Bhowanipore Bypolls: ಭವಾನಿಪುರ ಉಪ ಚುನಾವಣೆ ಘೋಷಣೆ; ಸಿಎಂ ಸ್ಥಾನ ಉಳಿಸಿಕೊಳ್ಳಲು ಸಜ್ಜಾದ ಮಮತಾ ಬ್ಯಾನರ್ಜಿ

ನಂದಿ ಗ್ರಾಮದಲ್ಲಿ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಸೋಲು ಕಂಡರೂ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಅಧಿಕ ಬಹುಮತ ಪಡೆದು ಜಯಭೇರಿ ಬಾರಿಸಿತು. ಈ ಹಿನ್ನಲೆ ಅವರನ್ನು ಮುಖ್ಯಮಂತ್ರಿಯಾಗಿ ಪಕ್ಷ ಆಯ್ಕೆ ಮಾಡಿತು.

ಮಮತಾ ಬ್ಯಾನರ್ಜಿ.

ಮಮತಾ ಬ್ಯಾನರ್ಜಿ.

  • Share this:
    ಕೊಲ್ಕತ್ತಾ (ಸೆ. 4): ಭಾರತೀಯ ಚುನಾವಣಾ ಆಯೋಗ ಪಶ್ಚಿಮ ಬಂಗಾಳದ ಭವಾನಿಪುರ ಕ್ಷೇತ್ರ (Bhowanipore Bypolls)  ಸೇರಿದಂತೆ ಮೂರು ಕ್ಷೇತ್ರಗಳ ಉಪಚುನಾವಣೆ ದಿನಾಂಕ ಘೋಷಣೆ ಮಾಡಿ ಪ್ರಕಟಿಸಿದೆ. ಭವಾನಿಪುರ, ಸಂಸರ್‌ಗಂಜ್ ಮತ್ತು ಜಂಗೀಪುರ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯಲಿದ್ದು, ದೇಶದ ಕುತೂಹಲ ಕೆರಳಿಸಿದೆ. ಕಾರಣ, ನಂದಿಗ್ರಾಮದಲ್ಲಿ(Nandigram)  ಸೋಲನ್ನು ಅಪ್ಪಿದ ಮಮತಾ ಬ್ಯಾನರ್ಜಿ (Mamata banerjee) ಅವರು ತಮ್ಮ ಹಳೆ ಕ್ಷೇತ್ರ ಭವಾನಿಪುರದಿಂದ ಕಣಕ್ಕೆ ಇಳಿಯಲಿದ್ದು, ಇಲ್ಲಿ ಅವರಿಗೆ ಗೆಲುವಿನ ಅನಿವಾರ್ಯತೆ ಎದುರಾಗಿದೆ. ಒಂದು ವೇಳೆ ಅವರು ಕ್ಷೇತ್ರದಲ್ಲಿ ಗೆಲುವು ಸಾಧಿಸಲಾಗದಿದ್ದರೆ, ಅವರ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಬೇಕಾಗಿದೆ. ಈ ಹಿನ್ನಲೆ ಮಮತಾ ಬ್ಯಾನರ್ಜಿ ಅವರ ಸಿಎಂ ಪೀಠದ ಅಳಿವು-ಉಳಿವಿನ ನಿರ್ಣಯಕ ಪಾತ್ರವನ್ನು ಈ ಚುನಾವಣೆ ವಹಿಸಲಿದೆ.

    ಮೂರು ಕ್ಷೇತ್ರಗಳಲ್ಲಿ ಇದೇ ತಿಂಗಳ ಅಂತ್ಯದಲ್ಲಿ ಅಂದರೆ, ಸೆಪ್ಟೆಂಬರ್​ 30ರಂದು ಚುನಾವಣೆ ನಡೆಯಲಿದ್ದು, ಅಕ್ಟೋಬರ್ 3 ರಂದು ಫಲಿತಾಂಶ ಪ್ರಕಟವಾಗಲಿದೆ.

    ಸಿಎಂ ಸ್ಥಾನ ಉಳಿಸಿಕೊಳ್ಳಲು ಸಜ್ಜಾದ ಮಮತಾ

    ಕಳೆದ ಎರಡು ತಿಂಗಳ ಹಿಂದೆ ನಡೆದ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಮಮತಾ ಬಿಜೆಪಿ ನಾಯಕ ಸುವೇಂದು ಅಧಿಕಾರಿ ವಿರುದ್ಧ ನಂದಿ ಗ್ರಾಮದಲ್ಲಿ ಕಣಕ್ಕೆ ಇಳಿದಿದ್ದರು. ಟಿಎಂಸಿ ತೊರೆದು ಹೋದ ತಮ್ಮ ಈ ಹಿಂದಿನ ಆಪ್ತರಾಗಿದ್ದ ಸುವೇಂದು ಅಧಿಕಾರಿ ವಿರುದ್ಧ ಚುನಾವಣೆಗೆ ಸ್ಪರ್ಧಿಸಲು ಅವರು ತಮ್ಮ ಭವಾನಿಪುರ ಕ್ಷೇತ್ರವನ್ನು ತೊರೆದಿದ್ದರು. ತೀವ್ರ ಹಣಾಹಣಿಗೆ ಸಾಕ್ಷಿಯಾಗಿದ್ದ ಈ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಗೆಲುವು ಸಾಧಿಸುವ ಮೂಲಕ ಮಮತಾ ಸೋತರು.

    ನಂದಿ ಗ್ರಾಮದಲ್ಲಿ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಸೋಲು ಕಂಡರೂ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಅಧಿಕ ಬಹುಮತ ಪಡೆದು ಜಯಭೇರಿ ಬಾರಿಸಿತು. ಈ ಹಿನ್ನಲೆ ಅವರನ್ನು ಮುಖ್ಯಮಂತ್ರಿಯಾಗಿ ಪಕ್ಷ ಆಯ್ಕೆ ಮಾಡಿತು.

    ಇದನ್ನು ಓದಿ: ಶೀಘ್ರದಲ್ಲೇ 1-5ನೇ ತರಗತಿ ಆರಂಭವಾಗುತ್ತಾ? ಈ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿದ್ದೇನು?

    ಮುಖ್ಯಮಂತ್ರಿಯಾಗಿ ಮುಂದುವರೆಯಲು ಮಮತಾ ಬ್ಯಾನರ್ಜಿ ಶಾಸಕರಾಗಿ ಆಯ್ಕೆಯಾಗುವುದು ಅನಿವಾರ್ಯವಾಗಿದೆ. ಈ ಹಿನ್ನಲೆ ಈಗ ತಮ್ಮ ಕ್ಷೇತ್ರವಾದ ಭವಾನಿಪುರದಿಂದ ಅವರು ಚುನಾವಣೆ ಕಣಕ್ಕೆ ಇಳಿಯಲಿದ್ದಾರೆ. ಮಮತಾ ಅವರಿಗಾಗಿಯೇ ಭವಾನಿಪುರದಲ್ಲಿ ಗೆಲುವು ಸಾಧಿಸಿದ್ದ ಟಿಎಂಸಿ ಅಭ್ಯರ್ಥಿ ಶೋಭಂದೇಬ್​ ಚಟ್ಟೋಪಾಧ್ಯಾಯ ಫಲಿತಾಂಶ ಪ್ರಕಟವಾದ ಕೆಲವೇ ದಿನಗಳಲ್ಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

    ರಾಜ್ಯದಲ್ಲಿ ಕೋವಿಡ್​-19 ಪ್ರಕರಣ ಕಡಿಮೆಯಾಗಿರುವ ಹಿನ್ನೆಲೆ ಚುನಾವಣಾ ಆಯೋಗ ಚುನಾವಣೆ ನಡೆಸಲು ಸಜ್ಜಾಗಿದ್ದು, ಟಿಎಂಸಿ ಗೆಲುವಿನ ಉತ್ಸಾಹ ಹೊಂದಿದೆ. ನಾವು ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದೇವೆ ಎಂದು ಟಿಎಂಸಿ ಪ್ರಧಾನ ಕಾರ್ಯದರ್ಶಿ ಕುನಾಲ್​​ ಘೋಷ್​ ತಿಳಿಸಿದ್ದಾರೆ.

    ಆಡಳಿತಾತ್ಮಕ ಅಗತ್ಯತೆಗಳು ಮತ್ತು ಸಾರ್ವಜನಿಕ ಹಿತಾಸಕ್ತಿ ಹಾಗೂ ಖಾಲಿ ಇರುವ ಶಾಸಕ ಸ್ಥಾನ ಭರ್ತಿ ಮಾಡಲು ಈ ಚುನಾವಣೆ ನಡೆಸಬಹುದು ಎಂದು ಚುನಾವಣಾ ಆಯೋಗಕ್ಕೆ ಪಶ್ಚಿಮ ಬಂಗಾಳ ಮುಖ್ಯ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ.

    ಚುನಾವಣೆ ವೇಳೆ ಕೋವಿಡ್ -19 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಜೊತೆಗೆ ಪ್ರಚಾರದ ವೇಳೆ ಯಾವುದೇ ರೋಡ್ ಶೋ, ಯಾವುದೇ ಬೈಕ್ ರ್ಯಾಲಿಗಳನ್ನು ಅನುಮತಿಸಲಾಗುವುದಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಇನ್ನು ಈ ಉಪ ಚುನಾವಣೆಯಲ್ಲಿ ಭವಾನಿಪುರದಿಂದ ಕಾಂಗ್ರೆಸ್​ ಸ್ಪರ್ಧಿಸುವುದಿಲ್ಲ ಎಂದು ಈ ಹಿಂದೆಯೇ ಕಾಂಗ್ರೆಸ್​ ನಾಯಕ ಅಧೀರ್​ ಚೌಧರಿ ತಿಳಿಸಿದ್ದರು.

    ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.
    Published by:Seema R
    First published: