ಈಶಾನ್ಯ ರಾಜ್ಯಗಳಲ್ಲಿ ಪ್ರಬಲ ಭೂಕಂಪ; ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆ ದಾಖಲು

ಭೂಕಂಪದ ತೀವ್ರತೆ ಕಡಿಮೆ ಇರುವುದರಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿರುವ ಬಗ್ಗೆ ಈ ವರೆಗೂ ವರದಿಯಾಗಿಲ್ಲ. ಬುಧವಾರ ಕೆಲವೆಡೆ ಭೂಮಿ ಕಂಪನವಾಗಿದ್ದು, ಚೀನಾದ ಕೆಲ ಭಾಗಗಳು, ನೇಪಾಳ, ಮತ್ತು ಈಶಾನ್ಯ ರಾಜ್ಯಗಳಲ್ಲಿ ಕಂಪನ ಅನುಭವಕ್ಕೆ ಬಂದಿದೆ.

Ganesh Nachikethu | news18
Updated:April 24, 2019, 9:59 AM IST
ಈಶಾನ್ಯ ರಾಜ್ಯಗಳಲ್ಲಿ ಪ್ರಬಲ ಭೂಕಂಪ; ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆ ದಾಖಲು
ಭೂಕಂಪ
Ganesh Nachikethu | news18
Updated: April 24, 2019, 9:59 AM IST
ನವದೆಹಲಿ(ಏ.24): ಈಶಾನ್ಯ ರಾಜ್ಯಗಳಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಅರುಣಾಚಲ ಪ್ರದೇಶ ಮತ್ತು ಅಸ್ಸಾಂನಲ್ಲಿ ನಿನ್ನೆ ಪ್ರಬಲ ಭೂಕಂಪ ಕಂಪಿಸಿದ್ದು, ರಿಕ್ಟರ್‌ ಮಾಪಕದಲ್ಲಿ 6.1 ತೀವ್ರತೆ ದಾಖಲಾಗಿದೆ ಎಂದು ಅಮೆರಿಕದ ಭೂಗರ್ಭ ಶಾಸ್ತ್ರಜ್ಞರು ತಿಳಿಸಿದ್ದಾರೆ.

ಇನ್ನು ಅರುಣಾಚಲದ ಪಶ್ಚಿಮ ಸಿಯಾಂಗ್‌ನಲ್ಲಿ ರಾತ್ರಿ ಸುಮಾರು 1.30 ರ ವೇಳೆಗೆ 5.8 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪನದ ಕೇಂದ್ರ ಬಿಂದು ವಾಯುವ್ಯ ಭಾಗದದಲ್ಲಿ ಕೇಂದ್ರಿಕೃತವಾಗಿತ್ತು, 9 ಕಿ.ಮೀ ಆಳದಲ್ಲಿತ್ತು ಎಂದು ವಿಜ್ಞಾನಿಗಳು ಮಾಹಿತಿ ನೀಡಿದ್ಧಾರೆ.

ಭೂಕಂಪದ ತೀವ್ರತೆ ಕಡಿಮೆ ಇರುವುದರಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿರುವ ಬಗ್ಗೆ ಈ ವರೆಗೂ ವರದಿಯಾಗಿಲ್ಲ. ಬುಧವಾರ ಕೆಲವೆಡೆ ಭೂಮಿ ಕಂಪನವಾಗಿದ್ದು, ಚೀನಾದ ಕೆಲ ಭಾಗಗಳು, ನೇಪಾಳ, ಮತ್ತು ಈಶಾನ್ಯ ರಾಜ್ಯಗಳಲ್ಲಿ ಕಂಪನ ಅನುಭವಕ್ಕೆ ಬಂದಿದೆ.

ಇದನ್ನೂ ಓದಿ: ರಂಜನ್ ಗೊಗೊಯ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; ವಿಚಾರಣೆಗೆ ತ್ರಿಸದಸ್ಯ ಪೀಠ ರಚನೆ

ಅಸ್ಸಾಂ, ಮೇಘಾಲಯ, ಮಿಜೋರಾಂ, ತ್ರಿಪುರಾ, ನಾಗಾಲ್ಯಾಂಡ್, ಅರುಣಾಚಲ ಪ್ರದೇಶ, ಮಣಿಪುರ ರಾಜ್ಯಗಳನ್ನು ವಿಶ್ವದ ಅತಿ ಹೆಚ್ಚು ಭೂಕಂಪನ ಪೀಡಿತ ಪ್ರದೇಶಗಳ ಪಟ್ಟಿಯಲ್ಲಿ ಗುರುತಿಸಲಾಗಿದೆ. ಇದುವರೆಗೂ ಯಾವುದೇ ಹಾನಿಯ ಬಗ್ಗೆ ವಿವರಗಳು ಲಭ್ಯವಾಗಿಲ್ಲ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ....
Loading...

-------------
First published:April 24, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...