Electric Tractor: ಶೀಘ್ರದಲ್ಲಿಯೇ ಭಾರತದಲ್ಲಿ ಬ್ಯಾಟರಿ-ಎಲೆಕ್ಟ್ರಿಕಲ್ ಟ್ರ್ಯಾಕ್ಟರ್ ಬಿಡುಗಡೆ ಮಾಡುವುದಾಗಿ ಸಚಿವ ಗಡ್ಕರಿ ಘೋಷಣೆ
Electrical Tractor: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ನಂತರ ಮುಂದಿನ ದಿನಗಳಲ್ಲಿ ಬ್ಯಾಟರಿ-ಎಲೆಕ್ಟ್ರಿಕ್ ಟ್ರ್ಯಾಕ್ಟರ್ ಅನ್ನು ಬಿಡುಗಡೆ ಮಾಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಇದು ಕೃಷಿ ಉತ್ಪಾದನೆಯ ಒಟ್ಟಾರೆ ವೆಚ್ಚವನ್ನು ಕಡಿಮೆ ಮಾಡುತ್ತದೆ
ದಿನೇ ದಿನ ಪೆಟ್ರೋಲ್, ಡಿಸೇಲ್(Petrol -Diesel)ಬೆಲೆ ಏರಿಕೆಯಾಗುತ್ತಿರುವುದು (Price Hike)ವಾಹನ ಚಾಲಕರನ್ನು ಸಂಕಷ್ಟಕ್ಕೀಡು ಮಾಡುತ್ತಿದೆ. ಹೀಗಾಗಿ ಪೆಟ್ರೋಲ್, ಡಿಸೇಲ್ ವಾಹನಗಳಿಗೆ ಪರ್ಯಾಯವಾಗಿ ಎಲೆಕ್ಟ್ರಿಕ್ ವಾಹನಗಳು(Electrical Vehicles) ಮಾರುಕಟ್ಟೆಗೆ(Market)ಬಂದಿವೆ. ಅಲ್ಲದೆ ಕೇಂದ್ರ ಸರಕಾರ(Central Government)ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚು ಒತ್ತು ನೀಡುತ್ತಿದ್ದು, ಈಗಾಗಲೇ ಅನೇಕ ಪ್ರತಿಷ್ಠಿತ ಕಂಪೆನಿಗಳು ಎಲೆಕ್ಟ್ರಿಕ್ ವಾಹನಗಳನ್ನು ಮಾರುಕಟ್ಟೆಗೆ ಪರಿಚಯಿಸಿವೆ.ಇನ್ನು ಎಲೆಕ್ಟ್ರಿಕ್ ವಾಹನ ಬಳಕೆಯಿಂದ ಪ್ರಮುಖವಾಗಿ ನಗರ ಪ್ರದೇಶದಲ್ಲಿನ ವಾಯು ಮಾಲಿನ್ಯ ಗಣನೀಯವಾಗಿ ಕಡಿಮೆಯಾಗಲಿದೆ. ಇಷ್ಟೇ ಅಲ್ಲ ಇಂಧನ ಆಮದು ಪ್ರಮಾಣವೂ ಕಡಿಮೆಯಾಗಲಿದೆ. ಹೀಗಾಗಿ ಎಲೆಕ್ಟ್ರಿಕ್ ವಾಹನ ಬಳಕೆಗೆ ಕೇಂದ್ರ ಸರ್ಕಾರ ಹಾಗೂ ಆಯಾ ರಾಜ್ಯ ಸರ್ಕಾರಗಳು ವಿಶೇಷ ಒತ್ತು ನೀಡುತ್ತಿದೆ. ಹೀಗಾಗಿಯೇ ಇಂದು ಮಾರುಕಟ್ಟೆಯಲ್ಲಿ ಆಟೋಮೊಬೈಲ್ಗಳು, ದ್ವಿಚಕ್ರ ವಾಹನಗಳು, ತ್ರಿಚಕ್ರ ವಾಹನಗಳು, ಬಸ್ಗಳು ಮತ್ತು ಮೈಕ್ರೋ ಟ್ರಕ್ಗಳ ಅಬ್ಬರ ಹೆಚ್ಚಾಗಿದೆ. ಇದರ ನಡುವೆ ಭಾರತದಲ್ಲಿ ಎಲೆಕ್ಟ್ರಿಕಲ್ ಕ್ರಾಂತಿ ಮಾಡಲು ಮತ್ತೊಂದು ಎಲೆಕ್ಟ್ರಿಕಲ್ ವಾಹನ ಬಿಡುಗಡೆ ಮಾಡುವುದಾಗಿ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ.
ಶೀಘ್ರ ಮಾರುಕಟ್ಟೆಗೆ ಬ್ಯಾಟರಿ-ಎಲೆಕ್ಟ್ರಿಕ್ ಟ್ರ್ಯಾಕ್ಟರ್
ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಸಾಂಪ್ರಾದಾಯಿಕ ವಾಹನ ನಿರ್ವಹಣಾ ವೆಚ್ಚದಲ್ಲಿ ಕಳೆದ ಕೆಲ ತಿಂಗಳಿನಿಂದ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಹೀಗಿರುವಾಗ ಹೊಸ ವಾಹನ ಖರೀದಿದಾರರಿಗೆ ಎಲೆಕ್ಟ್ರಿಕ್ ವಾಹನಗಳು ಪ್ರಮುಖ ಆಕರ್ಷಣೆಯಾಗುತ್ತಿದ್ದು, ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಉತ್ತೇಜಿಸಲು ಸರ್ಕಾರದ ಜೊತೆಗೆ ವಿವಿಧ ಖಾಸಗಿ ಕಂಪನಿಗಳು ಸಹ ಇವಿ ವಾಹನ ಪೂರಕವಾದ ಯೋಜನೆಗಳನ್ನು ಜಾರಿಗೆ ತರುತ್ತಿವೆ.. ಹೀಗಾಗಿಯೇ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ನಂತರ ಮುಂದಿನ ದಿನಗಳಲ್ಲಿ ಬ್ಯಾಟರಿ-ಎಲೆಕ್ಟ್ರಿಕ್ ಟ್ರ್ಯಾಕ್ಟರ್ ಅನ್ನು ಬಿಡುಗಡೆ ಮಾಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಇದು ಕೃಷಿ ಉತ್ಪಾದನೆಯ ಒಟ್ಟಾರೆ ವೆಚ್ಚವನ್ನು ಕಡಿಮೆ ಮಾಡುತ್ತದೆ.
ಎಲೆಕ್ಟ್ರಿಕ್ ಟ್ರಾಕ್ಟರ್ ಬಿಡುಗಡೆ ದಿನಾಂಕ ಬಹಿರಂಗ ಮಾಡಲು ನಿರಾಕರಣೆ
ಇನ್ನು ಮುಂದಿನ ದಿನಗಳಲ್ಲಿ ಬ್ಯಾಟರಿ-ಎಲೆಕ್ಟ್ರಿಕ್ ಟ್ರ್ಯಾಕ್ಟರ್ ಬಿಡುಗಡೆ ಮಾಡುವುದಾಗಿ ಘೋಷಣೆ ಮಾಡಿದ ಸಚಿವರು, ಎಲೆಕ್ಟ್ರಿಕ್ ಟ್ರಾಕ್ಟರ್ ಅನ್ನು ಬಿಡುಗಡೆ ಮಾಡುವ ದಿನಾಂಕವನ್ನು ನೀಡಲು ನಿರಾಕರಿಸಿದ್ದಾರೆ. ಬಿಡುಗಡೆ ದಿನಾಂಕಗಳು ಮತ್ತು ಕಾನೂನುಗಳನ್ನು ಇನ್ನೂ ಅಂತಿಮಗೊಳಿಸಲಾಗುತ್ತಿದೆ ಎಂದು ಹೇಳಿದ್ದಾರೆ..
ವ್ಯವಸಾಯದಂತ ಸಾಂಪ್ರದಾಯಿಕ ಕ್ಷೇತ್ರಗಳಲ್ಲಿ ಕೆಲಸ ಮಾಡಲು ಎಲೆಕ್ಟ್ರಿಕ್ ಟ್ರ್ಯಾಕ್ಟರ್ಗಳಿಗೆ ಹೆಚ್ಚಿನ ಶಕ್ತಿಯ ಅಗತ್ಯವಿರುತ್ತದೆ, ಆದರೆ ಗಡ್ಕರಿ ಅವರು ಎಲೆಕ್ಟ್ರಿಕ್ ಟ್ರ್ಯಾಕ್ಟರ್ ಮೂಲಕ ಕೃಷಿ ಉತ್ಪನ್ನಗಳನ್ನು ಹೊಲಗಳಿಂದ ಮಾರುಕಟ್ಟೆಗೆ ಸಾಗಿಸಬಹುದು ಎಂದು ಹೇಳಿದರು. ಒಬ್ಬ ರೈತ 300 ಕೆಜಿ ತರಕಾರಿಗಳನ್ನು ಮಾರುಕಟ್ಟೆಗೆ ತಲುಪಿಸಬೇಕಾದರೆ, ಅವನು ಹೆಚ್ಚು ಹಣವನ್ನು ಪಾವತಿಸಬೇಕಾಗುತ್ತದೆ.ಮುಂದಿನ ಕೆಲವು ದಿನಗಳಲ್ಲಿ ನಾನು ಎಲೆಕ್ಟ್ರಿಕ್ ಟ್ರಾಕ್ಟರ್ ಅನ್ನು ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಿದ್ದೇನೆ' ಎಂದು ಗಡ್ಕರಿ ಕಳೆದ ವಾರ ಎಚ್ಡಿಎಫ್ಸಿ ಎರ್ಗೋ ಜನರಲ್ ಇನ್ಶುರೆನ್ಸ್ ಇವಿ ಶೃಂಗಸಭೆಯಲ್ಲಿ ಹೇಳಿದ್ದಾರೆ.
ದೇಶಯ ಜನಪ್ರಿಯ ಟ್ರ್ಯಾಕ್ಟರ್ ಉತ್ಪದನಾ ಕಂಪನಿಗಳಲ್ಲಿ ಒಂದಾಗಿರುವ ಸೊನಾಲಿಕಾ ಟ್ರ್ಯಾಕ್ಟರ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ ಕಂಪನಿಯು ಭಾರತದಲ್ಲಿರುವ ಏಕೈಕ ಎಲೆಕ್ಟ್ರಿಕಲ್ ಟ್ರಾಕ್ಟರ್ ಕಂಪನಿಯಾಗಿದ್ದು, ಇದು ಕಳೆದ ವರ್ಷ ತನ್ನ ಟೈಗರ್ ಸರಣಿ ಟ್ರ್ಯಾಕ್ಟರ್ ಮಾದರಿಯಲ್ಲಿ ಎಲೆಕ್ಟ್ರಿಕ್ ಮಾದರಿಯನ್ನು ಮಾರುಕಟ್ಟೆಗೆ ಪರಿಚಯಿಸಿದೆ.ಹೊಸ ಟೈಗರ್ ಎಲೆಕ್ಟ್ರಿಕ್ ಟ್ರ್ಯಾಕ್ಟರ್ ಮಾದರಿಯನ್ನು ಯುರೋಪಿನ್ ಮಾರುಕಟ್ಟೆಯಲ್ಲಿ ಅಭಿವೃದ್ದಿಗೊಳಿಸಿರುವ ಸೊನಾಲಿಕಾ ಕಂಪನಿಯು ಭಾರತದಲ್ಲಿ ಉತ್ಪಾದನೆ ಮಾಡಿ ದೇಶಿಯ ಮಾರುಕಟ್ಟೆಯೊಂದಿಗೆ ವಿದೇಶಿ ಮಾರುಕಟ್ಟೆಗಳಿಗೂ ಹೊಸ ಟ್ರ್ಯಾಕ್ಟರ್ ಮಾದರಿಯನ್ನು ರಫ್ತು ಮಾಡಿಲಿದೆ. ಹೊಸ ಟ್ರ್ಯಾಕ್ಟರ್ ಮಾದರಿಯು ಎಕ್ಸ್ಶೋರೂಂ ದರದಂತೆ ರೂ. 5.99 ಲಕ್ಷ ಬೆಲೆ ಹೊಂದಿದೆ.
Published by:ranjumbkgowda1 ranjumbkgowda1
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ