ರಷ್ಯಾದ ಪೆರ್ಮ್ ಸ್ಟೇಟ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ; 8 ಜನ ಸಾವು, 6 ಜನರಿಗೆ ಗಂಭೀರ ಗಾಯ

ವಿದ್ಯಾರ್ಥಿ ಗುಂಡಿನ ದಾಳಿ ನಡೆಸುತ್ತಿದ್ದಂತೆ ವಿಶ್ವವಿದ್ಯಾಲಯದ ಕಟ್ಟಡದ ಒಳಗಿದ್ದ ವಿದ್ಯಾರ್ಥಿಗಳು ಜೀವ ಭಯದಿಂದ ಸಭಾಂಗಣದ ಕಿಟಕಿ ಮತ್ತು ಗೋಡೆಯಿಂದ ಹಾರಿ ಪ್ರಾಣ ಉಳಿಸಿಕೊಳ್ಳಲು ಮುಂದಾಗಿದ್ದರು. ಆದರೂ, ಗುಂಡಿನ ದಾಳಿಗೆ 8 ಜನ ಸಾವನ್ನಪ್ಪಿದ್ದು, 6 ಜನ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ವಿದ್ಯಾರ್ಥಿ ಗುಂಡಿನ ದಾಳಿ ನಡೆಸುತ್ತಿರುವ ದೃಶ್ಯ.

ವಿದ್ಯಾರ್ಥಿ ಗುಂಡಿನ ದಾಳಿ ನಡೆಸುತ್ತಿರುವ ದೃಶ್ಯ.

 • Share this:
  ಮಾಸ್ಕೋ (ಸೆಪ್ಟೆಂಬರ್ 20): ರಷ್ಯಾದ ಪೆರ್ಮ್ ಸ್ಟೇಟ್ ವಿಶ್ವವಿದ್ಯಾಲಯದ (Russia’s Perm State University) ಕಟ್ಟಡವೊಂದರಲ್ಲಿ ವಿದ್ಯಾರ್ಥಿಯೊಬ್ಬ ಗುಂಡಿನ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತುಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ವಿದ್ಯಾರ್ಥಿ ಗುಂಡಿನ ದಾಳಿ ನಡೆಸಿರುವ ವಿಡಿಯೋ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಪ್ರಸ್ತುತ ಪ್ರಸಾರವಾಗುತ್ತಿರುವ ದೃಶ್ಯದಲ್ಲಿ, "ಶೂಟರ್‌ನಿಂದ ತಪ್ಪಿಸಿಕೊಳ್ಳಲು ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಕಟ್ಟಡಗಳಿಂದ ಜಿಗಿಯುವುದನ್ನು ನೋಡಬಹುದಾಗಿದೆ. ವರದಿಗಳ ಪ್ರಕಾರ, ಗುಂಡು ಹಾರಿದ ವ್ಯಕ್ತಿ ಅದೇ ವಿಶ್ವವಿದ್ಯಾಲಯದ ವಿದ್ಯಾರ್ಥಿಯಾಗಿದ್ದು, ಆತನನ್ನು ಬಂಧಿಸಲಾಗಿದೆ" ಎಂದು ವರದಿಯಾಗಿದೆ.  ಈ ಬಗ್ಗೆ ರಾಯ್ಟರ್ಸ್​ ಮತ್ತು TASS ವರದಿ ಮಾಡಿದ್ದು, "ವಿದ್ಯಾರ್ಥಿ ಗುಂಡಿನ ದಾಳಿ ನಡೆಸುತ್ತಿದ್ದಂತೆ ವಿಶ್ವವಿದ್ಯಾಲಯದ ಕಟ್ಟಡದ ಒಳಗಿದ್ದ ವಿದ್ಯಾರ್ಥಿಗಳು ಜೀವ ಭಯದಿಂದ ಸಭಾಂಗಣದ ಕಿಟಕಿ ಮತ್ತು ಗೋಡೆಯಿಂದ ಹಾರಿ ಪ್ರಾಣ ಉಳಿಸಿಕೊಳ್ಳಲು ಮುಂದಾಗಿದ್ದರು. ಆದರೂ, ಗುಂಡಿನ ದಾಳಿಗೆ 8 ಜನ ಸಾವನ್ನಪ್ಪಿದ್ದು, 6 ಜನ ಗಾಯಗೊಂಡಿದ್ದಾರೆ. ಈ ವೇಳೆ ಆರೋಪಿಯನ್ನು ಹಿಡಿಯಲು ಹಲವು ವಿದ್ಯಾರ್ಥಿಗಳು ಸಭಾಂಗಣದ ಕಟ್ಟಡಕ್ಕೆ ಬೀಗ ಹಾಕಿದ್ದಾರೆ" ಎಂದು ವರದಿ ಮಾಡಿದೆ.

  TASS ಉಲ್ಲೇಖಿಸಿದ ಒಂದು ಮೂಲದ ಪ್ರಕಾರ, ಭದ್ರತೆ ಮತ್ತು ಕಾನೂನು ಜಾರಿ ಸಂಸ್ಥೆಗಳು ವಿದ್ಯಾರ್ಥಿ ಮೊದಲ ಗುಂಡು ಹಾರಿಸಿದ ಸ್ವಲ್ಪ ಸಮಯದಲ್ಲೇ ವಿಶ್ವವಿದ್ಯಾಲಯದ ಕ್ಯಾಂಪಸ್​ಗೆ ತಲುಪಿದ್ದಾರೆ. ಅಲ್ಲದೆ, ಗುಂಡಿನ ದಾಳಿ ನಡೆಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದೆ.

  ಇದನ್ನೂ ಓದಿ: IPL 2021 Broadcast Banned in Afghanistan| ಇಸ್ಲಾಂ ವಿರೋಧಿ ಎಂದು ಐಪಿಎಲ್ ಪ್ರಸಾರಕ್ಕೆ ನಿಷೇಧ ಹೇರಿದ ತಾಲಿಬಾನ್!

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
  Published by:MAshok Kumar
  First published: