ಸುಶಾಂತ್‌ ಸಿಂಗ್ ಪ್ರಕರಣ; ವಿಚಾರಣೆ ಮುಂದೂಡುವ ನಟಿ ರಿಯಾ ಮನವಿಯನ್ನು ತಿರಸ್ಕರಿಸಿದ ಜಾರಿ ನಿರ್ದೇಶನಾಲಯ

ದಿವಂಗತ ನಟ ಸುಶಾಂತ್‌ ಸಿಂಗ್ ಅವರ ಹಣವನ್ನು ನಟಿ ರಿಯಾ ಚಕ್ರವರ್ತಿ ವೈಯಕ್ತಿಕವಾಗಿ ಬಳಸಿಕೊಂಡಿದ್ದಾರೆ. ಇಬ್ಬರ ಖಾತೆಯಲ್ಲೂ ಭಾರೀ ಪ್ರಮಾಣದ ಹಣದ ವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ಜಾರಿ ನಿರ್ದೇಶನಾಲಯ ಅಧಿಕಾರಿಗಳು ರಿಯಾ ಚಕ್ರವರ್ತಿ ವಿರುದ್ಧ ಈಗಾಗಲೇ ಮನಿ ಲಾಂಡರಿಂಗ್ ಪ್ರಕರಣ ದಾಖಲಿಸಿದ್ದಾರೆ.

ಸುಶಾಂತ್‌ ಸಿಂಗ್- ರಿಯಾ ಚಕ್ರವರ್ತಿ.

ಸುಶಾಂತ್‌ ಸಿಂಗ್- ರಿಯಾ ಚಕ್ರವರ್ತಿ.

  • Share this:
ಮುಂಬೈ (ಆಗಸ್ಟ್‌ 07); ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಿಯಾ ಚಕ್ರವರ್ತಿ ಮತ್ತು ಅವರ ಸಹೋದರ ಶೋಯಿಕ್ ಚಕ್ರವರ್ತಿ ಮುಂಬೈನ ಜಾರಿ ನಿರ್ದೇಶನಾಲಯ (ಇಡಿ) ಕಚೇರಿಗೆ ಇಂದು ಆಗಮಿಸಿದ್ದರು. ಆದರೆ, ಈ ವೇಳೆ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ತನ್ನ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ವಿಚಾರಣೆಯ ವರೆಗೆ ಮುಂಡೂಡಬೇಕು ಎಂದು ನಟಿ ರಿಯಾ ಚಕ್ರವರ್ತಿ ಸಲ್ಲಿಸಿದ್ದ ಮನವಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ ಎಂದು ತಿಳಿದುಬಂದಿದೆ.

ದಿವಂಗತ ನಟ ಸುಶಾಂತ್‌ ಸಿಂಗ್ ಅವರ ಹಣವನ್ನು ನಟಿ ರಿಯಾ ಚಕ್ರವರ್ತಿ ವೈಯಕ್ತಿಕವಾಗಿ ಬಳಸಿಕೊಂಡಿದ್ದಾರೆ. ಇಬ್ಬರ ಖಾತೆಯಲ್ಲೂ ಭಾರೀ ಪ್ರಮಾಣದ ಹಣದ ವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ಜಾರಿ ನಿರ್ದೇಶನಾಲಯ ಅಧಿಕಾರಿಗಳು ರಿಯಾ ಚಕ್ರವರ್ತಿ ವಿರುದ್ಧ ಈಗಾಗಲೇ ಮನಿ ಲಾಂಡರಿಂಗ್ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಆಗಸ್ಟ್‌ 07 ರಂದು ಮುಂಬೈನಲ್ಲಿ ವಿಚಾರಣೆಗೆ ಹಾಜರಾಗುವಂತೆಯೂ ಸೂಚನೆ ನೀಡಿದ್ದರು.

ಈ ನಡುವೆ ಸುಶಾಂತ್‌ ಸಾವಿಗೆ ನಟಿ ರಿಯಾ ಚಕ್ರವರ್ತಿ ಅವರೇ ಕಾರಣ ಎಂದು ಆರೋಪಿಸಿದ್ದ ಅವರ ತಂದೆ ಕೆ.ಕೆ. ಸಿಂಗ್ ಕಳೆದ ಜುಲೈ 28 ರಂದು ಪಾಟ್ನಾದಲ್ಲಿ ಪ್ರತ್ಯೇಕ ದೂರು ಸಲ್ಲಿಸಿದ್ದರು. ಈ ದೂರಿನಲ್ಲಿ ನಟಿ ರಿಯಾ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಆತ್ಮಹತ್ಯೆಗೆ ಪ್ರೇರಣೆ, ಕ್ರಿಮಿನಲ್ ಪಿತೂರಿ ಮತ್ತು ವಂಚನೆಗೆ ಸಂಬಂಧಿಸಿದಂತೆ ಆರೋಪಿಸಿದ್ದರು. ಅಲ್ಲದೆ, ಅಲ್ಪಾವಧಿಯಲ್ಲಿಯೇ ರಿಯಾ ಅವರು ಸುಶಾಂತ್ ಅವರ ಖಾತೆಯಿಂದ 15 ಕೋಟಿ ರೂಪಾಯಿಗಳನ್ನು ಪಡೆದಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಈ ಪ್ರಕರಣ ಬಿಹಾರದ ಪಾಟ್ನಾದಲ್ಲಿ ದಾಖಲಾಗಿದ್ದು ಇದನ್ನು ಮುಂಬೈಗೆ ವರ್ಗಾಯಿಸುವಂತೆ ಒತ್ತಾಯಿಸಿ ನಟಿ ರಿಯಾ ಚಕ್ರವರ್ತಿ ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಮುಂದಿನ ವಾರ ನಡೆಸಲಿದೆ. ಹೀಗಾಗಿ ಈ ಅರ್ಜಿ ವಿಚಾರಣೆಯ ನಂತರ ಮನಿ ಲಾಂಡರಿಂಗ್ ಸಂಬಂಧಿಸಿದ ತನ್ನ ಹೇಳಿಕೆ ಪಡೆಯುವಂತೆ ನಟಿ ರಿಯಾ ತಮ್ಮ ವಕೀಲರ ಮೂಲಕ ಇಡಿ ಅಧಿಕಾರಿಗಳ ಬಳಿ ಮನವಿ ಸಲ್ಲಿಸಿದ್ದರು. ಆದರೆ, ಇದೀಗ ಈ ಮನವಿಯನ್ನು ತಿರಸ್ಕರಿಸಲಾಗಿದೆ.

ಇದನ್ನೂ ಓದಿ : ಸುಶಾಂತ್‌ ಸಿಂಗ್ ಆತ್ಮಹತ್ಯೆ ಪ್ರಕರಣ; ನಟಿ ರಿಯಾ ಚಕ್ರವರ್ತಿ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಸಿಬಿಐ

ಹೀಗಾಗಿ ಇಂದು ರಿಯಾ ಚಕ್ರವರ್ತಿ ಜೊತೆಗೆ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಬಿಸಿನೆಸ್ ಮ್ಯಾನೇಜರ್ ಶ್ರುತಿ ಮೋದಿ ಸಹ ಇಡಿ ಕಚೇರಿಗೆ ಆಗಮಿಸಿದ್ದು ವಿಚಾರಣೆಯನ್ನು ಎದುರಿಸಿದ್ದಾರೆ. ಇನ್ನೂ ದಿವಂಗತ ನಟನ ಸ್ನೇಹಿತ ಸಿದ್ಧಾರ್ಥ್ ಪಿಥಾನಿಯನ್ನು ಆಗಸ್ಟ್ 8 ರಂದು ಏಜೆನ್ಸಿಯ ಮುಂದೆ ಹಾಜರಾಗುವಂತೆ ಇಡಿ ಸಮನ್ಸ್‌ ನೀಡಿದೆ.

ಏತನ್ಮಧ್ಯೆ ಸುಶಾಂತ್‌ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆಯ ಮೇಲ್ವಿಚಾರಣೆಗೆ ಮುಂಬೈಗೆ ಬಂದಿರುವ ಬಿಹಾರ ಐಪಿಎಸ್ ಅಧಿಕಾರಿ ವಿನಯ್ ತಿವಾರಿ ಅವರನ್ನು ಕ್ವಾರಂಟೈನ್‌ನಿಂದ ಬಿಡುಗಡೆ ಮಾಡಲು ಬೃಹತ್‌ ಮುಂಬೈ ಕಾರ್ಪೋರೇಷನ್‌ ಆಡಳಿತ ಅನುಮತಿ ನೀಡಿದೆ. ಅಲ್ಲದೆ, ಸಿಬಿಐ ಅಧಿಕಾರಿಗಳು ಈ ಪ್ರಕರಣದ ಬೆನ್ನು ಬಿದ್ದಿರುವುದು ನಟಿ ರಿಯಾ ಚಕ್ರವರ್ತಿಗೆ ಮತ್ತೊಂದು ತಲೆನೋವಾಗಿ ಪರಿಣಮಿಸಿದೆ ಎನ್ನಲಾಗುತ್ತಿದೆ.
Published by:MAshok Kumar
First published: