• Home
 • »
 • News
 • »
 • national-international
 • »
 • ಬಾಂಗ್ಲಾದೇಶ ಪ್ರಜೆಗಳಿಗೆ ಭಾರತದ ನಿವಾಸ ಪ್ರಮಾಣ ಪತ್ರ ನೀಡಿದ ಕೌನ್ಸಿಲರ್ ಬಂಧನ!

ಬಾಂಗ್ಲಾದೇಶ ಪ್ರಜೆಗಳಿಗೆ ಭಾರತದ ನಿವಾಸ ಪ್ರಮಾಣ ಪತ್ರ ನೀಡಿದ ಕೌನ್ಸಿಲರ್ ಬಂಧನ!

ಸಾಂದರ್ಭಿಕ ಚಿತ್ರ.

ಸಾಂದರ್ಭಿಕ ಚಿತ್ರ.

ಕೇಂದ್ರಾಡಳಿತ ಪ್ರದೇಶವಾದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಅಕ್ರಮವಾಗಿ ವಲಸೆ ಬಂದವರನ್ನು ತಡೆಗಟ್ಟಲು ಸಾರ್ವಜನಿಕರ ಸಹಕಾರ ಬಹಳ ಮುಖ್ಯ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

 • Share this:

  ಅಂಡಮಾನ್ (ಜೂನ್ 27); ಬಾಂಗ್ಲಾದೇಶದ ಪ್ರಜೆಗಳಿಗೆ ವಾಸ್ತವ್ಯ ಪ್ರಮಾಣಪತ್ರಗಳನ್ನು ನೀಡಿದ ಆರೋಪದ ಮೇಲೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮಾಜಿ ಕೌನ್ಸಿಲರ್‌ರನ್ನು ಬಂಧಿಸಲಾಗಿದೆ. ಇದು ಮತದಾರರ ಗುರುತಿನ ಚೀಟಿ ಮತ್ತು ಇತರ ಭಾರತೀಯ ದಾಖಲೆಗಳನ್ನು ಪಡೆಯಲು ಸಹಾಯ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವೀಸಾ ಅವಧಿ ಮುಗಿದಿದ್ದರೂ ಬಾಂಗ್ಲಾದೇಶದ ನಯಾನ್ ಸರ್ಕಾರ್ ಮತ್ತು ಅವರ ಕುಟುಂಬ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಅಕ್ರಮವಾಗಿ ನೆಲೆಸಿದ್ದಾರೆ. ಮಾಜಿ ಕೌನ್ಸಿಲರ್ ಸಂಜಯ್ ಮೆಶಾಕ್ ಅವರು ನಯನ್ ಸರ್ಕಾರ್, ಅವರ ಸಹೋದರ ಮತ್ತು ಪೋಷಕರಿಗೆ ವಾಸ್ತವ್ಯ ಪ್ರಮಾಣಪತ್ರವನ್ನು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


  ಈ ನಿವಾಸ ಪ್ರಮಾಣಪತ್ರಗಳು ಮತದಾರ ಗುರುತಿನ ಚೀಟಿ, ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್ ಪಡೆಯಲು ಅವರಿಗೆ ಸಹಾಯ ಮಾಡಿದೆ ಎಂದು ಪೊಲೀಸರು ಆರೋಪಿಸಿದ್ದಾರೆ.  ಮಾನ್ಯ ದಾಖಲೆಗಳಿಲ್ಲದೆ ಭಾರತದಲ್ಲಿ ಅಕ್ರಮವಾಗಿ ಉಳಿದುಕೊಂಡಿದ್ದಕ್ಕಾಗಿ ಸರ್ಕಾರ್‌ನನ್ನು ಪೊಲೀಸರು ಬಂಧಿಸಿದ್ದಾರೆ ಮತ್ತು ಸರ್ಕಾರ್ ಮತ್ತು ಅವರ ಕುಟುಂಬದ ಸದಸ್ಯರಿಗೆ ವಾಸ್ತವ್ಯ ಪ್ರಮಾಣಪತ್ರವನ್ನು ನೀಡಿದ ಆರೋಪದ ಮೇಲೆ ಮೆಶಾಕ್‌ರನ್ನೂ ಕೂಡ ಬಂಧಿಸಲಾಗಿದೆ.


  ಈ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬಾಂಗ್ಲಾದೇಶಿಗರು ಕಾನೂನುಬಾಹಿರವಾಗಿ ದ್ವೀಪಗಳಲ್ಲಿ ಉಳಿದುಕೊಂಡಿದ್ದರೆ, ಆ ಬಗ್ಗೆ ಮಾಹಿತಿ ನೀಡುವಂತೆ ಪೊಲೀಸರು ಸಾರ್ವಜನಿಕರಿಗೆ ವಿನಂತಿ ಮಾಡಿದ್ದಾರೆ. ಮಾಹಿತಿ ನೀಡಿದವರ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು ಎಂದೂ ಅವರು ಭರವಸೆ ನೋಡಿದ್ದಾರೆ.


  ಇದನ್ನೂ ಓದಿ: K Sudhakar| ಕಾಂಗ್ರೆಸ್​ನಲ್ಲಿ ಸಿಎಂ ಅಭ್ಯರ್ಥಿ ಯಾರು ಎಂಬ ಗೊಂದಲದ ವಿಚಾರ ಹೊಸದೇನಲ್ಲ; ಸಚಿವ ಸುಧಾಕರ್​ ವ್ಯಂಗ್ಯ


  ಕೇಂದ್ರಾಡಳಿತ ಪ್ರದೇಶವಾದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಅಕ್ರಮವಾಗಿ ವಲಸೆ ಬಂದವರನ್ನು ತಡೆಗಟ್ಟಲು ಸಾರ್ವಜನಿಕರ ಸಹಕಾರ ಬಹಳ ಮುಖ್ಯ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.


  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.

  Published by:MAshok Kumar
  First published: