ECIL Recruitment 2021: ಖಾಲಿ ಇರುವ 28 ಟೆಕ್ನಿಕಲ್​ ಅಧಿಕಾರಿ ಮತ್ತು ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್​ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಇ, ಬಿ.ಟೆಕ್, ಡಿಪ್ಲೋಮಾ ಮತ್ತು ಐಟಿಐ ವಿದ್ಯಾರ್ಹತೆಯನ್ನು ಪಡೆದಿರಬೇಕು

jobs

jobs

  • Share this:
    ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಇಸಿಐಎಲ್) ಖಾಲಿಒ ಇರುವ 28 ಟೆಕ್ನಿಕಲ್ ಅಧಿಕಾರಿ, ಸೈಂಟಿಫಿಕ್ ಅಸಿಸ್ಟೆಂಟ್ ಮತ್ತು ಜ್ಯೂನಿಯರ್ ಆರ್ಟಿಸನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ತಿಳಿಸಿದೆ.

    ಹುದ್ದೆಗಳ ವಿವರ:

    ಟೆಕ್ನಿಕಲ್ ಅಧಿಕಾರಿ - 15 ಹುದ್ದೆಗಳು

    ಸೈಂಟಿಫಿಕ್ ಅಸಿಸ್ಟೆಂಟ್ - 2 ಹುದ್ದೆಗಳು

    ಜ್ಯೂನಿಯರ್ ಆರ್ಟಿಸನ್ - 11 ಹುದ್ದೆಗಳು

    ವಿದ್ಯಾರ್ಹತೆ:

    ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್​ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಇ, ಬಿ.ಟೆಕ್, ಡಿಪ್ಲೋಮಾ ಮತ್ತು ಐಟಿಐ ವಿದ್ಯಾರ್ಹತೆಯನ್ನು ಪಡೆದಿರಬೇಕು.

    ವಯೋಮಿತಿ:

    ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ಗರಿಷ್ಟ 30 ವರ್ಷ, ಸೈಂಟಿಫಿಕ್ ಅಸಿಸ್ಟೆಂಟ್ ಹುದ್ದೆಗಳಿಗೆ ಗರಿಷ್ಟ 25 ವರ್ಷ ಮತ್ತು ಜ್ಯೂನಿಯರ್ ಆರ್ಟಿಸನ್ ಹುದ್ದೆಗಳಿಗೆ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ಅಂತೆಯೇ ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

    ವೇತನ:

    -ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,000 ರೂ. ವೇತನ ಸಿಗಲಿದೆ.

    -ಸೈಂಟಿಫಿಕ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,202 ರೂ. ವೇತನ ಸಿಗಲಿದೆ.

    -ಜ್ಯೂನಿಯರ್ ಆರ್ಟಿಸನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,382 ರೂ. ವೇತನ ಸಿಗಲಿದೆ.

    ಆಯ್ಕೆ ಪ್ರಕ್ರಿಯೆ:

    ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಟ್ರೇಡ್ ಟೆಸ್ಟ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಅರ್ಜಿ ಸಲ್ಲಿಸುವುದು ಹೇಗೆ?:

    ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://www.ecil.co.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಮಾಹಿತಿಯನ್ನು ಓದಿ ನಂತರ ಭರ್ತಿ ಮಾಡುವ ಮೂಲಕ ಫೆಬ್ರವರಿ 3,2021ರೊಳಗೆ ಅರ್ಜಿ ಸಲ್ಲಿಸಬೇಕು.
    Published by:Harshith AS
    First published: