Evening Digest: ಫಡ್ನವೀಸ್, ಶಿಂಧೆ ಹೆಗಲಿಗೆ ‘ಮಹಾ‘ ಹೊಣೆ, ಸದ್ಯಕ್ಕಿಲ್ಲ ನೈಸ್ ರೋಡ್ ಟೋಲ್ ದರ ಏರಿಕೆ; ಈ ಸಂಜೆಯ ಟಾಪ್ ನ್ಯೂಸ್ ಇಲ್ಲಿವೆ

ಇಂದಿನ ಪ್ರಮುಖ ಸುದ್ದಿ ಯಾವುದು? ದೇಶ-ವಿದೇಶಗಳಲ್ಲಿ ಏನೇನಾಯ್ತು? ರಾಜಕೀಯ, ಕ್ರೀಡೆ, ಸಿನಿಮಾ ಕ್ಷೇತ್ರದ ಟಾಪ್ ನ್ಯೂಸ್‌ಗಳೇನು? ನೀವು ಮಿಸ್ ಮಾಡದೆ ಓದಲೇ ಬೇಕಾದ ಟಾಪ್ ಸುದ್ದಿಗಳು ಇಲ್ಲಿವೆ...

ಸಂಜೆ ಸುದ್ದಿ

ಸಂಜೆ ಸುದ್ದಿ

  • Share this:
ಶಿಂಧೆಗೆ ಮಹಾರಾಷ್ಟ್ರ ಸರ್ಕಾರದ ಹೊಣೆ

ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ (Devendra Fadnavis) ಮಹಾರಾಷ್ಟ್ರ ಮುಖ್ಯಮಂತ್ರಿ ಆಗುವ ಕುರಿತು ವರದಿಯಾಗಿದೆ.  ಶಿವಸೇನೆಯ ಬಂಡಾಯ ಶಾಸಕರ ಬೆಂಬಲದೊಂದಿಗೆ ಇಂದೇ (ಜೂನ್ 30) ದೇವೇಂದ್ರ ಫಡ್ನವೀಸ್ ಮಹಾರಾಷ್ಟ್ರದ ಮುಖ್ಯಮಂತ್ರಿ (Maharashtra Next CM) ಆಗಿ ಪದಗ್ರಹಣ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಲ್ಲದೇ ಶಿವಸೇನೆ ಬಂಡಾಯ ಶಾಸಕರ ನೇತೃತ್ವ ವಹಿಸಿದ್ದ ಹಿರಿಯ ನಾಯಕ ಏಕನಾಥ ಶಿಂಧೆ (Eknath Shindhe) ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಲಿರುವುದು ಸಹ ಸ್ಪಷ್ಟಗೊಂಡಿದೆ ಎಂದು ವರದಿಯಾಗಿದೆ. ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ದೇವೇಂದ್ರ ಫಡ್ನವೀಸ್ ಮತ್ತು ಏಕನಾಥ ಶಿಂಧೆ ಇಂದು ಭೇಟಿಯಾಗಲಿದ್ದಾರೆ. ಈಮೂಲಕ ಮಹಾರಾಷ್ಟ್ರ ಸರ್ಕಾರದ ರಾಜಕೀಯ ಬೆಳವಣಿಗೆಗೆ ( (Maharashtra Politics Updates) ಒಂದು ಹಂತಕ್ಕೆ ತಲುಪಲಿದೆ.

ಎಸಿಬಿಯೇ ಭ್ರಷ್ಟರ ಕೂಪ -ಹೈಕೋರ್ಟ್ ತರಾಟೆ

ಭ್ರಷ್ಟಾಚಾರ ನಿಗ್ರಹ ದಳಕ್ಕೆ (ACB) ಭ್ರಷ್ಟಾಚಾರವೇ ದಂಧೆಯಾಗಿ ಪರಿಣಮಿಸಿದೆ. ಭ್ರಷ್ಟಾಚಾರ (Corruption) ತಡೆಯಲು ರಚನೆಯಾಗಿರುವ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಕಚೇರಿಗಳು ಕಲೆಕ್ಷನ್ ಸೆಂಟರ್‌ಗಳಾಗಿದ್ದು, ಸ್ವತಃ ಎಸಿಬಿ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರೇ (ಎಡಿಜಿಪಿ) ಕಳಂಕಿತ ಅಧಿಕಾರಿಯಾಗಿದ್ದಾರೆ. ದೊಡ್ಡ ದೊಡ್ಡ ಐಎಎಸ್, ಐಪಿಎಸ್ ಅಧಿಕಾರಿಗಳನ್ನು (IAS, IPS Officers) ಹಿಡಿಯೋದು ಬಿಟ್ಟು ಅವರ ಬಾಲಂಗೋಚಿಗಳಾಗಿರುವ ಗುಮಾಸ್ತರನ್ನು ಹಿಡಿದು ನ್ಯಾಯಾಲಯಕ್ಕೆ ಬರಲಾಗುತ್ತಿದೆ ಎಂದು ಕರ್ನಾಟಕ ಹೈಕೋರ್ಟ್‌ (High Court) ನಿನ್ನೆ ಮೌಖಿಕವಾಗಿ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: High Court: ಎಸಿಬಿಯೇ ಭ್ರಷ್ಟರ ಕೂಪ, ವಸೂಲಿ ಕೇಂದ್ರ -ಹೈಕೋರ್ಟ್ ತರಾಟೆ

GST ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯ

ನವದೆಹಲಿ, ಜೂ. 30: ಇತ್ತೀಚೆಗೆ ಚಂಡೀಘಡದಲ್ಲಿ ಜಿಎಸ್‌ಟಿ ಕೌನ್ಸಿಲ್‌ ಸಭೆ (GST Council Meeting) ನಡೆಯಿತು. ಅದರಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ (Basavaraj Bommai) ಜಿಎಸ್‌ಟಿ ಪರಿಹಾರ ಮುಂದುವರೆಸುವಂತೆ ಒತ್ತಾಯ ಮಾಡಿಲ್ಲ. ಜಿಎಸ್‌ಟಿ ಜಾರಿಯಾದ ಮೇಲೆ ರಾಜ್ಯಗಳಿಗೆ ಆಗುವ ನಷ್ಟ ಭರಿಸಿ ಕೊಡಲು 14% ಪರಿಹಾರ ನೀಡಬೇಕು ಎಂದು ಹಿಂದೆ ತೀರ್ಮಾನವಾಗಿತ್ತು. 2017ರ ಜುಲೈ 1ರಿಂದ ಇದು ಇದೇ ಜೂನ್ 30ಕ್ಕೆ ಕೊನೆಯಾಗಲಿದೆ. ಈಗ ಪರಿಹಾರ ಕೊಡುವುದನ್ನು ನಿಲ್ಲಿಸಿದರೆ ನಮ್ಮ ರಾಜ್ಯವೊಂದಕ್ಕೆ ವರ್ಷಕ್ಕೆ 20,000 ಕೋಟಿ ರೂಪಾಯಿ ನಷ್ಟವಾಗುತ್ತದೆ. ಕೂಡಲೇ ಜಿಎಸ್‌ಟಿ ಪರಿಹಾರವನ್ನು ಮುಂದುವರೆಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಆಗ್ರಹಿಸಿದ್ದಾರೆ.

ಸದ್ಯಕ್ಕಿಲ್ಲ ನೈಸ್ ರೋಡ್ ಟೋಲ್ ದರ ಏರಿಕೆ

ಬೆಂಗಳೂರು (ಜೂ 6): ರಾಜ್ಯದ ಜನರಿಗೆ ಬೆಲೆ ಏರಿಕೆ (Price Hike) ವಿಚಾರ ಹೊಸದೇನು ಅಲ್ಲ. ಇತ್ತೀಚಿನ ದಿನಗಳಲ್ಲಿ ಎಲ್ಲ ವಸ್ತುಗಳ ಬೆಲೆ ಹೆಚ್ಚಾಗಿ, ಜೀವನವೇ ದುಬಾರಿ ಆಗಿ ಹೋಗಿದೆ. ಪೆಟ್ರೋಲ್​, ಡಿಸೇಲ್​ ಹೆಚ್ಚಳ ಬಳಿಕ ಟೋಲ್​ಗಳ ದರ ಕೂಡ ಹೆಚ್ಚಾಗಿತ್ತು.  ನೈಸ್​ ರಸ್ತೆ ಟೋಲ್ ಹೆಚ್ಚಳ ಮಾಡಿದ್ದ ಸಂಸ್ಥೆ​ ಜುಲೈ 1 ರಿಂದ ಶುಲ್ಕ ಹೆಚ್ಚಳ (Fee Increases From July 1)  ಮಾಡುವುದಾಗಿ ನೈಸ್ ಟೋಲ್ (Nice Road) ಕಂಪನಿ ಹೇಳಿತ್ತು. ಹೊಸೂರು ರಸ್ತೆಯಿಂದ ತುಮಕೂರು ರಸ್ತೆಯವರೆಗಿನ ನೈಸ್ ಟೋಲ್ ರಸ್ತೆ, ಮಾಗಡಿ ರಸ್ತೆ, ಮೈಸೂರು ರಸ್ತೆ, ಕನಕಪುರ ರಸ್ತೆ, ಬನ್ನೇರುಘಟ್ಟ ರಸ್ತೆಯ ಟೋಲ್ ಗೆ ಅನುಗುಣವಾಗಿ ಟೋಲ್ ಶುಲ್ಕ (Toll Fee) ಹೆಚ್ಚಳ ಮಾಡುವುದಾಗಿ ಪ್ರಕಟಣೆ ಹೊರಡಿಸಿತ್ತು. ಆದರೆ ಇದೀಗ ಶುಲ್ಕ ಏರಿಕೆಯನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಇದನ್ನೂ ಓದಿ: NICE Road Toll Price Hike: ನೈಸ್ ರಸ್ತೆ ಟೋಲ್ ದರ ಹೆಚ್ಚಳ; ಹೊಸ ದರಗಳ ವಿವರ ಇಲ್ಲಿದೆ

ಕಾಂಗ್ರೆಸ್ 130ಕ್ಕೂ ಹೆಚ್ಚು ಸ್ಥಾನ ಗೆಲ್ಲುವುದು ನಿಶ್ಚಿತ

ನವದೆಹಲಿ, ಜೂ. 30: ನಾವು 150 ಸ್ಥಾನಗಳನ್ನು ಗೆಲ್ಲಬೇಕು ಎಂದು ಗುರಿ ಇಟ್ಟುಕೊಂಡಿದ್ದೇವೆ. ಸದ್ಯ ಕಾಂಗ್ರೆಸ್ ಪಕ್ಷ (Congress Party) 130ಕ್ಕೂ ಅಧಿಕ ಸ್ಥಾನ ಗೆಲ್ಲುವ ನಿರೀಕ್ಷೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ (Opposition Leader Siddaramaiah) ಹೇಳಿದರು. ಕಾಂಗ್ರೆಸ್ ಸಮೀಕ್ಷೆ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ (Chief Minister Basavaraja Bommai) ನೀಡಿರುವ ಹೇಳಿಕೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, 'ಸಿಎಂ ಅಭಿಪ್ರಾಯ ಬೇರೆ ಇರುತ್ತೆ. ಜನರ ಅಭಿಪ್ರಾಯ ಬೇರೆ ಇರುತ್ತೆ. ಮಾದರಿ ಸಮೀಕ್ಷೆ ಎಂದರೆ ಜನರ ಅಭಿಪ್ರಾಯ ಸಂಗ್ರಹಿಸಲಾಗಿರುತ್ತೆ. ಅಂದರೆ ಮುಖ್ಯಮಂತ್ರಿಗಳು ಜನರ ಅಭಿಪ್ರಾಯ ಒಪ್ಪಿಕೊಳ್ಳಲ್ಲ ಎಂದಾಯಿತು. ಅದೇನೇ ಇದ್ದರೂ ನಾವು ಸ್ಪಷ್ಟಬಹುಮತದ ಮೂಲಕ ಗೆಲ್ಲುವುದನ್ನು ಯಾರಿಂದಲೂ ಅಲ್ಲಗೆಳೆಯಲು ಆಗಲ್ಲ' ಎಂದರು.
Published by:Pavana HS
First published: