HOME » NEWS » National-international » ECIL RECRUITMENT 2021 NOTIFICATION HAS BEEN RELEASED FOR 180 GRADUATE ENGINEER AND TECHNICIAN APPRENTICE POSTS HG

ECIL Recruitment 2021: ಖಾಲಿ ಇರುವ 180 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ: ಬಿ.ಇ ಅಥವಾ ಬಿ.ಟೆಕ್ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

news18-kannada
Updated:January 10, 2021, 6:44 PM IST
ECIL Recruitment 2021: ಖಾಲಿ ಇರುವ 180 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸಾಂದರ್ಭಿಕ ಚಿತ್ರ
  • Share this:
ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಇಸಿಐಎಲ್) ಖಾಲಿ ಇರುವ 180 ಗ್ರಾಜುಯೇಟ್ ಇಂಜಿನಿಯರ್/ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಲು ತಿಳಿಸಿದೆ. ಜನವರಿ 15,2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ವಿದ್ಯಾರ್ಹತೆ: ಬಿ.ಇ ಅಥವಾ ಬಿ.ಟೆಕ್ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ: 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಸ್ಟೈಫೆಂಡ್:

-ಗ್ರಾಜುಯೇಟ್ ಇಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 9,000 ರೂ ಸ್ಟೈಫಂಡ್​ ನೀಡಲಾಗುತ್ತದೆ

-ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 8,000 ರೂ ಸ್ಟೈಫೆಂಡ್ ನೀಡಲಾಗುತ್ತದೆ.

 ಆಯ್ಕೆ ಪ್ರಕ್ರಿಯೆ ಹೇಗೆ?:ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ?:

ಇಂಜಿನಿಯರ್, ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳನ್ನು ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://www.mhrdnats.gov.in/ ಗೆ ಭೇಟಿ ನೀಡಿ ನಂತರ ನೀಡಲಾಗಿರುವ ಮಾಹಿತಿಯನ್ನು ಓದಿ ಭರ್ತಿ ಮಾಡಬೇಕು. ಜನವರಿ 15,2021 ಅರ್ಜಿ ಹಾಕಲು ಕೊನೆಯ ದಿನಾಂಕವಾಗಿದೆ,
First published: January 10, 2021, 6:41 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories