ಉನ್ನಾವೋ ಅತ್ಯಾಚಾರ ಪ್ರಕರಣ; ಅಪರಾಧಿಯೆಂದು ಘೋಷಿಸಲ್ಪಟ್ಟಿದ್ದ ಶಾಸಕ ಕುಲದೀಪ್ ಸೆಂಗಾರ್ ಶಿಕ್ಷೆ ಪ್ರಮಾಣ ಇಂದು ಪ್ರಕಟ

ಸೋಮವಾರ ಈ ಪ್ರಕರಣದ ತೀರ್ಪು ಪ್ರಕಟಿಸಿದ ಕೋರ್ಟ್​  ಪ್ರಕರಣದ ಪ್ರಮುಖ ಆರೋಪಿ ಎನಿಸಿಕೊಂಡಿದ್ದ ಕುಲದೀಪ್ ಸೆಂಗಾರ್ ಅವರನ್ನು ಅಪರಾಧಿ ಎಂದು ಘೋಷಿಸಿತ್ತು. ಅಪರಾಧಿಯ ಶಿಕ್ಷೆಯ ಪ್ರಮಾಣ ಇಂದು ಪ್ರಕಟವಾಗಲಿದೆ.

ಶಾಸಕ ಕುಲದೀಪ್ ಸಿಂಗ್ ಸೆಂಗರ್

ಶಾಸಕ ಕುಲದೀಪ್ ಸಿಂಗ್ ಸೆಂಗರ್

  • Share this:
ನವದೆಹಲಿ (ಡಿ. 17): ಉತ್ತರ ಪ್ರದೇಶದ ಉನ್ನಾವೋ ಯುವತಿಯನ್ನು 2017ರಲ್ಲಿ ಅಪಹರಿಸಿ, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದ ಘಟನೆ ದೇಶವನ್ನು ಬೆಚ್ಚಿ ಬೀಳಿಸಿತ್ತು. ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಬಿಜೆಪಿ ಉಚ್ಛಾಟಿತ ಶಾಸಕ ಕುಲದೀಪ್ ಸೆಂಗಾರ್​ ಅಪರಾಧಿ ಎಂದು ಸೋಮವಾರ ದೆಹಲಿ ತೀಸ್ ಹಜಾರಿ ಕೋರ್ಟ್​ ಘೋಷಿಸಿತ್ತು. ಆರೋಪಿ ಕುಲದೀಪ್ ಸೆಂಗಾರ್ ಶಿಕ್ಷೆಯ ಪ್ರಮಾಣವನ್ನು ಕೋರ್ಟ್ ಇಂದು ಪ್ರಕಟಿಸಲಿದೆ.

ಸೋಮವಾರ ಈ ಪ್ರಕರಣದ ತೀರ್ಪು ಪ್ರಕಟಿಸಿದ ಕೋರ್ಟ್​  ಪ್ರಕರಣದ ಪ್ರಮುಖ ಆರೋಪಿ ಎನಿಸಿಕೊಂಡಿದ್ದ ಕುಲದೀಪ್ ಸೆಂಗಾರ್ ಅವರನ್ನು ಅಪರಾಧಿ ಎಂದು ಘೋಷಿಸಿತ್ತು. ಇನ್ನೋರ್ವ ಆರೋಪಿ ಶಶಿ ಸಿಂಗ್ ನಿರ್ದೋಷಿ ಎಂದು ಕೋರ್ಟ್​ ತೀರ್ಪು ಪ್ರಕಟಿಸಿತ್ತು. ಉತ್ತರ ಪ್ರದೇಶದ ಬಂಗೆರ್ಮಾವ್​ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿ 4 ಬಾರಿ ಶಾಸಕರಾಗಿರುವ ಕುಲದೀಪ್ ಸೆಂಗಾರ್ ವಿರುದ್ಧ ಅತ್ಯಾಚಾರದ ಆರೋಪ ಕೇಳಿಬಂದಿದ್ದರಿಂದ ಅವರನ್ನು ಬಿಜೆಪಿಯಿಂದ ಉಚ್ಛಾಟಿಸಲಾಗಿತ್ತು.

ಇದನ್ನೂ ಓದಿ: ಉನ್ನಾವೋ ಪ್ರಕರಣ: ಉಚ್ಛಾಟಿತ ಬಿಜೆಪಿ ಶಾಸಕ ಸೆಂಗಾರ್​ ದೋಷಿ; ಕೋರ್ಟ್​ ತೀರ್ಪು

ಏನಿದು ಪ್ರಕರಣ?:

ಉತ್ತರ ಪ್ರದೇಶದ ಉನ್ನಾವೋ ಯುವತಿ ಮೇಲೆ ಜೂನ್​,4 2017ರಲ್ಲಿ ಅತ್ಯಾಚಾರ ನಡೆದಿತ್ತು. ಈ ಪ್ರಕರಣದಲ್ಲಿ ಬಿಜೆಪಿ ಶಾಸಕನಾಗಿದ್ದ ಕುಲದೀಪ್ ಸೆಂಗಾರ್ ಜೊತೆಗೆ ಇನ್ನೂ ನಾಲ್ವರ ಹೆಸರು ಕೇಳಿಬಂದಿತ್ತು. ಆ ಆರೋಪಿಗಳು ಜಾಮೀನಿನ ಮೇಲೆ ಹೊರಬಂದಿದ್ದರು.  ಕಳೆದ ವರ್ಷ ಯುವತಿ ಕೊಲೆಗೆ ಯತ್ನ ನಡೆದಿತ್ತು. ವಕೀಲರ ಜತೆ ಕೋರ್ಟ್‌ಗೆ ಹೋಗುತ್ತಿದ್ದಾಗ ಕೊಲೆ ಯತ್ನ ನಡೆಸಲಾಗಿತ್ತು.

2018ರಿಂದಲೂ ಸಿಬಿಐ ಈ ಪ್ರಕರಣದ ತನಿಖೆ ನಡೆಸುತ್ತಿದೆ. ಆದರೆ, ರೇಪ್ ಸಂತ್ರಸ್ತೆಯ ಕುಟುಂಬದವರನ್ನು ನಾಶ ಮಾಡುವ ವ್ಯವಸ್ಥಿತ ಸಂಚು ನಡೆಯುತ್ತಿರುವ ಬೆನ್ನಲ್ಲೇ ಸುಪ್ರೀಂ ಕೋರ್ಟ್ ಈ ಪ್ರಕರಣದಲ್ಲಿ ಮಧ್ಯ ಪ್ರವೇಶ ಮಾಡಿತ್ತು. ಸಂತ್ರಸ್ತೆ ಮತ್ತಾಕೆಯ ಕುಟುಂಬ ಸದಸ್ಯರನ್ನು ವಾಯುಮಾರ್ಗದ ಮೂಲಕ ಉತ್ತರ ಪ್ರದೇಶದಿಂದ ಹೊರಗೆ ಕರೆ ತರಬೇಕೆಂದು ಸುಪ್ರೀಂ ಕೋರ್ಟ್ ಹೇಳಿತ್ತು. ಹಾಗೆಯೇ, ಪ್ರಕರಣದ ತನಿಖೆಯನ್ನು ಇನ್ನೊಂದು ವಾರದೊಳಗೆ ಮುಗಿಸಬೇಕೆಂದು ಸಿಬಿಐಗೆ ತಾಕೀತು ಮಾಡಿತ್ತು.
Published by:Sushma Chakre
First published: