HOME » NEWS » National-international » EVEN IF BJP ARRESTS ME I WILL ENSURE TMC VICTORY IN POLLS FROM JAIL MAMATA BANERJI MAK

ಬಿಜೆಪಿ ನನ್ನನ್ನು ಬಂಧಿಸಿ ಜೈಲಿಗಟ್ಟಿದರೂ ಅಲ್ಲಿಂದಲೇ ಟಿಎಂಸಿ ಪಕ್ಷವನ್ನು ಗೆಲ್ಲಿಸುತ್ತೇನೆ; ಮಮತಾ ಬ್ಯಾನರ್ಜಿ

ಬಿಜೆಪಿ ಸುಳ್ಳಿನ ಕಸ ಮತ್ತು ರಾಷ್ಟ್ರದ ಅತಿದೊಡ್ಡ ಶಾಪ. ಅಧಿಕಾರ ಹಿಡಿಯುವುದಕ್ಕಾಗಿ ಟಿಎಂಸಿ ಶಾಸಕರಿಗೆ ಲಂಚ ನೀಡಲು ಪ್ರಯತ್ನಿಸುವ ಮೂಲಕ ಬಿಜೆಪಿ ನಮ್ಮ ಶಾಸಕರನ್ನು ಸೆಳೆಯಲು ಪ್ರಯತ್ನಿಸುತ್ತಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

news18-kannada
Updated:November 25, 2020, 8:35 PM IST
ಬಿಜೆಪಿ ನನ್ನನ್ನು ಬಂಧಿಸಿ ಜೈಲಿಗಟ್ಟಿದರೂ ಅಲ್ಲಿಂದಲೇ ಟಿಎಂಸಿ ಪಕ್ಷವನ್ನು ಗೆಲ್ಲಿಸುತ್ತೇನೆ; ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
  • Share this:
ಕೋಲ್ಕತ್ತಾ (ನವೆಂಬರ್​ 25); ಬಿಹಾರ ಚುನಾವಣೆ ಬೆನ್ನಿಗೆ ಮುಂದಿನ ವರ್ಷದ ಆರಂಭದಲ್ಲೇ ಪಶ್ಚಿಮ ಬಂಗಾಳಕ್ಕೂ ಚುನಾವಣೆ ನಡೆಯಲಿದೆ. ಹೀಗಾಗಿ ಬಂಗಾಳದಲ್ಲೂ ಬಿಜೆಪಿ ಅಧಿಕಾರಕ್ಕೆ ಏರಬೇಕು ಎಂಬ ಮಹತ್ವಾಕಾಂಕ್ಷೆಯಿಂದ ಬಿಜೆಪಿ ನಾಯಕರು ಕಳೆದ ಹಲವು ವರ್ಷಗಳಿಂದ ಸಾಕಷ್ಟು ಕಸರತ್ತು ನಡೆಸುತ್ತಿದ್ದಾರೆ. ಇತ್ತೀಚೆಗೆ ಕೇಂದ್ರ ಗೃಹ ಸಚಿವ ಅಮಿತ್​ ಶಾ ಸಹ ಹಲವಾರು ಬಾರಿ ಬಂಗಾಳಕ್ಕೆ ತೆರಳಿ ಪಕ್ಷವನ್ನು ಭೂತ್ ಮಟ್ಟದಿಂದ ಸಂಘಟಿಸಲು ಶ್ರಮವಹಿಸಿದ್ದರು. ಈ ಹಿನ್ನೆಲೆಯಲ್ಲಿ ಟಿಎಂಸಿ ನಾಯಕರು ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಹ ಮುಂದಿನ ಬಂಗಾಳ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಅಲ್ಲದೆ, ಬಿಜೆಪಿ-ಟಿಎಂಸಿ ನಾಯಕರ ನಡುವಿನ ಕೆಸರೆರಚಾಟವೂ ಸಹ ನಿತ್ಯವೂ ನಡೆಯುತ್ತಿದೆ. ಇಂದು ಸಹ ಇದೇ ರೀತಿಯ ಹೇಳಿಕೆ ನೀಡಿರುವ ಮಮತಾ ಬ್ಯಾನರ್ಜಿ, " ಬಿಜೆಪಿ ನನ್ನನ್ನು ಬಂಧಿಸಿ ಜೈಲಿಗಟ್ಟಿದರೂ ಅಲ್ಲಿಂದಲೇ ಟಿಎಂಸಿ ಪಕ್ಷವನ್ನು ಗೆಲ್ಲಿಸುವೆ" ಎಂದು ಹೇಳುವ ಮೂಲಕ ಮಮತಾ ಬ್ಯಾನರ್ಜಿ ಬಿಜೆಪಿ ನಾಯಕರಿಗೆ ಮತ್ತೊಮ್ಮೆ ಟಾಂಗ್ ನೀಡಿದ್ದಾರೆ.

ಈ ವೇಳೆ ಬಿಜೆಪಿ ವಿರುದ್ಧ ಟೀಕಾಸ್ತ್ರ ಪ್ರಯೋಗಿಸಿರುವ ಮಮತಾ ಬ್ಯಾನರ್ಜಿ, "ಬಿಜೆಪಿ ಸುಳ್ಳಿನ ಕಸ ಮತ್ತು ರಾಷ್ಟ್ರದ ಅತಿದೊಡ್ಡ ಶಾಪ. ಅಧಿಕಾರ ಹಿಡಿಯುವುದಕ್ಕಾಗಿ ಟಿಎಂಸಿ ಶಾಸಕರಿಗೆ ಲಂಚ ನೀಡಲು ಪ್ರಯತ್ನಿಸುವ ಮೂಲಕ ಬಿಜೆಪಿ ನಮ್ಮ ಶಾಸಕರನ್ನು ಸೆಳೆಯಲು ಪ್ರಯತ್ನಿಸುತ್ತಿದೆ" ಎಂದು ಆರೋಪಿಸಿದ್ದಾರೆ. ಅಲ್ಲದೆ, "ಕೆಲವರು ಕೇಸರಿ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಬಹುದೆಂಬ ಭ್ರಮೆಯಲ್ಲಿದ್ದಾರೆ" ಎಂದು ಅಪಹಾಸ್ಯ ಮಾಡಿದ್ದಾರೆ.

ಇನ್ನೂ ಚುನಾವಣಾ ಸಂದರ್ಭದಲ್ಲಿ ಬಿಜೆಪಿ ಇಡಿ ಮತ್ತು ಸಿಬಿಐ ಅನ್ನು ದುರ್ಬಳಕೆ ಮಾಡಿಕೊಳ್ಳುತ್ತದೆ ಎಂದು ಟೀಕಿಸಿರುವ ಅವರು, "ಚುನಾವಣೆ ಬಂದಾಗಲೆಲ್ಲಾ ಬಿಜೆಪಿ ಟಿಎಂಸಿ ನಾಯಕರನ್ನು ಬೆದರಿಸಲು ಸ್ಟಿಂಗ್ ಆಪರೇಷನ್ ಮತ್ತು ಹಗರಣಗಳ ವಿಷಯಗಳನ್ನು ತರುತ್ತಾರೆ. ಆದರೆ, ನಾನು ಬಿಜೆಪಿಯವರಿಗೆ ಸ್ಪಷ್ಟವಾಗಿ ಹೇಳುತ್ತೇನೆ, ನಾನು ಬಿಜೆಪಿ ಅಥವಾ ಅದರ ಏಜೆನ್ಸಿಗಳಿಗೆ ಹೆದರುವುದಿಲ್ಲ. ಅವರಿಗೆ ಧೈರ್ಯವಿದ್ದರೆ ಅವರು ನನ್ನನ್ನು ಬಂಧಿಸಿ ಕಂಬಿಗಳ ಹಿಂದೆ ಇಡಬಹುದು. ಆದರೆ, ನಾನು ಜೈಲಿನಿಂದ ಚುನಾವಣೆಯಲ್ಲಿ ಹೋರಾಡಿ, ಟಿಎಂಸಿ ಪಕ್ಷವನ್ನು ಗೆಲ್ಲಿಸುವೆ" ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಚೀನಾದ 43 ಅಪ್ಲಿಕೇಶನ್​ಗಳು ಬ್ಯಾನ್; ಭಾರತದ ಕ್ರಮ WTO ನಿಯಮಗಳ ಉಲ್ಲಂಘನೆ ಎಂದ ಡ್ರ್ಯಾಗನ್ ರಾಷ್ಟ್ರ

ಇತ್ತೀಚೆಗೆ ಮುಕ್ತಾಯಗೊಂಡ ಬಿಹಾರ ಚುನಾವಣೆಯನ್ನು ಉಲ್ಲೇಖಿಸಿ ಬ್ಯಾನರ್ಜಿ, "ಆರ್‌ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಅವರನ್ನು ಸಹ ಬಿಜೆಪಿ ಜೈಲಿಗೆ ಕಳುಹಿಸಿತ್ತು. ಆದರೂ ಅವರ ಪಕ್ಷ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಿದೆ. ಹೀಗಿದ್ದಾಗ್ಯೂ  ಬಿಜೆಪಿ ಬಿಹಾರ ಚುನಾವಣೆಯಲ್ಲಿ ಮೋಸದಿಂದಲೇ ಗೆದ್ದಿದೆಯೇ ಹೊರತು, ಜನಾದೇಶದಿಂದಲ್ಲ. ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಯಾವುದೇ ಅವಕಾಶ ಅಥವಾ ಆಕಸ್ಮಿಕಗಳು ಇಲ್ಲ. ನಾವು ಮತ್ತೆ ದೊಡ್ಡ ಜನಾದೇಶದೊಂದಿಗೆ ಅಧಿಕಾರಕ್ಕೆ ಮರಳುತ್ತೇವೆ" ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Youtube Video

ಇತ್ತ ಪಶ್ಚಿಮ ಬಂಗಾಳ ಚುನಾವಣೆ ಮೇಲೆ ಕಣ್ಣೀಟ್ಟಿರುವ ಬಿಜೆಪಿ ಸರ್ಕಾರ ತೃಣಮೂಲ ಕಾಂಗ್ರೆಸ್ ಆಡಳಿತವನ್ನು ಗೂಂಡಾ ರಾಜ್‌ಗೆ ಹೋಲಿಸಿದೆ. ರಾಜ್ಯದಲ್ಲಿರುವ ಪೊಲೀಸ್ ಪಡೆ ಗೂಂಡಾ ರಾಜ್ ಸರ್ಕಾರದ ವಿರುದ್ದ ಏನೂ ಮಾಡುವುದಿಲ್ಲ, ಭಾರತಿಯ ಜನತಾ ಪಕ್ಷ ಅಧಿಕಾರಕ್ಕೆ ಬಂದರೆ ಪೊಲೀಸರು ಬೂಟು ನೆಕ್ಕುವಂತೆ ಮಾಡುತ್ತೇವೆ ಎಂದು ಬಿಜೆಪಿ ಮುಖಂಡ ರಾಜು ಬ್ಯಾನರ್ಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 2011 ರಿಂದ ತೃಣಮೂಲ ಕಾಂಗ್ರೆಸ್ ಪಶ್ಚಿಮ ಬಂಗಾಳವನ್ನು ಆಳುತ್ತಿದೆ. 294 ಸದಸ್ಯರ ಪಶ್ಚಿಮ ಬಂಗಾಳ ವಿಧಾನಸಭೆಗೆ ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ.
Published by: MAshok Kumar
First published: November 25, 2020, 8:35 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories