HOME » NEWS » National-international » EX CM VASUNDHARA RAJE TO ATTEND BJP MEET IN JAIPUR TODAY AS RAJASTHAN CONGRESS CRISIS DEEPENS MAK

ರಾಜಸ್ಥಾನದಲ್ಲಿಂದು ಮಾಜಿ ಸಿಎಂ ವಸುಂಧರಾ ರಾಜೇ ಮಹತ್ವದ ಸಭೆ; ಕಾಂಗ್ರೆಸ್‌ ಆಂತರಿಕ ಬಿಕ್ಕಟ್ಟಿನ ಲಾಭ ಪಡೆಯಲು ಚಿಂತನೆ

ಸಚಿನ್ ಪೈಲಟ್ ಅವರ ಮುಂದಿನ ರಾಜಕೀಯ ನಡೆಯನ್ನು ಎಲ್ಲಾ ದೃಷ್ಟಿಯಿಂದಲೂ ಗಮನಿಸುತ್ತಿರುವ ರಾಜಸ್ಥಾನದ ಹಲವಾರು ಹಿರಿಯ ಬಿಜೆಪಿ ನಾಯಕರು ಮಂಗಳವಾರ ತಮ್ಮ ಪಕ್ಷದ ಸಿದ್ಧಾಂತದ ಮೇಲೆ ವಿಶ್ವಾಸ ವ್ಯಕ್ತಪಡಿಸುವ ಯಾರಿಗಾದರೂ ತಮ್ಮ ಪಕ್ಷದ ಬಾಗಿಲು ತೆರೆದಿರುತ್ತದೆ ಎಂದು ಹೇಳುವ ಮೂಲಕ ಸಚಿನ್ ಪೈಲಟ್ ಅವರಿಗೆ ಮುಕ್ತ ಆಹ್ವಾನ ನೀಡಿದ್ದಾರೆ.

news18-kannada
Updated:July 15, 2020, 8:40 AM IST
ರಾಜಸ್ಥಾನದಲ್ಲಿಂದು ಮಾಜಿ ಸಿಎಂ ವಸುಂಧರಾ ರಾಜೇ ಮಹತ್ವದ ಸಭೆ; ಕಾಂಗ್ರೆಸ್‌ ಆಂತರಿಕ ಬಿಕ್ಕಟ್ಟಿನ ಲಾಭ ಪಡೆಯಲು ಚಿಂತನೆ
ವಸುಂಧರಾ ರಾಜೇ
  • Share this:
ಜೈಪುರ: ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಅವರು ಇಂದು ಜೈಪುರ ತಲುಪಲಿದ್ದು, ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಬಿಜೆಪಿ ಶಾಸಕರ ಸಭೆಯಲ್ಲಿ ರಾಜ್ಯದ ರಾಜಕೀಯ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆಯಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಪಕ್ಷದ ಬಂಡಾಯ ನಾಯಕ ಸಚಿನ್ ಪೈಲಟ್ ಅವರನ್ನು ಈಗಾಗಲೇ ಪಕ್ಷದ ಅಧ್ಯಕ್ಷ ಮತ್ತು ಉಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲಾಗಿದೆ. ಈ ನಡುವೆ ಅವರು ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂಬ ಮಾತುಗಳೂ ಕೇಳಿ ಬಂದಿದ್ದವು.

ಹೀಗಾಗಿ ಸಚಿನ್ ಪೈಲಟ್ ಅವರ ಮುಂದಿನ ರಾಜಕೀಯ ನಡೆಯನ್ನು ಎಲ್ಲಾ ದೃಷ್ಟಿಯಿಂದಲೂ ಗಮನಿಸುತ್ತಿರುವ ರಾಜಸ್ಥಾನದ ಹಲವಾರು ಹಿರಿಯ ಬಿಜೆಪಿ ನಾಯಕರು ಮಂಗಳವಾರ “ತಮ್ಮ ಪಕ್ಷದ ಸಿದ್ಧಾಂತದ ಮೇಲೆ ವಿಶ್ವಾಸ ವ್ಯಕ್ತಪಡಿಸುವ ಯಾರಿಗಾದರೂ ತಮ್ಮ ಪಕ್ಷದ ಬಾಗಿಲು ತೆರೆದಿರುತ್ತದೆ” ಎಂದು ಹೇಳುವ ಮೂಲಕ ಸಚಿನ್ ಪೈಲಟ್ ಅವರಿಗೆ ಮುಕ್ತ ಆಹ್ವಾನ ನೀಡಿದ್ದಾರೆ.

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಕಳೆದ ಒಂದು ವಾರದಿಂದ ಬಂಡಾಯ ಎದ್ದಿರುವ ಸಚಿನ್ ಪೈಲಟ್, ಸರ್ಕಾರವನ್ನು ಉರುಳಿಸುವ ಕುರಿತು ಚರ್ಚೆ ನಡೆಸುವ ಸಲುವಾಗಿ ತಮ್ಮ ಬೆಂಬಲಿತ ಶಾಸಕರ ಜೊತೆಗೆ ಕಳೆದ ಶನಿವಾರ ದೆಹಲಿಗೆ ತೆರಳಿ ಬಿಜೆಪಿ ನಾಯಕರ ಜೊತೆಗೆ ಮಾತುಕತೆ ನಡೆಸಿದ್ದರು. ಆದರೆ, ಅಶೋಕ್ ಗೆಹ್ಲೋಟ್ ಶಾಸಕರ ಸಭೆ ನಡೆಸಿ ತಮಗೆ 102 ಜನ ಶಾಸಕರ ಬೆಂಬಲ ಇದೆ ಎಂಬುದನ್ನು ಖಚಿತಪಡಿಸಿದ್ದರು.

ಅಲ್ಲದೆ, ಕಾಂಗ್ರೆಸ್ ಶಾಸಕರ ಸಭೆಯಲ್ಲಿ ಭಾಗವಹಿಸುವಂತೆ ಸಚಿನ್ ಪೈಲಟ್ ಅವರಿಗೂ ನೊಟೀಸ್ ನೀಡಲಾಗಿತ್ತು. ಆದರೆ, ಎರಡೂ ಸಭೆಯಲ್ಲಿ ಪೈಲಟ್ ಪಾಲ್ಗೊಳ್ಳದೆ ಹೊರಗುಳಿದಿದ್ದರು. ಹೀಗಾಗಿ ಇದನ್ನು ಪಕ್ಷ ವಿರೋಧಿ ಚಟುವಟಿಕೆ ಎಂದು ಪರಿಗಣಿಸಿ ಅವರನ್ನು ಉಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಲಾಗಿದೆ.

ಕಾಂಗ್ರೆಸ್ ಪಕ್ಷದ ಆಂತರಿಕ ಬಿಕ್ಕಟ್ಟನ್ನು ತಮಗೆ ಲಾಭದಾಯಕವಾಗಿ ಮಾಡಿಕೊಂಡು ಸರ್ಕಾರ ರಚಿಸುವ ಅವಕಾಶ ಬಿಜೆಪಿ ಪಕ್ಷಕ್ಕೆ ಇದೆ. ಆದರೆ, ಅದಕ್ಕೆ ಸಾಕಾಗುವಷ್ಟು ಸಂಖ್ಯೆ ಇಲ್ಲ. ಇದೇ ಕಾರಣಕ್ಕೆ ಬಿಜೆಪಿ ಕಾದು ನೋಡುವ ತಂತ್ರಕ್ಕೆ ಮುಂದಾಗಿದೆ. ಆದರೆ, ಕಳೆದ ವರ್ಷ ಕರ್ನಾಟಕ ಹಾಗೂ ಈ ವರ್ಷ ಮಧ್ಯಪ್ರದೇಶದಲ್ಲಿ ಸಂಖ್ಯಾ ಬಲ ಇಲ್ಲದಾಗ್ಯೂ ಬಿಜೆಪಿ ಹೇಗೆ ಸರ್ಕಾರ ರಚಿಸಿದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವೇ. ಹೀಗಾಗಿ ರಾಜಸ್ಥಾನದಲ್ಲೂ ಇಂತಹ ಮ್ಯಾಜಿಕ್ ನಡೆಯುತ್ತಾ? ಎಂಬ ಪ್ರಶ್ನೆ ಇದೀಗ ಮೂಡಿದೆ.

ಇದನ್ನೂ ಓದಿ : Rajasthan Political Crisis: ರಾಜಸ್ಥಾನ ರಾಜಕೀಯ ಬಿಕ್ಕಟ್ಟು; ಉಪ ಮುಖ್ಯಮಂತ್ರಿ ಸ್ಥಾನದಿಂದ ಬಂಡಾಯ ನಾಯಕ ಸಚಿನ್ ಪೈಲಟ್‌ ವಜಾ
Youtube Video

ಕಾಂಗ್ರೆಸ್ ಪಕ್ಷದ ಒಳಗಿನ "ದೌರ್ಬಲ್ಯ" ದಿಂದ ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾಗಿದೆ ಎಂದು ಬಿಜೆಪಿ ಉಪಾಧ್ಯಕ್ಷ ಓಂ ಪ್ರಕಾಶ್ ಮಾಥುರ್ ಇದೇ ಸಂದರ್ಭದಲ್ಲಿ ಆರೋಪಿಸಿರುವುದು ಸಹ ಹಲವಾರು ಅನುಮಾನಕ್ಕೆ ಕಾರಣವಾಗಿದೆ. ಈ ನಡುವೆ ಇಂದು ಮಾಜಿ ಸಿಎಂ ವಸುಂಧರ ರಾಜೇ ಸಭೆ ನಡೆಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜಸ್ಥಾನದ ರಾಜಕೀಯದಲ್ಲಿ ಏನುಬೇಕಾದರೂ ನಡೆಯಬಹುದು ಎಂಬ ಸೂಚನೆ ನೀಡಿದ್ದಾರೆ.
Published by: MAshok Kumar
First published: July 15, 2020, 8:40 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories