ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ನ್ಯಾಯಾಂಗ ಆಯೋಗದಿಂದ ವಿಕಾಸ್ ದುಬೆ ಎನ್ಕೌಂಟರ್ ಪ್ರಕರಣದ ತನಿಖೆ
ಗ್ಯಾಂಗ್ಸ್ಟರ್ ವಿಕಾಸ್ ದುಬೆಯನ್ನು ಬಂಧಿಸಿ ಕಾನ್ಪುರಕ್ಕೆ ಕರೆದೊಯ್ಯುವಾಗ ಪೊಲೀಸ್ ವಾಹನ ಪಲ್ಟಿ ಹೊಡೆದಿತ್ತು. ಈ ವೇಳೆ ಪೊಲೀಸರ ಬಳಿಯಿದ್ದ ಗನ್ ಎತ್ತಿಕೊಂಡು ಪರಾರಿಯಾಗಲು ಪ್ರಯತ್ನಿಸಿದ್ದ ವಿಕಾಸ್ ದುಬೆಯನ್ನು ಎನ್ಕೌಂಟರ್ನಲ್ಲಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ಬಗ್ಗೆ ವಿರೋಧಪಕ್ಷಗಳು ಸಾಕಷ್ಟು ಅನುಮಾನಗಳನ್ನು ವ್ಯಕ್ತಪಡಿಸಿ, ನಿವೃತ್ತ ನ್ಯಾಯಮೂರ್ತಿಗಳಿಂದ ತನಿಖೆಗೆ ಆಗ್ರಹಿಸಿದ್ದವು.
ನವದೆಹಲಿ: ವಿಕಾಸ್ ದುಬೆ ಎನ್ಕೌಂಟರ್ ಪ್ರಕರಣ ಸಂಬಂಧದ ತನಿಖೆಗೆ ರಚಿಸಲಾಗಿರುವ ನ್ಯಾಯಾಂಗ ಆಯೋಗದ ಮುಖ್ಯಸ್ಥರಾಗಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಎಸ್.ಚೌಹಾಣ್ ಅವರನ್ನು ನೇಮಿಸಲಾಗಿದೆ.
ನ್ಯಾ.ಚೌಹಾಣ್ ಅವರು ಈ ಹಿಂದೆ ಕಾನೂನು ಆಯೋಗದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. 2009 ಮತ್ತು 2014ರ ನಡುವೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು.
ವಿಕಾಸ್ ದುಬೆ ಮೇಲೆ ಹಲವು ಕ್ರಿಮಿನಲ್ ಪ್ರಕರಣಗಳು ಇದ್ದರೂ ಏಕೆ ಆತನನ್ನು ಜಾಮೀನಿ ಅಥವಾ ಪೆರೋಲ್ ಮೇಲೆ ಹೊರಗೆ ಬಿಡಲಾಯಿತು. ಒಟ್ಟಾರೆ ಪ್ರಕರಣದಲ್ಲಿ ಈ ಒಂದು ಅಂಶ ಪ್ರಮುಖವಾಗಿದೆ ಎಂದು ಹೇಳಿದ ಸುಪ್ರೀಂಕೋರ್ಟ್, ಪ್ರಕರಣ ಸಂಬಂಧ ಎರಡು ತಿಂಗಳಲ್ಲಿ ವರದಿ ಸಲ್ಲಿಸುವಂತೆ ನ್ಯಾಯಾಂಗ ಆಯೋಗಕ್ಕೆ ತಿಳಿಸಿದೆ.
ನ್ಯಾ.ಚೌಹಾಣ್ ನೇತೃತ್ವದ ಸಮಿತಿಯಲ್ಲಿ ಅಲಹಾಬಾದ್ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಶಶಿ ಕಾಂತ್ ಅಗರವಾಲ್ ಮತ್ತು ನಿವೃತ್ತ ಡಿಜಿಪಿ ಕೆ.ಎಲ್. ಗುಪ್ತಾ ಸದಸ್ಯರಿದ್ದಾರೆ.
ಉತ್ತರ ಪ್ರದೇಶ ಸರ್ಕಾರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ನ್ಯಾಯಾಲಯಕ್ಕೆ ಸಲ್ಲಿಸಿರುವ ಕರಡು ಅಧಿಸೂಚನೆಯನ್ನು ನ್ಯಾಯಪೀಠ ಅಂಗೀಕರಿಸಿದೆ.
ಜು 2-3ರಂದು ವಿಕಾಸ್ ದುಬೆ ಮತ್ತು ಆತನ ಸಹಚರರು ಎಂಟು ಪೊಲೀಸ್ ಸಿಬ್ಬಂದಿಯನ್ನು ಹತ್ಯೆಗೈದಿದ್ದರು. ಜುಲೈ 10ರಂದು ದುಬೆ ಪೊಲೀಸ್ ಎನ್ಕೌಂಟರ್ಗೆ ಬಲಿಯಾಗಿದ್ದ. ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಯೊಂದಿಗೆ ದುಬೆ ಸಂಬಂಧ ಹೊಂದಿರುವ ಇತಿಹಾಸ ಹೊಂದಿರುವ ಆತನನ್ನು ಜಾಮೀನಿನ ಮೇಲೆ ಹೇಗೆ ಹೊರಗೆ ಬಿಡಲಾಯಿತು ಎಂಬುದು ಯಕ್ಷ ಪ್ರಶ್ನೆಯಾಗಿದೆ.
ವಾರದೊಳಗೆ ತನಿಖೆ ಆರಂಭಿಸಿ, ಎರಡು ವರದಿ ಸಲ್ಲಿಕೆಗೂ ಮುನ್ನ ಸುಪ್ರೀಂಕೋರ್ಟ್ ಹಾಗೆಯೇ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ನ್ಯಾಯಪೀಠ ತನಿಖಾ ಆಯೋಗಕ್ಕೆ ಸೂಚನೆ ನೀಡಿದೆ.
ಉತ್ತರ ಪ್ರದೇಶದ ಕಾನ್ಪುರದಲ್ಲಿ 8 ಪೊಲೀಸ್ ಸಿಬ್ಬಂದಿಯನ್ನು ಗುಂಡಿಕ್ಕಿ ಕೊಂದಿದ್ದ ಗ್ಯಾಂಗ್ಸ್ಟರ್ ವಿಕಾಸ್ ದುಬೆಯನ್ನು ಬಂಧಿಸಿ ಕಾನ್ಪುರಕ್ಕೆ ಕರೆದೊಯ್ಯುವಾಗ ಪೊಲೀಸ್ ವಾಹನ ಪಲ್ಟಿ ಹೊಡೆದಿತ್ತು. ಈ ವೇಳೆ ಪೊಲೀಸರ ಬಳಿಯಿದ್ದ ಗನ್ ಎತ್ತಿಕೊಂಡು ಪರಾರಿಯಾಗಲು ಪ್ರಯತ್ನಿಸಿದ್ದ ವಿಕಾಸ್ ದುಬೆಯನ್ನು ಎನ್ಕೌಂಟರ್ನಲ್ಲಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ಬಗ್ಗೆ ವಿರೋಧಪಕ್ಷಗಳು ಸಾಕಷ್ಟು ಅನುಮಾನಗಳನ್ನು ವ್ಯಕ್ತಪಡಿಸಿ, ನಿವೃತ್ತ ನ್ಯಾಯಮೂರ್ತಿಗಳಿಂದ ತನಿಖೆಗೆ ಆಗ್ರಹಿಸಿದ್ದವು.
Published by:HR Ramesh
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ