Bus Accident: ಡಬಲ್‌ ಡೆಕ್ಕರ್ ಬಸ್ಸುಗಳ ಡಿಕ್ಕಿ; 8 ಮಂದಿ ಸಾವು, ಮೂವರು ಗಾಯಾಳುಗಳ ಸ್ಥಿತಿ ಗಂಭೀರ

ಬಸ್‌ಗಳ ನಡುವೆ ಡಿಕ್ಕಿ ಸಂಭವಿಸಿ, ಬಸ್‌ನಲ್ಲಿದ್ದ ಎಂಟು ಜನರು ಸಾವನ್ನಪ್ಪಿದ್ದಾರೆ. ಜೊತೆಗೆ ಸುಮಾರು 20 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಿಎಚ್‌ಸಿ ಹೈದರ್‌ಗಢ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಬಸ್‌ಗಳ ಮುಖಾಮುಖಿ ಡಿಕ್ಕಿ

ಬಸ್‌ಗಳ ಮುಖಾಮುಖಿ ಡಿಕ್ಕಿ

  • Share this:
ಉತ್ತರ ಪ್ರದೇಶ: ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇನಲ್ಲಿ (poorvanchal expressway) ಇಂದು ಡಬಲ್ ಡೆಕ್ಕರ್ ಬಸ್‌ಗಳು (double decker bus) ಮುಖಾಮುಖಿ ಡಿಕ್ಕಿಯಾಗಿವೆ. ಪರಿಣಾಮ ಬಸ್‌ನಲ್ಲಿದ್ದ ಎಂಟು ಜನರು ಸಾವನ್ನಪ್ಪಿದ್ದಾರೆ. ಜೊತೆಗೆ ಸುಮಾರು 20 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಿಎಚ್‌ಸಿ ಹೈದರ್‌ಗಢ ಸಮುದಾಯ ಆರೋಗ್ಯ ಕೇಂದ್ರಕ್ಕೆ (Hospital) ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಈ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆಗಾಗಿ ಲಕ್ನೋದ (Lucknow) ಟ್ರಾಮಾ ಸೆಂಟರ್‌ಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲೋನಿಕ್ತ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ನರೇಂದ್ರಪುರ ಮದ್ರಹಾ ಗ್ರಾಮದ ಬಳಿ ಡಬಲ್ ಡೆಕ್ಕರ್ ಬಸ್ ಮತ್ತೊಂದು ಬಸ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಎರಡೂ ಬಸ್‌ಗಳು ಬಿಹಾರದಿಂದ ದೆಹಲಿಗೆ ತೆರಳುತ್ತಿದ್ದವು ಎನ್ನಲಾಗಿದೆ.

ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ

ಲೋನಿ ಕತ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಅಪಘಾತ ಸಂಭವಿಸಿದ್ದು ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಯಳುಗಳನ್ನು ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಿದ್ದಾರೆ. ಇನ್ನು ಗಾಯಾಳುಗಳ ಪೈಕಿ ಮೂವರ ಸ್ಥಿತಿ ಗಂಭೀರವಾಗಿದ್ದು, ಮೃತರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಹೆಚ್ಚಿದೆ.  ಸ್ಥಳಕ್ಕೆ ಬಾರಾಬಂಕಿ ಪೋಲೀಸರು ಧಾವಿಸಿದ್ದು ಉನ್ನತಾಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಬಿಹಾರದಿಂದ ಬರುತ್ತಿದ್ದ ಬಸ್‌ಗಳ ಡಿಕ್ಕಿ

ಬಾರಾಬಂಕಿಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಎಎಸ್‌ಪಿ) ಮನೋಜ್ ಪಾಂಡೆ ಮಾತನಾಡಿ, ಬಿಹಾರದ ಸೀತಾಮರ್ಹಿಯಿಂದ ಬರುತ್ತಿದ್ದ ಬಸ್ ನರೇಂದ್ರಪುರ ಮದ್ರಹಾ ಗ್ರಾಮದ ಬಳಿ ನಿಂತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ. ಮೃತರನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಲಕ್ನೋದ ಟ್ರಾಮಾ ಸೆಂಟರ್‌ಗೆ ದಾಖಲಿಸಲಾಗಿದೆ ಅಂತ ತಿಳಿಸಿದ್ದಾರೆ.

ಇದನ್ನೂ ಓದಿ: PSI Death: ಪಂಚಮಿ ಹಬ್ಬಕ್ಕೆ ಬರುತ್ತೀನಿ ಎಂದಿದ್ದ ಅಣ್ಣ ಬರಲೇ ಇಲ್ಲ! ಪಿಎಸ್ಐ ಅವಿನಾಶ್ ಮನೆಯಲ್ಲಿ ಆಕ್ರಂದನ

 “ಹೆಚ್ಚಿನ ತನಿಖೆ ನಡೆಯುತ್ತಿದೆ”

ಇನ್ನು ಈ ಭೀಕರ ಅಪಘಾತದಲ್ಲಿ 20 ಮಂದಿ ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಟ್ರಾಮಾ ಸೆಂಟರ್‌ಗೆ ಕಳುಹಿಸಲಾಗುತ್ತದೆ ಮತ್ತು ಸಣ್ಣಪುಟ್ಟ ಗಾಯಗಳಾದವರಿಗೆ ಸಿಎಚ್‌ಸಿಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಸತ್ತವರ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಅಂತ ಬಾರಾಬಂಕಿಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಎಎಸ್‌ಪಿ) ಮನೋಜ್ ಪಾಂಡೆ ಹೇಳಿದ್ದಾರೆ.

ಯೋಗಿ ಆದಿತ್ಯನಾಥ್ ಸಂತಾಪ

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ದುರಂತದಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದ್ದಾರೆ. ಜೊತೆಗೆ ಅವರ ಕುಟುಂಬಸ್ಥರಿಗೆ ಧೈರ್ಯ ಹೇಳಿದ್ದಾರೆ.  "ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಜೀವಹಾನಿ ಬಹಳ ದುಃಖಕರವಾಗಿದೆ. ತ್ವರಿತ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ಭರದಿಂದ ಸಾಗಿವೆ. ಗಾಯಾಳುಗಳಿಗೆ ಸರಿಯಾದ ಚಿಕಿತ್ಸೆಗಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿದೆ. ಭಗವಾನ್ ಶ್ರೀರಾಮನು ಅಗಲಿದ ಆತ್ಮಗಳಿಗೆ ಶಾಂತಿ ನೀಡಲಿ ಮತ್ತು ಗಾಯಗೊಂಡವರಿಗೆ ಶೀಘ್ರವಾಗಿ ಚೇತರಿಸಿಕೊಳ್ಳಲಿ" ಎಂದು ಅವರು ಟ್ವೀಟ್ ಮಾಡಿದ್ದಾರೆ.

 ಇದನ್ನೂ ಓದಿ: Property Dispute: ಹಾಸಿಗೆ ಹಿಡಿದ ತಂದೆಗೆ ಆಕ್ಸಿಜನ್ ಕೊಡೋದಕ್ಕೆ ಒಪ್ಪದ ಮಗಳು! ಜೀವಕ್ಕಿಂತ ಆಸ್ತಿನೇ ಹೆಚ್ಚಾಯ್ತಾ ಇವಳಿಗೆ?

 ಮೈಸೂರಿನಲ್ಲಿ ಓಮ್ನಿ, ಆಟೋ ಡಿಕ್ಕಿ

ಆಪೇ ಆಟೋ ಮತ್ತು ಓಮಿನಿ ಕಾರಿನ ನಡುವೆ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಮೈಸೂರು ಜಿಲ್ಲೆಯ ನರಸೀಪುರ ತಾಲೂಕಿನ ಸೋಸಲೆ ಗ್ರಾಮದ ಸಮೀಪ ಸೋಮವಾರ ಮುಂಜಾನೆ ಸಂಭವಿಸಿದೆ. ಮೈಸೂರಿನ ಜೆಪಿ ನಗರ ನಿವಾಸಿ 29 ವರ್ಷದ ವಿಶಾಲಾಕ್ಷಿ ಮೃತ ಮಹಿಳೆ. ಅಪಘಾತದಲ್ಲಿ ಮೃತ ವಿಶಾಲಾಕ್ಷಿ ಪತಿ ಶಂಕರ್ ಹಾಗೂ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದಾರೆ. ಇವರನ್ನು ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಪೇ ಆಟೋದಲ್ಲಿ ಪ್ರಯಾಣ ಮಾಡುತ್ತಿದ್ದ ಮಳವಳ್ಳಿ ತಾಲೂಕಿನ ನಂಜೇಗೌಡನಪುರ ಗ್ರಾಮಸ್ಥರಾದ ರಾಜು, ಮಣಿ, ರತ್ನಮ್ಮ ಎಂಬುವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
Published by:Annappa Achari
First published: