ಬಿಜೆಪಿ ಸೇರಿದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್; ದೆಹಲಿಯಿಂದ ಟಿಕೆಟ್​ ಸಾಧ್ಯತೆ

ಗಂಭೀರ್ ಅವರು ದೆಹಲಿಯಲ್ಲಿ ಶಿಕ್ಷಣ ಪಡೆದವರು. ದೆಹಲಿಯ ನಿವಾಸಿಗಳೊಂದಿಗೆ ನಿಕಟ ಸಂಪರ್ಕ ಹೊಂದಿರುವವರು. ಪಕ್ಷವು ಅವರ ಸಾಮರ್ಥ್ಯವನ್ನು ಸದ್ಬಳಕೆ ಮಾಡಿಕೊಳ್ಳಲಿದೆ ಎಂದು ಅರುಣ್ ಜೇಟ್ಲಿ ಹೇಳಿದರು. ನಂತರ ಗಂಭೀರ್ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿಯಾದರು.

HR Ramesh | news18
Updated:March 22, 2019, 3:32 PM IST
ಬಿಜೆಪಿ ಸೇರಿದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್; ದೆಹಲಿಯಿಂದ ಟಿಕೆಟ್​ ಸಾಧ್ಯತೆ
ಗೌತಮ್ ಗಂಭೀರ್ ವ್ಯಂಗ್ಯಚಿತ್ರ
HR Ramesh | news18
Updated: March 22, 2019, 3:32 PM IST
ನವದೆಹಲಿ: ಅಂತಾರಾಷ್ಟ್ರೀಯ ಮಾಜಿ ಕ್ರಿಕೆಟ್ ಆಟಗಾರ ಗೌತಮ್​ ಗಂಭೀರ್ ಶುಕ್ರವಾರ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ದೇಶದ ರಾಜಧಾನಿ ದೆಹಲಿಯಿಂದ ಅವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಸಾಧ್ಯತೆ ಇದೆ.

37 ವರ್ಷದ ಮಾಜಿ ಕ್ರಿಕೆಟಿಗ ಇಂದು ಕೇಂದ್ರ ಸಚಿವರಾದ ಅರುಣ್ ಜೇಟ್ಲಿ ಮತ್ತು ರವಿಶಂಕರ್ ಪ್ರಸಾದ್​ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಗೊಂಡಿದರು.

ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯಿಂದ ಪ್ರಭಾವಿತನಾಗಿದ್ದೇನೆ. ಮತ್ತು ಪಕ್ಷದ ಸದಸ್ಯನಾಗಿ ದೇಶದ ಅಭಿವೃದ್ಧಿಗಾಗಿ ಕೆಲಸ ಮಾಡುವ ಉದ್ದೇಶದಿಂದ ಬಿಜೆಪಿ ಸೇರುತ್ತಿದ್ದೇನೆ ಎಂದು ಗೌತಮ್ ಗಂಭೀರ್ ಹೇಳಿದ್ದಾರೆ.
ಪಕ್ಷದ ಮೂಲಗಳ ಪ್ರಕಾರ ಗೌರಮ್​ ಗಂಭೀರ್ ನವದೆಹಲಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಸಾಧ್ಯತೆ ಇದೆ. ಹಾಲಿ ಈ ಕ್ಷೇತ್ರವನ್ನು ಪಕ್ಷದ ಮೀನಾಕ್ಷಿ ಲೇಖಿ ಪ್ರತಿನಿಧಿಸುತ್ತಿದ್ದಾರೆ.

ಗಂಭೀರ್ ಅವರು ದೆಹಲಿಯಲ್ಲಿ ಶಿಕ್ಷಣ ಪಡೆದವರು. ದೆಹಲಿಯ ನಿವಾಸಿಗಳೊಂದಿಗೆ ನಿಕಟ ಸಂಪರ್ಕ ಹೊಂದಿರುವವರು. ಪಕ್ಷವು ಅವರ ಸಾಮರ್ಥ್ಯವನ್ನು ಸದ್ಬಳಕೆ ಮಾಡಿಕೊಳ್ಳಲಿದೆ ಎಂದು ಅರುಣ್ ಜೇಟ್ಲಿ ಹೇಳಿದರು. ನಂತರ ಗಂಭೀರ್ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿಯಾದರು.

First published:March 22, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ