Election Commissioner: ನಿವೃತ್ತ ಐಎಎಸ್ ಅಧಿಕಾರಿ ಅನೂಪ್ ಚಂದ್ರ ಪಾಂಡೆ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ

ಸುಶೀಲ್ ಚಂದ್ರ ನಂತರ ತೆರವಾಗಿದ್ದ ಸ್ಥಾನಕ್ಕೆ ಉತ್ತರ ಪ್ರದೇಶದ ಮಾಜಿ ಮುಖ್ಯ ಕಾರ್ಯದರ್ಶಿಯಾಗಿದ್ದ ಅನೂಪ್ ಚಂದ್ರ ಪಾಂಡೆ ಅವರನ್ನು ರಾಷ್ಟ್ರಪತಿ ರಾಮ್​ನಾಥ್ ಕೋವಿಂದ್ ಚುನಾವಣಾ ಆಯುಕ್ತರನ್ನಾಗಿ ನೇಮಿಸಿದ್ದಾರೆ.

ಅನೂಪ್ ಚಂದ್ರ ಪಾಂಡೆ

ಅನೂಪ್ ಚಂದ್ರ ಪಾಂಡೆ

  • Share this:
    ನವದೆಹಲಿ: ಯುಪಿ ಕೇಡರ್​ನ ನಿವೃತ್ತ ಐಎಎಸ್ ಅಧಿಕಾರಿ ಅನೂಪ್ ಚಂದ್ರ ಪಾಂಡೆ ನೂತನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ಮಂಗಳವಾರ ನೇಮಿಸಲಾಗಿದೆ. ಸುಶೀಲ್ ಚಂದ್ರ ನಂತರ ತೆರವಾಗಿದ್ದ ಸ್ಥಾನಕ್ಕೆ ಉತ್ತರ ಪ್ರದೇಶದ ಮಾಜಿ ಮುಖ್ಯ ಕಾರ್ಯದರ್ಶಿಯಾಗಿದ್ದ ಅನೂಪ್ ಚಂದ್ರ ಪಾಂಡೆ ಅವರನ್ನು ರಾಷ್ಟ್ರಪತಿ ರಾಮ್​ನಾಥ್ ಕೋವಿಂದ್ ಚುನಾವಣಾ ಆಯುಕ್ತರನ್ನಾಗಿ ನೇಮಿಸಿದ್ದಾರೆ. ಕಾನೂನು ಮತ್ತು ನ್ಯಾಯ ಸಚಿವಾಲಯ ಹೊರಡಿಸಿರುವ ಅಧಿಸೂಚನೆಯಲ್ಲಿ 1984ರ ಬ್ಯಾಚ್​ನ ಈ ಐಎಎಸ್ ಅಧಿಕಾರಿಯ ನೇಮಕವಾಗಿದೆ.

    ಸಂವಿಧಾನದ 324ನೇ ಪರಿಚ್ಛೇದದ ಷರತ್ತು 92)ರ ಅನುಸಾರ, ಅವರು ಅಧಿಕಾರ ವಹಿಸಿಕೊಂಡ ದಿನಾಂಕದಿಂದ ಜಾರಿಗೆ ಬರುವಂತೆ ಚುನಾವಣಾ ಆಯುಕ್ತರಾಗಿ ಶ್ರೀ ಅನೂಪ್ ಚಂದ್ರ ಪಾಂಡೆ, ಐಎಎಸ್ (ನಿವೃತ್ತ) (ಯುಪಿ:1984) ಅವರನ್ನು ನೇಮಕ ಮಾಡಲು ರಾಷ್ಟ್ರಪತಿಗಳು ಸಂತೋಷಪಟ್ಟಿದ್ದಾರೆ ಎಂದು ಅಧಿಚೂಚನೆಯಲ್ಲಿ ತಿಳಿಸಿದೆ.
    Published by:Soumya KN
    First published: