ESIC Recruitment 2019: ಜೂನಿಯರ್​ ರೆಸಿಡೆಂಟ್​ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ

ಗರಿಷ್ಠ 3೦ ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

news18-kannada
Updated:November 24, 2019, 2:46 PM IST
ESIC Recruitment 2019: ಜೂನಿಯರ್​ ರೆಸಿಡೆಂಟ್​ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ
job
  • Share this:
ರಾಜ್ಯ ನೌಕರರ ವಿಮಾ ನಿಗಮವು ಜ್ಯೂನಿಯರ್ ರೆಸಿಡೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸುವುದಾಗಿ ಮಾಹಿತಿ ಹೊರಡಿಸಿದೆ. 9 ಜ್ಯೂನಿಯರ್​ ಹುದ್ದೆಗಳು ಖಾಲಿ ಇದ್ದು ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಿಕೊಳ್ಳಬಹುದು. ಅರ್ಹ ಅಭ್ಯರ್ಥಿಗಳು ನವೆಂಬರ್ 28,2019ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಿದ್ಯಾರ್ಹತೆ:

ಎಂಬಿಬಿಎಸ್​ ವಿದ್ಯಾಹರ್ತೆ ಹೊಂದಿರುವ ಅಭ್ಯರ್ಥಿಗಳು ಜ್ಯೂನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಇವರು ಬೋರ್ಡ್​ ಮತ್ತು ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದಿರಬೇಕಾಗಿದೆ.

ವಯೋಮಿತಿ:

ಗರಿಷ್ಠ 3೦ ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ:

ಅರ್ಹ ಅಭ್ಯರ್ಥಿಯನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ವೇತನದ ವಿವರ:

ಜ್ಯೂನಿಯರ್ ರೆಸಿಡೆಂಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 85,000/-ರೂ ವೇತನವನ್ನು ನೀಡಲಾಗುವುದು.

ಸಂದರ್ಶನದ ವಿವರ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರಾಜ್ಯ ನೌಕರರ ವಿಮಾ ನಿಗಮದ ಅಧಿಕೃತ ವೆಬ್‌ಸೈಟ್‌ https://www.esic.nic.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ನಂತರ ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 28,2019ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ದಿನಾಂಕ ಮತ್ತು ಸಮಯ:

ನವೆಂಬರ್ 28,2019ರಂದು ಬೆಳಗ್ಗೆ 9:30ಕ್ಕೆ ಸಂದರ್ಶನ ನಡೆಯಲಿದೆ.

ಸಂದರ್ಶನ ನಡೆಯುವ ಸ್ಥಳ:

ಪಿಜಿಐಎಂಎಸ್ಆರ್ ಮತ್ತು ಮಾಡೆಲ್ ಆಸ್ಪತ್ರೆ, ರಾಜಾಜಿನಗರ, ಬೆಂಗಳೂರು.

ಹೆಚ್ಚಿನ ಮಾಹಿತಿಗೆ ಇದರ ಮೇಲೆ ಕ್ಲಿಕ್​ ಮಾಡಿ

ಇದನ್ನೂ ಓದಿ: PHOTO: ನಟ ಜಾನ್ ಅಬ್ರಹಾಂ ಬಳಿ ಇದೆ ದುಬಾರಿ ಬೆಲೆಯ ಸೂಪರ್ ಬೈಕ್​​ಗಳು

ಇದನ್ನೂ ಓದಿ: ಸ್ಯಾಂಡಲ್​​ವುಡ್​ನ ಈ ನಟಿ ಈಗ ಹೇಗಿದ್ದಾರೆ ಗೊತ್ತಾ?; ಇಲ್ಲಿದೆ ಮಾದಕ ಬೆಡಗಿಯ ಮೈಮಾಟ
First published: November 24, 2019, 2:43 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading