿಂದಲೇ ಕಾಂಗ್ರೆಸ್ ಮುಳುಗುತ್ತಿದೆ
ಮತ್ತೊಂದೆಡೆ ಇದೇ ವಿಚಾರವಾಗಿ ಮಾತನಾಡಿದ ಕೇಂದ್ರ ಸಚಿವ ಅಶ್ವನಿ ಕುಮಾರ್ ಚೌಬೆ, ಇಂತಹ ಹೇಳಿಕೆಗಳಿಂದಲೇ ಕಾಂಗ್ರೆಸ್ ಮುಳುಗುತ್ತಿದೆ. ಅಲ್ಲದೇ ನಾಯಕ ರಾಹುಲ್ ಗಾಂಧಿ ಅವರು ಸಶಸ್ತ್ರ ಪಡೆಗಳ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿದ್ದರು. ಭಾಷೆಯನ್ನು ಬಳಸಿದ್ದಾರೆ. ಈ ರೀತಿಯ ಹೇಳಿಕೆಗಳಿಂದ ಭಾರತ್ ಜೋಡೋ ಯಾತ್ರೆಯು ವಿರೋಧ ಪಕ್ಷದ ಕಣ್ಣಿಗೆ ಶವ ಯಾತ್ರೆಯಂತೆ ಕಾಣಿಸುತ್ತಿದೆ ಎಂದು ಕಿಡಿಕಾರಿದ್ದಾರೆ.
#WATCH हमने देश को आज़ादी दिलाई और देश की एकता के लिए इंदिरा और राजीव गांधी ने अपनी जान की क़ुर्बानी दी। हमारे पार्टी के नेताओं ने अपनी जान दी, आपने क्या किया? आपके घर में कोई देश के लिए कुत्ता तक मरा है? क्या(किसी ने) कोई क़ुर्बानी दी है? नहीं:कांग्रेस अध्यक्ष मल्लिकार्जुन खड़गे pic.twitter.com/faoHQMGZM0
— ANI_HindiNews (@AHindinews) December 19, 2022
ಸಂಸತ್ತಿನಲ್ಲಿ ಕ್ಷಮೆ ಯಾಚಿಸಲು ನಿರಾಕರಿಸಿದ್ದ ಖರ್ಗೆ
ಇದೇ ವಿಚಾರವಾಗಿ ಮೊನ್ನೆ ಸಂಸತ್ತಿನಲ್ಲಿ ಮಾತನಾಡಿದ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರು, ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ನಾವು ಖಂಡಿಸುತ್ತೇವೆ. ಅವಹೇಳನಕಾರಿ ಭಾಷೆ ಬಳಸಿದ ಮತ್ತು ಸುಳ್ಳು ಹೇಳಲು ಪ್ರಯತ್ನಿಸಿದ್ದಾರೆ. ಹೀಗಾಗಿ ಅವರು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
ಆದರೆ ಇದಕ್ಕೆ ನಿರಾಕರಿಸಿದ ಮಲ್ಲಿಕಾರ್ಜುನ ಖರ್ಗೆ ಅವರು, ನಾನು ಮತ್ತೆ ನಿನ್ನೆ ಹೇಳಿದ ಮಾತನ್ನೇ ಹೇಳಿದರೆ ಇಲ್ಲಿರುವವರಿಗೆ ಕಷ್ಟವಾಗುತ್ತದೆ. ಏಕೆಂದರೆ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಕ್ಷಮೆಯಾಚಿಸಿದವರು ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ಕ್ಷಮೆಯಾಚಿಸಲು ಕೇಳುತ್ತಿದ್ದಾರೆ. ನಾನು ಮತ್ತೆ ನಿನ್ನೆ ಹೇಳಿದ ಮಾತನ್ನೇ ಹೇಳಿದರೆ ಇಲ್ಲಿರುವವರಿಗೆ ಕಷ್ಟವಾಗುತ್ತದೆ. ಏಕೆಂದರೆ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಕ್ಷಮೆಯಾಚಿಸಿದವರು ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ಕ್ಷಮೆಯಾಚಿಸಲು ಕೇಳುತ್ತಿದ್ದಾರೆ ಹೇಳಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ