• ಹೋಂ
 • »
 • ನ್ಯೂಸ್
 • »
 • ದೇಶ-ವಿದೇಶ
 • »
 • Madhya Pradesh: ಕ್ರಿಕೆಟ್‌ ಆಡುತ್ತಿದ್ದಾಗ ಜ್ಯೋತಿರಾದಿತ್ಯ ಸಿಂಧಿಯಾ ಹೊಡೆದ ಚೆಂಡು ಬಿಜೆಪಿ ಕಾರ್ಯಕರ್ತನ ತಲೆಗೆ ಬಡಿದು ಗಾಯ

Madhya Pradesh: ಕ್ರಿಕೆಟ್‌ ಆಡುತ್ತಿದ್ದಾಗ ಜ್ಯೋತಿರಾದಿತ್ಯ ಸಿಂಧಿಯಾ ಹೊಡೆದ ಚೆಂಡು ಬಿಜೆಪಿ ಕಾರ್ಯಕರ್ತನ ತಲೆಗೆ ಬಡಿದು ಗಾಯ

ಜ್ಯೋತಿರಾದಿತ್ಯ ಸಿಂಧಿಯಾ

ಜ್ಯೋತಿರಾದಿತ್ಯ ಸಿಂಧಿಯಾ

ಮಧ್ಯಪ್ರದೇಶದ ಇಟೌರಾದಲ್ಲಿ ಹೊಸದಾಗಿ ನಿರ್ಮಿಸಲಾದ ಮಧ್ಯಪ್ರದೇಶ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣದಲ್ಲಿ ಈ ಘಟನೆ ನಡೆದಿದ್ದು, ಸದ್ಯ ಗಾಯಗೊಂಡಿರುವ ಬಿಜೆಪಿ ಕಾರ್ಯಕರ್ತ ವಿಕಾಸ್ ಮಿಶ್ರಾಗೆ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಗಾಯಗೊಂಡ ಜಾಗದಲ್ಲಿ ವೈದ್ಯರು ಹಲವಾರು ಹೊಲಿಗೆಗಳನ್ನು ಹಾಕಿದ್ದಾರೆ. ಸದ್ಯ ಆತ ಚೇತರಿಸಿಕೊಳ್ಳುತ್ತಿದ್ದಾನೆ. ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಮುಂದೆ ಓದಿ ...
 • News18 Kannada
 • 3-MIN READ
 • Last Updated :
 • Bhopal, India
 • Share this:

ಭೋಪಾಲ್: ನೂತನವಾಗಿ ನಿರ್ಮಿಸಲಾದ ಕ್ರಿಕೆಟ್‌ ಸ್ಟೇಡಿಯಂನಲ್ಲಿ (Cricket Stadium) ಆಯೋಜಿಸಲಾಗಿದ್ದ ಕ್ರಿಕೆಟ್‌ ಪಂದ್ಯಾಟದ (Cricket Tournament) ವೇಳೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ (Jyotiraditya Scindia) ಅವರು ಹೊಡೆದ ಬಾಲ್‌ ಬಿಜೆಪಿ ಕಾರ್ಯಕರ್ತನ (BJP Member) ತಲೆಗೆ ಬಡಿದು ರಕ್ತಸ್ರಾವ ಉಂಟಾದ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದೆ.


ಹೊಸದಾಗಿ ನಿರ್ಮಿಸಿದ ಕ್ರಿಕೆಟ್‌ ಸ್ಟೇಡಿಯಂನಲ್ಲಿ ಸೌಹಾರ್ದ ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿತ್ತು. ಈ ವೇಳೆ ಕ್ರೀಡಾಕೂಟದಲ್ಲಿ ಭಾಗಿಯಾಗಿದ್ದ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಕಾರ್ಯಕರ್ತರ ಒತ್ತಾಯದ ಮೇರೆಗೆ ಕ್ರಿಕೆಟ್ ಆಡಲು ನಿರ್ಧರಿಸಿದ್ದಾರೆ. ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಬ್ಯಾಟಿಂಗ್ ಮಾಡುವ ವೇಳೆ ತನ್ನ ಬ್ಯಾಟ್‌ನಲ್ಲಿ ಬಾಲ್‌ ಅನ್ನು ಹೊಡೆದಿದ್ದಾರೆ. ಎತ್ತರಕ್ಕೆ ಹಾರಿದ ಬಾಲ್‌ ಅನ್ನು ಅಲ್ಲೇ ಫೀಲ್ಡಿಂಗ್ ಮಾಡುತ್ತಿದ್ದ ಬಿಜೆಪಿ ಕಾರ್ಯಕರ್ತ ವಿಕಾಸ್ ಮಿಶ್ರಾ ಕ್ಯಾಚ್‌ ಹಿಡಿಯಲು ಪ್ರಯತ್ನಿಸಿದ್ದಾರೆ. ಆದರೆ ಚೆಂಡು ಅವರ ಕೈ ತಪ್ಪಿದ ಕಾರಣ ತಲೆಯಿಂದ ಹಣೆಗೆ ಬಿದ್ದು ಗಾಯವಾಗಿದೆ. ಬಾಲ್ ಬಿದ್ದ ಹೊಡೆತಕ್ಕೆ ತಲೆಯಲ್ಲಿ ಗಾಯವಾಗಿ ರಕ್ತಸ್ರಾವವಾಗಿದ್ದು, ಕೂಡಲೇ ಆತನನ್ನು ಅಲ್ಲಿದ್ದವರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.


ಇದನ್ನೂ ಓದಿ: Nitin Gadkari: ಚುನಾವಣೆ ಹೊಸ್ತಿಲಲ್ಲಿ ರಾಜ್ಯಕ್ಕೆ ಬಂಪರ್​; ಕೇಂದ್ರ ಸಾರಿಗೆ ಯೋಜನೆಯಿಂದ ₹15 ಸಾವಿರ ಕೋಟಿ, ಅಂಜನಾದ್ರಿ ಸೇರಿ 15 ಕಡೆ ರೋಪ್ ವೇ


ಸದ್ಯ ಚೇತರಿಸಿಕೊಂಡ ಗಾಯಾಳು


ಸದ್ಯ ಗಾಯಗೊಂಡಿರುವ ಬಿಜೆಪಿ ಕಾರ್ಯಕರ್ತ ವಿಕಾಸ್ ಮಿಶ್ರಾಗೆ ವೈದ್ಯರು ಚಿಕಿತ್ಸೆ ನೀಡಿದ್ದು, ಗಾಯಗೊಂಡ ಜಾಗದಲ್ಲಿ ವೈದ್ಯರು ಹಲವಾರು ಹೊಲಿಗೆಗಳನ್ನು ಹಾಕಿದ್ದಾರೆ. ಸದ್ಯ ಆತ ಚೇತರಿಸಿಕೊಳ್ಳುತ್ತಿದ್ದಾನೆ. ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮಧ್ಯಪ್ರದೇಶದ ಇಟೌರಾದಲ್ಲಿ ಹೊಸದಾಗಿ ನಿರ್ಮಿಸಲಾದ ಮಧ್ಯಪ್ರದೇಶ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣದಲ್ಲಿ ಈ ಘಟನೆ ನಡೆದಿದ್ದು, ಅಂದೇ ಕ್ರೀಡಾಂಗಣದ ಉದ್ಘಾಟನೆಯನ್ನು ಇಟ್ಟುಕೊಳ್ಳಲಾಗಿತ್ತು. ಸ್ಟೇಡಿಯಂ ಉದ್ಘಾಟನೆಗೊಂಡ ಬಳಿಕ ಸೌಹಾರ್ದ ಕ್ರಿಕೆಟ್ ಪಂದ್ಯವನ್ನು ಆಯೋಜಿಸಲಾಗಿತ್ತು. ಈ ವೇಳೆ ಅಚಾತುರ್ಯದಿಂದ ಈ ಘಟನೆ ನಡೆದಿದೆ ಎಂದು ಸ್ಥಳೀಯ ಬಿಜೆಪಿ ಕಾರ್ಯಾಧ್ಯಕ್ಷ ಧೀರಜ್ ದ್ವಿವೇದಿ ತಿಳಿಸಿದ್ದಾರೆ.


ಘಟನೆ ಬಳಿಕ ಪಂದ್ಯಾಟ ಸ್ಥಗಿತ


ಜ್ಯೋತಿರಾದಿತ್ಯ ಸಿಂಧಿಯಾ ಅವರು ಹೊಡೆದ ಬಾಲ್ ತಗುಲಿ ಗಾಯಗೊಂಡ ಬಿಜೆಪಿ ಕಾರ್ಯಕರ್ತ ವಿಕಾಸ್ ಮಿಶ್ರಾನನ್ನು ಸಂಜಯ್ ಗಾಂಧಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸಾಗಿಸುವಾಗ ಮಾಜಿ ಸಚಿವ ರಾಜೇಂದ್ರ ಶುಕ್ಲಾ ಮತ್ತು ರೇವಾ ಸಂಸದ ಜನಾರ್ದನ್ ಮಿಶ್ರಾ ಅವರೊಂದಿಗೆ ಜ್ಯೋತಿರಾದಿತ್ಯ ಸಿಂಧಿಯಾ ಕೂಡ ಹಾಜರಿದ್ದರು. ಪಂದ್ಯಾಟ ವೇಳೆ ಅಚಾತುರ್ಯ ಘಟನೆ ನಡೆದ ಬಳಿಕ ಕ್ರೀಡಾಕೂಟವನ್ನು ನಿಲ್ಲಿಸಲಾಯಿತು ಎಂದು ತಿಳಿದು ಬಂದಿದೆ.


ಇದನ್ನೂ ಓದಿ: Tejasvi Surya: ತೇಜಸ್ವಿ ಸೂರ್ಯ ಆಕಸ್ಮಿಕವಾಗಿ ವಿಮಾನ ತುರ್ತು ಬಾಗಿಲು ತೆರೆದಿದ್ದರು, ಸಂಸತ್​ನಲ್ಲಿ ಕೇಂದ್ರ ಸ್ಪಷ್ಟನೆ


₹240 ಕೋಟಿ ವೆಚ್ಚದ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ


ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ಅಂದಾಜು ₹240 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನೂತನ ವಿಮಾನ ನಿಲ್ದಾಣಕ್ಕೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಶಂಕು ಸ್ಥಾಪನೆ ನೆರವೇರಿಸಿದರು. ಈ ವೇಳೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಕೂಡ ಉಪಸ್ಥಿತರಿದ್ದರು. ಇದೇ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ವಿಂಧ್ಯಾ ಎಕ್ಸ್‌ಪ್ರೆಸ್‌ ವೇ ನಿರ್ಮಾಣವನ್ನು ಸಹ ಘೋಷಣೆ ಮಾಡಿದರು. ಈ ಯೋಜನೆ ಮಧ್ಯಪ್ರದೇಶ ರಾಜ್ಯದ ರಾಜಧಾನಿ ಭೋಪಾಲ್‌ನಿಂದ ಸುಮಾರು 660 ಕಿ. ಮೀ ದೂರ ಸಿಂಗ್ರೌಲಿಗೆ ಸಂಪರ್ಕ ಕಲ್ಪಿಸುತ್ತದೆ.
ಜೊತೆಗೆ ಹೆದ್ದಾರಿಯ ಉದ್ದಕ್ಕೂ ಕೈಗಾರಿಕಾ ಕ್ಲಸ್ಟರ್‌ಗಳನ್ನು ಅಭಿವೃದ್ಧಿಪಡಿಸುವ ಯೋಜನೆಯನ್ನು ಸಹ ಹಾಕಿಕೊಳ್ಳಲಾಗಿದೆ.

Published by:Avinash K
First published: