ಹೈದರಾಬಾದ್ (ಡಿ. 7): ವಿಶ್ವಾದ್ಯಂತ ಕೋಟ್ಯಂತರ ಜನರು ಕೊರೋನಾದಿಂದ ನಲುಗುತ್ತಿದ್ದಾರೆ. ಈ ಕಾಯಿಲೆಗೆ ಲಸಿಕೆ ಕಂಡುಹಿಡಿಯಲು 8-9 ತಿಂಗಳಿಂದ ವಿವಿಧ ದೇಶಗಳ ಅನೇಕ ವಿಜ್ಞಾನಿಗಳು ಸಂಶೋಧನೆ ನಡೆಸುತ್ತಲೇ ಇದ್ದಾರೆ. ಆದರೆ, ಇನ್ನೂ ಅದಕ್ಕೆ ಸೂಕ್ತ ಲಸಿಕೆ ಲಭ್ಯವಾಗಿಲ್ಲ. ಇದೀಗ ಆಂಧ್ರ ಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ಮತ್ತೊಂದು ವಿಚಿತ್ರ ಮತ್ತು ನಿಗೂಢ ರೋಗ ಕಾಣಿಸಿಕೊಂಡಿದ್ದು, ಆತಂಕ ಸೃಷ್ಟಿಸಿದೆ. ಆಂಧ್ರ ಪ್ರದೇಶದ ಎಲೂರಿನಲ್ಲಿ ಕಾಣಿಸಿಕೊಂಡಿರುವ ಈ ಕಾಯಿಲೆಯೂ ಸಾಂಕ್ರಾಮಿಕವೆಂಬ ಅನುಮಾನವಿದ್ದು, ಏಕಾಏಕಿ 290 ಹೆಚ್ಚು ಜನರು ಆಸ್ಪತ್ರೆಗೆ ಸೇರಿದ್ದಾರೆ. ಈ ಕಾಯಿಲೆಗೆ ಒಬ್ಬರು ಬಲಿಯಾಗಿದ್ದಾರೆ.
ಇದ್ದಕ್ಕಿದ್ದಂತೆ ಅಸ್ವಸ್ಥರಾದ ಎಲೂರು ಪಟ್ಟಣದ ಜನರು ನಿಗೂಢ ರೋಗದಿಂದ ಬಳಲುತ್ತಿದ್ದಾರೆ. ವಾಂತಿ, ಪ್ರಜ್ಞಾಹೀನತೆಯಿಂದ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಇನ್ನೂ ಕಡಿಮೆಯಾಗಿಲ್ಲ. ಈ ಮೂರ್ಛೆ ರೋಗದ ಲಕ್ಷಣಗಳು ಸಾಂಕ್ರಾಮಿಕವಾಗಿ ಹರಡುತ್ತಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ. ಒಂದೇ ಬಾರಿಗೆ ಒಂದೇ ರೀತಿಯ ರೋಗ ಲಕ್ಷಣಗಳಿರುವ 200ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 290 ದಾಟಿದೆ. ಈ ಸಾಂಕ್ರಾಮಿಕ ರೋಗಕ್ಕೆ ಕಾರಣವೇನೆಂದು ವೈದ್ಯರು ತಲೆ ಕೆಡಿಸಿಕೊಂಡಿದ್ದಾರೆ.
ಇದನ್ನೂ ಓದಿ: Petrol Diesel Price: ಪೆಟ್ರೋಲ್ - ಡೀಸೆಲ್ ಬೆಲೆಯಲ್ಲಿ ದಾಖಲೆಯ ಏರಿಕೆ; ಯಾವ ನಗರಗಳಲ್ಲಿ ಇಂದು ಎಷ್ಟು ಬೆಲೆ?
ಬಾಯಿಯಲ್ಲಿ ನೊರೆ ಬಂದು, ಮೂರ್ಛೆ ಹೋಗುತ್ತಿರುವ ರೋಗಿಗಳಿಂದ ಈ ಕಾಯಿಲೆ ಸಾಂಕ್ರಾಮಿಕವಾಗಿ ಹರಡುತ್ತಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಒಂದೇ ಬಾರಿಗೆ 290 ರೋಗಿಗಳು ಒಂದೇ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿರುವುದನ್ನು ಆಂಧ್ರ ಪ್ರದೇಶ ಸರ್ಕಾರ ಕೂಡ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಎಲೂರು ಆಸ್ಪತ್ರೆಗಳಿಗೆ ತೆರಳಿ ರೋಗಿಗಳನ್ನು ಭೇಟಿಯಾಗಲಿದ್ದಾರೆ. ಹಾಗೇ, ಇಂದು ಪಶ್ಚಿಮ ಗೋದಾವರಿ ಜಿಲ್ಲೆಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.
#AndhraPradesh: 70 of 227 hospitalised in #Eluru discharged, CM to meet patients on Monday
https://t.co/h6juJnkcBQ
— Pramod Chaturvedi (ANI) 🇮🇳 (@PramodChturvedi) December 7, 2020
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ