Evening Digest: ಕಮಲಾ ಹ್ಯಾರಿಸ್​ ಅಮೆರಿಕ ಉಪಾಧ್ಯಕ್ಷೆ, ಸಸಿಕಾಂತ್ ಸೆಂಥಿಲ್ ನಾಳೆ ಕಾಂಗ್ರೆಸ್​ಗೆ ಸೇರ್ಪಡೆ

ವಿದೇಶಗಳಲ್ಲಿನ ಸುದ್ದಿ ಪ್ರತಿಯೊಬ್ಬರ ಜೀವನದ ಆಗುಹೋಗುಗಳ ಮೇಲೆ ಪರಿಣಾಮವನ್ನು ಹೊಂದಿದ್ದು, ಈ ಹಿನ್ನೆಲೆಯಲ್ಲಿ ಇಂದು ನಡೆದ ಘಟನಾವಳಿಗಳ ಕುರಿತು ನೀವು ಓದಲೇಬೇಕಾದ ಸುದ್ದಿಗಳಿವು

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  1.ಜೋಸೆಫ್​ ಬಿಡೆನ್​ ಅಮೆರಿಕ ಅಧ್ಯಕ್ಷರಾಗುತ್ತಿದ್ದಂತೆ ಕಮಲ ಹ್ಯಾರಿಸ್​ ಉಪಾಧ್ಯಕ್ಷರಾಗಿದ್ದಾರೆ. ಈ ಮೂಲಕ ಶ್ವೇತಭವನಕ್ಕೆ ಪ್ರವೇಶಿಸಿದ ಬ್ಲಾಕ್​ ಅಮೆರಿಕನ್​ ಅವರಾಗಿದ್ದಾರೆ. ಅಮೆರಿಕದ ಉಪಾಧ್ಯಕ್ಷ ಸ್ಥಾನ ಅಲಂಕರಿಸಿದ ಮೊದಲ ಏಷ್ಯಾನ್​ ಅಮೆರಿಕನ್​ ಮಹಿಳೆ ಇವರಾಗಿದ್ದಾರೆ.

  Kamala Harris: ಭಾರತೀಯ ಮೂಲದ ಕಪ್ಪು ಮಹಿಳೆ ಕಮಲಾ ಹ್ಯಾರಿಸ್​ ಅಮೆರಿಕ ಉಪಾಧ್ಯಕ್ಷೆ

  2.ಅಮೆರಿಕದ ನೂತನ ಅಧ್ಯಕ್ಷರಾಗಿ ಜೋ ಬೈಡನ್ ಆಯ್ಕೆ ಆಗುತ್ತಿರುವಂತೆಯೇ ಅಲ್ಲಿ ಹೊಸ ನೀತಿಗಳನ್ನ ರೂಪಿಸುವ ಪ್ರಕ್ರಿಯೆಗಳನ್ನು ಪ್ರಾರಂಭಿಸಲು ಚಿಂತನೆ ನಡೆದಿದೆ. ಅಮೆರಿಕಕ್ಕೆ ಇನ್ನಷ್ಟು ಬಲ ನೀಡಲು ವಲಸಿಗರಿಗೆ ಹೆಚ್ಚು ಮಣೆ ಹಾಕಲು ಹೊಸ ಸರ್ಕಾರ ಯೋಜಿಸಿದೆ. ಅದರಂತೆ 5 ಸಾವಿರ ಭಾರತೀಯರೂ ಸೇರಿದಂತೆ ದಾಖಲೆರಹಿತರಾಗಿ ಉಳಿದಿರುವ ಒಂದು ಕೋಟಿಗೂ ಹೆಚ್ಚು ವಲಸಿಗರಿಗೆ ಅಮೆರಿಕದ ಪೌರತ್ವ ನೀಡುವ ಯೋಜನೆ ಹಮ್ಮಿಕೊಳ್ಳಲಾಗುತ್ತಿದೆ.

  ಅಮೆರಿಕದ ನೂತನ ಅಧ್ಯಕ್ಷರಿಂದ ಐದು ಲಕ್ಷ ಭಾರತೀಯರಿಗೆ ಪೌರತ್ವ ಭಾಗ್ಯ?

  3.ರಾಜಕೀಯ ಪಕ್ಷಗಳನ್ನು ಸೇರುತ್ತಿರುವ ಅಧಿಕಾರಿಗಳ ಸಂಖ್ಯೆ ಇತ್ತೀಚೆಗೆ ಹೆಚ್ಚಾಗಿದೆ. ಇತ್ತೀಚೆಗೆ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಿಜೆಪಿ ಸೇರಿದ್ದರು. ಈಗ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್ ಸೇರುತ್ತಿದ್ದಾರೆ. ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ನವೆಂಬರ್ 9ರಂದು ತಮಿಳುನಾಡಿನ ಚೆನ್ನೈನಲ್ಲಿ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರುತ್ತಿದ್ದಾರೆ.

  Sasikanth Senthil: ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ನಾಳೆ ಕಾಂಗ್ರೆಸ್​ಗೆ ಸೇರ್ಪಡೆ

  4. ಡೊನಾಲ್ಡ್ ಟ್ರಂಪ್ ವಿರುದ್ಧ ಗೆಲುವು ಸಾಧಿಸಿ ಅಮೆರಿಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜೋ ಬೈಡನ್ ಅವರು ದೇಶದ ಜನರಲ್ಲಿ ಒಗ್ಗಟ್ಟು ಮೂಡಿಸುವ ತಮ್ಮ ಇಚ್ಛೆಯನ್ನು ತೋರ್ಪಡಿಸಿದ್ದಾರೆ. ಡೆಲಾವೇರ್ ರಾಜ್ಯದ ವಿಲ್ಮಿಂಗ್ಟನ್ ನ ಗರದಲ್ಲಿರುವ ತಮ್ಮ ಮನೆಯ ಬಳಿ ನೆರೆದಿದ್ದ ಬೆಂಬಲಿಗರನ್ನುದ್ದೇಶಿಸಿ ಮಾತನಾಡುತ್ತಾ ಬೈಡನ್ ಅವರು ಈಗ ಅಮೆರಿಕಕ್ಕೆ ಚಿಕಿತ್ಸಕ ಸಮಯ ಬಂದಿದೆ ಎಂದರು.

  ಒಡಕು ನಿವಾರಿಸಿ ಜನರನ್ನು ಒಗ್ಗೂಡಿಸುವುದು ನನ್ನ ಗುರಿ: ಅಮೆರಿಕ ನೂತನ ಅಧ್ಯಕ್ಷ ಜೋ ಬೈಡನ್

  5.ಡೊನಾಲ್ಡ್​ ಟ್ರಂಪ್ ಅವರನ್ನು ಹಿಂದಿಕ್ಕಿ ಅಮೆರಿಕದ 4ನೇ ಅಧ್ಯಕ್ಷರಾಗಿ ಡೆಮಾಕ್ರಟಿಕ್ ಪಕ್ಷದ ಜೋ ಬಿಡೆನ್ ಆಯ್ಕೆಯಾಗಿದ್ದಾರೆ. ತೀವ್ರ ಕುತೂಹಲ ಕೆರಳಿಸಿದ್ದ ಅಮೆರಿಕದ ಚುನಾವಣೆಯಲ್ಲಿ ಡೊನಾಲ್ಡ್​ ಟ್ರಂಪ್ ಎರಡನೇ ಬಾರಿ ಅಧಿಕಾರಕ್ಕೇರಲು ಕನಸು ಕಂಡಿದ್ದರು. ಆದರೆ, ಆ ಕನಸು ಭಗ್ನವಾಗಿದ್ದು, ಜೋ ಬಿಡೆನ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಕುರಿತು ಅಧಿಕೃತ ಘೋಷಣೆಯೊಂದೇ ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಅನೇಕ ನಾಯಕರು ಜೋ ಬಿಡೆನ್​ಗೆ ಟ್ವಿಟ್ಟರ್​ನಲ್ಲಿ ಅಭಿನಂದನೆ ತಿಳಿಸಿದ್ದಾರೆ.

  ಅಮೆರಿಕ ಚುನಾವಣೆ; ಜೋ ಬಿಡೆನ್, ಕಮಲಾ ಹ್ಯಾರೀಸ್​ಗೆ ಅಭಿನಂದನೆ ಕೋರಿದ​ ನರೇಂದ್ರ ಮೋದಿ, ರಾಹುಲ್ ಗಾಂಧಿ

  6. ರಾಜರಾಜೇಶ್ವರಿ ನಗರ ಮತ್ತು ಶಿರಾ ಉಪಚುನಾವಣೆಗಳಲ್ಲಿ ಬಿಜೆಪಿ ನಿರಾಯಾಸ ಗೆಲುವು ಸಾಧಿಸುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುನರುಚ್ಛರಿಸಿದ್ದಾರೆ. ಆರ್ ಆರ್ ನ ಗರದಲ್ಲಿ ಮುನಿರತ್ನ 35-40 ಸಾವಿರ ಮತಗಳ ಅಂತರದಿಂದ ಗೆಲುವು ಪಡೆಯುತ್ತಾರೆ. ಶಿರಾದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ 20-25 ಸಾವಿರ ಮತಗಳ ಅಂತರದಿಂದ ಜಯ ಸಾಧಿಸುತ್ತಾರೆ ಎಂದು ಬಿಎಸ್​ವೈ ಹೇಳಿದ್ದಾರೆ.

  ಆರ್ ಆರ್ ನಗರ ಮತ್ತು ಶಿರಾದಲ್ಲಿ ಬಿಜೆಪಿಗೆ ಗೆಲುವು ನಿಶ್ಚಿತ: ಸಿಎಂ ಯಡಿಯೂರಪ್ಪ

  7. ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನದ ಹಿಂದೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರ ಒತ್ತಡವಿದೆ. ಪ್ರಲ್ಹಾದ್ ಜೋಶಿ ವಿರುದ್ಧ ಚುನಾವಣೆಗೆ ನಿಂತಿದ್ದಕ್ಕೆ ಈ ರೀತಿ ಮಾಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

  ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಒತ್ತಡವೇ ಕಾರಣ : ಸಿದ್ದರಾಮಯ್ಯ

  8.ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ತಮ್ಮ ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ನಿನ್ನೆ ಸಂಜೆಯ ಬಳಿಕ ಅಂಗೀಕಾರವಾಗಿದೆ. ಇದರ ಬೆನ್ನಲ್ಲೇ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಪಕ್ಷದ ಚಟುವಟಿಕೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳಲು ಅವರು ಮುಂದಾಗಿದ್ದಾರೆ.

  ಸಚಿವ ಸ್ಥಾನಕ್ಕೆ ರಾಜೀನಾಮೆ ಅಂಗೀಕಾರ ಬೆನ್ನಲ್ಲೇ ದೆಹಲಿಗೆ ತೆರಳಿದ ಸಿ.ಟಿ. ರವಿ

  9. ಬಾಲಿವುಡ್​ನಲ್ಲಿ ಸದ್ಯ ಮಿಂಚುತ್ತಿರುವ ನಟಿಯರಲ್ಲಿ ಕಿಯಾರಾ ಅಡ್ವಾಣಿ ಕೂಡ ಒಬ್ಬರು. ಸದ್ಯ ಅಕ್ಷಯ್​ ಕುಮಾರ್​ ಜೊತೆಗೆ ಲಕ್ಷ್ಮೀ ಸಿನಿಮಾದಲ್ಲಿ ಕಿಯಾರಾ ನಟಿಸುತ್ತಿದ್ದಾರೆ. ಹಾಗಾಗಿ ಸಿನಿಮಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಇದೇ 9ನೇ ತಾರೀಖಿನಂದು ಲಕ್ಷ್ಮೀ ಸಿನಿಮಾ ಆನ್​ಲೈನ್​ ಫ್ಲಾಟ್​ಫಾರ್ಮ್​ನಲ್ಲಿ ಬಿಡುಗಡೆಯಾಗುತ್ತಿದೆ. ಹಾಗಾಗಿ ಕಿಯಾರಾ ಆನ್​ಲೈನ್​ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.

  ಸೆಕ್ಸ್ ಬಿಟ್ಟರೆ ಬೇರೆ ಏನಿಷ್ಟ?; ನಟಿ ಕಿಯಾರಾಗೆ ಅಭಿಮಾನಿಯಿಂದ ಹೀಗೊಂದು ಪ್ರಶ್ನೆ!

  10. ಐಪಿಎಲ್​ನಲ್ಲಿಂದು ಮಹತ್ವದ ಪಂದ್ಯ ನಡೆಯಲಿದ್ದು, ಶ್ರೇಯಸ್ ಅಯ್ಯರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಡೇವಿಡ್ ವಾರ್ನರ್ ನೇತೃತ್ವದ ಸನ್​ರೈಸರ್ಸ್​ ಹೈದರಾಬಾದ್ ತಂಡಗಳು 2ನೇ ಕ್ವಾಮಿಫೈಯರ್​ನಲ್ಲಿ ಮುಖಾಮುಖಿ ಆಗುತ್ತಿದೆ.

  IPL 2020 Qualifier 2 DC vs SRH: ಚೊಚ್ಚಲ ಬಾರಿ ಫೈನಲ್​ಗೇರಲು ಅಯ್ಯರ್ ಮಾಸ್ಟರ್ ಪ್ಲ್ಯಾನ್: ಇಲ್ಲಿದೆ ಸಂಭಾವ್ಯ ಪ್ಲೇಯಿಂಗ್ XI
  Published by:G Hareeshkumar
  First published: