ಇಡುಕ್ಕಿ(ಡಿ.24): ಶಬರಿಮಲೆ ಯಾತ್ರೆ ಈಗಾಗಲೇ ಆರಂಭವಾಗಿದ್ದು, ಭಾರೀ ಸಂಖ್ಯೆಯಲ್ಲಿ ಭ್ತರು ಅಯ್ಯಪ್ಪನ ದರ್ಶನ ಪಡೆಯಲು ಯಾತ್ರೆ ಕೈಗೊಳ್ಳುತ್ತಿದ್ದಾರೆ. ಆದರೀಗ ಇರುಮುಡಿ ಕಟ್ಟಿ ಶಬರಿಮಲೆ ಯಾತ್ರೆಗೆ ತೆರಳುತ್ತಿದ್ದ ವೇಳೆ ವಾಹನವೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ತಮಿಳುನಾಡಿನ ಎಂಟು ಮಂದಿ ಭಕ್ತರು ಸಾವನ್ನಪ್ಪಿರುವ ಘಟನೆ ಇಡುಕ್ಕಿಯಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
Sabarimala: ವಿಮಾನದಲ್ಲಿ ಪ್ರಯಾಣಿಸುವ ಶಬರಿಮಲೆ ಯಾತ್ರಾರ್ಥಿಗಳಿಗೆ ಗುಡ್ ನ್ಯೂಸ್!
ಹೌದು ಶುಕ್ರವಾರ ರಾತ್ರಿ 11 ಗಂಟೆಗೆ ಶಬರಿಮಲೆಗೆ ಹೋಗುವ ಕುಮಿಲಿ- ಕಂಬಂ ಎಂಬಲ್ಲಿ ಯಾತ್ರಾರ್ಥಿಗಳಿದ್ದ ವಾಹನ ಪ್ರಪಾತಕ್ಕೆ ಉರುಳಿ ಬಿದ್ದು 8 ಮಂದಿ ಭಕ್ತರು ಮೃತಪಟ್ಟಿದ್ದಾರೆ. ಭಕ್ತರಿದ್ದ ವಾಹನ ರಾತ್ರಿ ವೇಳೆ ಸಂಚರಿಸುತ್ತಿದ್ದಾಗ ಏಕಾಏಕಿ ರಸ್ತೆಯ ಪಕ್ಕದ ಪ್ರಪಾತಕ್ಕೆ ಉರುಳಿ ಬಿದ್ದಿದೆ. ದುಘರ್ಟನೆಯಲ್ಲಿ 8 ಮಂದಿ ಈವರೆಗೆ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ವಿಷಯ ತಿಳಿದ ಪೊಲೀಸರು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಗಂಭೀರವಾಗಿ ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಸ್ತೆಯ ತಿರುವನ್ನು ಗಮನಿಸದ ಚಾಲಕನಿಂದಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ