HOME » NEWS » National-international » ENCOUNTER BREAKS OUT BETWEEN SECURITY FORCES AND TERRORISTS IN J KS SHOPIAN SNVS

ಜಮ್ಮು-ಕಾಶ್ಮೀರದ ಶೋಪಿಯಾನ್​ನಲ್ಲಿ ಭದ್ರತಾ ಪಡೆ ಎನ್​ಕೌಂಟರ್: ಇಬ್ಬರು ಉಗ್ರರ ಹತ್ಯೆ

ಕೇಂದ್ರ ಮೀಸಲು ಪೊಲೀಸ್ ಪಡೆ ಮತ್ತು 44 ರಾಷ್ಟ್ರೀಯ ರೈಫಲ್ಸ್ ಮತ್ತು ವಿಶೇಷ ಕಾರ್ಯಾಚರಣೆ ತಂಡದ ಯೋಧರು ಕಣಿವೆ ರಾಜ್ಯದಲ್ಲಿ ಜಂಟಿಯಾಗಿ ಉಗ್ರ ನಿಗ್ರಹ ಕಾರ್ಯಾಚರಣೆ ನಡೆಸಿದ್ದಾರೆ.

news18-kannada
Updated:April 17, 2020, 3:23 PM IST
ಜಮ್ಮು-ಕಾಶ್ಮೀರದ ಶೋಪಿಯಾನ್​ನಲ್ಲಿ ಭದ್ರತಾ ಪಡೆ ಎನ್​ಕೌಂಟರ್: ಇಬ್ಬರು ಉಗ್ರರ ಹತ್ಯೆ
ಸಾಂದರ್ಭಿಕ ಚಿತ್ರ
  • Share this:
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದಕ್ಷಿಣ ಕಾಶ್ಮೀರದ ಶೋಪಿಯಾನ್‌ನ ಡೈರೂ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಖಚಿತ ಮಾಹಿತಿಯ ಮೇರೆಗೆ ಭದ್ರತಾ ಪಡೆಗಳು ಬೆಳಗ್ಗೆ ಶೋಧ ಕಾರ್ಯಾಚರಣೆ ನಡೆಸಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಶೋಧ ಕಾರ್ಯಾಚರಣೆ ವೇಳೆ, ಸೇನಾ ಪಡೆ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದರು. ಆಗ ಭದ್ರತಾ ಪಡೆಗಳು ಪ್ರತಿ ದಾಳಿ ಮಾಡಿದರು. ಈ ಎನ್​ಕೌಂಟರ್​ನಲ್ಲಿ ಇಬ್ಬರು ಉಗ್ರರು ಸ್ಥಳದಲ್ಲೇ ಹತ್ಯೆಯಾದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಏ. 20ರ ನಂತರ ವಾಹನ ಸಂಚಾರಕ್ಕೆ ಕೇರಳದಲ್ಲಿ ಸಮ-ಬೆಸ ಯೋಜನೆ ಜಾರಿ: ಸಿಎಂ ಪಿಣಾರಯಿ ವಿಜಯನ್

ಕೇಂದ್ರ ಮೀಸಲು ಪೊಲೀಸ್ ಪಡೆ, 44ನೇ ರಾಷ್ಟ್ರೀಯ ರೈಫಲ್ಸ್ ಮತ್ತು ವಿಶೇಷ ಕಾರ್ಯಾಚರಣೆ ತಂಡಗಳು ಜಂಟಿಯಾಗಿ ಉಗ್ರ ನಿಗ್ರಹ ಕಾರ್ಯಾಚರಣೆ ನಡೆಸುತ್ತಿವೆ.

- ಸಂಧ್ಯಾ ಎಂ.

First published: April 17, 2020, 2:56 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories