ನವ ದೆಹಲಿ (ಅಕ್ಟೋಬರ್ 16); ಕೊರೋನಾ ಲಾಕ್ಡೌನ್ ಸಂದರ್ಭದಲ್ಲಿ ಇಡೀ ವಿಶ್ವದ ಆರ್ಥಿಕತೆ ಪಾತಾಳಕ್ಕೆ ಕುಸಿದಿದೆ. ಈ ನಡುವೆ ಏಷ್ಯಾದ ಬಲಿಷ್ಟ ಆರ್ಥಿಕತೆ ಎನಿಸಿಕೊಂಡ ಭಾರತದ ಜಿಡಿಪಿ ಮೌಲ್ಯ ಸಹ ಶೇ.-23.8ಕ್ಕೆ ಕುಸಿದಿದೆ. ಆದರೆ, ಇದೇ ಸಂದರ್ಭದಲ್ಲಿ ನೆರೆಯ ಬಾಂಗ್ಲಾದೇಶ, ಶ್ರೀಲಂಕಾ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಆರ್ಥಿಕತೆ ಭಾರತದ ಜಿಡಿಪಿ ಗಿಂತ ಮುಂದಿದೆ ಎಂದು ಇತ್ತೀಚೆಗೆ ಎಂದು ಐಎಂಎಫ್ (International Monetary Fund) ಒಂದು ವರದಿಯನ್ನು ಬಿಡುಗಡೆ ಮಾಡಿತ್ತು. ಇದೇ ವರದಿಯನ್ನು ಮುಂದಿಟ್ಟು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್ ಪಕ್ಷದ ಮಾಜಿ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ, "ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ಸಹ ಕೋವಿಡ್ ಬಿಕ್ಕಟ್ಟನ್ನು ಭಾರತಕ್ಕಿಂತ ಉತ್ತಮವಾಗಿ ನಿಭಾಯಿಸಿದೆ. ಇದು ಬಿಜೆಪಿ ಸರ್ಕಾರದ ಮತ್ತೊಂದು ಘನ ಸಾಧನೆ” ಎಂದು ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ.
ಅಂತಾರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ವರದಿಗಳನ್ನು ಉಲ್ಲೇಖಿಸಿ ಐಎಂಎಫ್ ಸಂಸ್ಥೆ ಬಿಡುಗಡೆ ಮಾಡಿರುವ ಪ್ರೊಜೆಕ್ಷನ್ ಗ್ರಾಫ್ ಅನ್ನು ಟ್ವೀಟ್ನಲ್ಲಿ ಹಂಚಿಕೊಳ್ಳುವ ಮೂಲಕ ಭಾರತದ ನೆರೆಹೊರೆಯ ದೇಶಗಳಾದ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾ ದೇಶಗಳ ಆರ್ಥಿಕತೆಯ ಜೊತೆಗೆ ಹೋಲಿಕೆ ಮಾಡಿ ಅವುಗಳಿಗಿಂತ ಕೆಳಮಟ್ಟದಲ್ಲಿರುವ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ರಾಹುಲ್ ಗಾಂಧಿ,
Another solid achievement by the BJP government.
Even Pakistan and Afghanistan handled Covid better than India. pic.twitter.com/C2kILrvWUG
— Rahul Gandhi (@RahulGandhi) October 16, 2020
Solid achievement of 6 years of BJP’s hate-filled cultural nationalism:
Bangladesh set to overtake India.
👏👏👏 pic.twitter.com/waOdsLNUVg
— Rahul Gandhi (@RahulGandhi) October 14, 2020
ಇದನ್ನೂ ಓದಿ : ಪೀಪಲ್ಸ್ ಅಲಯನ್ಸ್; ಜಮ್ಮು ಕಾಶ್ಮೀರದಲ್ಲಿ ಮತ್ತೆ ಕಲಂ 370 ಮರುಸ್ಥಾಪನೆಗಾಗಿ ಒಂದಾದ ರಾಜಕೀಯ ಪಕ್ಷಗಳು
ಆದರೆ, ಈ ಎಲ್ಲಾ ಆರೋಪಗಳನ್ನೂ ತಳ್ಳಿಹಾಕಿರುವ ಕೇಂದ್ರ ಸರ್ಕಾರ ಐಎಂಎಫ್ ಗ್ರಾಫ್ ಅನ್ನು ನಿರಾಕರಿಸಿದ್ದು, ದೇಶದ ತಲಾ ಆದಾಯ ಜಿಡಿಪಿ ಹೆಚ್ಚಾಗಿದೆ ಎಂದು ವಾದಿಸಿದೆ. 2014-15ರಲ್ಲಿ 83,091 ರೂಗಳಿಂದ 2019-20ರಲ್ಲಿ 1,08,620 ರೂಗಳಿಗೆ ಏರಿದೆ. ಇದು ಶೇ.30.7 ರಷ್ಟು ಹೆಚ್ಚಳವಾಗಿದೆ ಎಂದಿದೆ. 2019ರಲ್ಲಿ ಭಾರತದ ಜಿಡಿಪಿ ಬಾಂಗ್ಲಾದೇಶಕ್ಕಿಂತ 11 ಪಟ್ಟು ಹೆಚ್ಚಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ