Farm Laws: ಟ್ರ್ಯಾಕ್ಟರ್ ರ್ಯಾಲಿ ಮೂಲಕ ಸಂಸತ್ ಮುತ್ತಿಗೆ ಕೈಬಿಟ್ಟ ರೈತರು

ನವೆಂಬರ್ 29ರಂದೇ ಕೇಂದ್ರ ಸರ್ಕಾರ ಮೂರು ಕೃಷಿ ಕಾಯಿದೆಗಳ ತಿದ್ದುಪಡಿ ವಿಧೇಯಕಗಳನ್ನು ಮಂಡಿಸುವುದಾಗಿ ಸ್ಪಷ್ಟಪಡಿಸಿರುವುದರಿಂದ ರೈತ ಆಂದೋಲನವನ್ನು ಮುನ್ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾ ಈಗ ಉದ್ದೇಶಿಸಿ ಟ್ರ್ಯಾಕ್ಟರ್ ಮೆರವಣಿಗೆಯನ್ನು ಕೈಬಿಟ್ಟಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ನವದೆಹಲಿ(ನ. 27): ಕೇಂದ್ರ ಸರ್ಕಾರ (Union Government) ತಂದಿದ್ದ ಮೂರು ರೈತ ವಿರೋಧಿ ಕಾನೂನುಗಳನ್ನು (Three Agricultural Laws) ವಾಪಸ್ ತೆಗೆದುಕೊಳ್ಳಲಾಗುವುದು ಎಂದು ಖುದ್ದು ಪ್ರಧಾನ ಮಂತ್ರಿ ನರೇಂದ್ರ ಮೋದಿ (Prime Minister Narendra Modi) ಅವರೇ ಕೃಷಿ ಘೋಷಣೆ ಮಾಡಿದ್ದಾರೆ. ಅಲ್ಲದೆ ರೈತ ವಿರೋಧಿ ಕಾನೂನುಗಳನ್ನು ಜಾರಿ ಮಾಡಲು ಮುಂದಾದದ್ದಕ್ಕೆ ದೇಶವಾಸಿಗಳ ಕ್ಷಮೆಯನ್ನೂ ಯಾಚಿಸಿದ್ದಾರೆ. ಆದರೂ ಈ ಕಾನೂನುಗಳನ್ನು ಸಂಸತ್ತಿನಲ್ಲಿ ಅಧಿಕೃತವಾಗಿ ಮಂಡಿಸಿ ವಾಪಸ್ ಪಡೆಯುವವರೆಗೆ ಹೋರಾಟ ನಿಲ್ಲಿಸುವುದಿಲ್ಲ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಸ್ಪಷ್ಟಪಡಿಸಿತ್ತು. ಜೊತೆಗೆ ಅಧಿವೇಶನ ಆರಂಭವಾಗುವ ನವೆಂಬರ್ 29ರಂದು ರೈತರು ಟ್ರ್ಯಾಕ್ಟರ್ ಮೂಲಕ ದೆಹಲಿಗೆ ಬಂದು ಸಂಸತ್ ಭವನಕ್ಕೆ ಮುತ್ತಿಗೆ ಹಾಕುವ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಈಗ ಟ್ರ್ಯಾಕ್ಟರ್ ಮೆರವಣಿಗೆಯನ್ನು ಕೈಬಿಡಲಾಗಿದೆ.

ಸಂಸತ್ತಿನ ಚಳಿಗಾಲದ ಅಧಿವೇಶನ (Parliament Session) ಆರಂಭವಾಗುವ ನವೆಂಬರ್ 29ರಂದೇ ಕೇಂದ್ರ ಸರ್ಕಾರ ಮೂರು ಕೃಷಿ ಕಾಯಿದೆಗಳ ತಿದ್ದುಪಡಿ ವಿಧೇಯಕಗಳನ್ನು ಮಂಡಿಸುವುದಾಗಿ ಸ್ಪಷ್ಟಪಡಿಸಿರುವುದರಿಂದ ರೈತ ಆಂದೋಲನವನ್ನು ಮುನ್ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾ (Samyukta Kisan Morcha) ಈಗ ಉದ್ದೇಶಿಸಿ ಟ್ರ್ಯಾಕ್ಟರ್ ಮೆರವಣಿಗೆಯನ್ನು ಕೈಬಿಟ್ಟಿದೆ. ಇಂದು ಇಂದು ನಡೆದ ಸಂಯುಕ್ತ ಕಿಸಾನ್ ಮೋರ್ಚಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದಕ್ಕೂ ಮೊದಲು ಪ್ರಧಾನಿ ಮೋದಿಗೆ ಸಂಯುಕ್ತ ಕಿಸಾನ್ ಮೋರ್ಚಾ ಆರು ಬೇಡಿಕೆಗಳನ್ನು ಒಳಗೊಂಡ ಪತ್ರ ಬರೆದಿತ್ತು.

ಇದನ್ನೂ ಓದಿ: Tomato Price: ಶೀಘ್ರದಲ್ಲೇ ಕಡಿಮೆಯಾಗಲಿದೆ ಟೊಮೆಟೊ ಬೆಲೆ, ಯಾವಾಗ ಗೊತ್ತಾ?

ಸಂಯುಕ್ತ ಕಿಸಾನ್ ಮೋರ್ಚಾವು ಪ್ರಧಾನಿ ಮೋದಿಗೆ ಬರೆದಿರುವ ಪತ್ರದಲ್ಲಿ ಅವರ ಆರು ಬೇಡಿಕೆಗಳು ಈ ರೀತಿ ಇವೆ.

1) ರೈತರು ಬೆಳೆದ ಎಲ್ಲಾ ರೀತಿಯ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಕಾಯಿದೆಯನ್ನು ಜಾರಿ ಮಾಡಬೇಕು.

2) ರೈತರ ಪಂಪ್ ಸೆಟ್ ಗಳಿಗೆ ಉಚಿತವಾಗಿ ವಿದ್ಯುತ್ ನೀಡುವುದನ್ನು ತಡೆಯಲು ಕೇಂದ್ರ ಸರ್ಕಾರ ತರಲು ಉದ್ದೇಶಿಸಿರುವ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಬಾರದು.

3) ಬೆಳೆ ತ್ಯಾಜ್ಯಗಳನ್ನು ಸುಡುವ ರೈತರ ಮೇಲೆ ಕೇಸು ಹಾಕಬಾರದು.

4) ಕಳೆದ ಒಂದು ವರ್ಷದಿಂದ ಕೃಷಿ ಕಾಯಿದೆ ಹೋರಾಟ ನಡೆಸಿದ ರೈತರ ವಿರುದ್ಧ ಹಾಕಲಾಗಿರುವ ಕೇಸುಗಳನ್ನು ವಾಪಸ್ ಪಡೆಯಬೇಕು.

5) ಕೃಷಿ ಕಾಯಿದೆಗಳನ್ನು ವಿರೋಧಿಸಿ ನಡೆದ ಹೋರಾಟದಲ್ಲಿ ಮೃತಪಟ್ಟ 700ಕ್ಕೂ ಹೆಚ್ಚು ರೈತರಿಗೆ ಪರಿಹಾರ ನೀಡಬೇಕು.

6) ಉತ್ತರ ಪ್ರದೇಶದ ಲಖೀಂಪುರ್ ಖೇರಿಯಲ್ಲಿ ರೈತರ ಹತ್ಯಾಕಾಂಡ ನಡೆಸಿರುವ ಕೇಂದ್ರ ಸಚಿವ ಅಜಯ್ ಮಿಶ್ರಾ (Ajay Mishra) ಅವರನ್ನು ಸಂಪುಟದಿಂದ ವಜಾ ಮಾಡಬೇಕು.

ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ರದ್ದುಪಡಿಸುವುದಾಗಿ ಘೋಷಿಸಿದೆ. ಆದರೆ ಅವುಗಳನ್ನು ಸಂಸತ್ ಅಧಿವೇಶನದ (Parliament Session) ವೇಳೆ ಅಧಿಕೃತವಾಗಿ ವಾಪಸ್ ಪಡೆಯುತ್ತದೆಯೋ ಇಲ್ಲವೋ ಎಂಬ ಅನುಮಾನ ಜೊತೆಗೆ ಈ ಕಾನೂನುಗಳಿಗೆ ಬೇರೆ ಯಾವ ರೀತಿಯ ತಿದ್ದುಪಡಿಗಳನ್ನು (Amendments) ತರಲಿದೆಯೋ ಎಂಬ ಅನುಮಾನದಿಂದಾಗಿ  ನವೆಂಬರ್ 20ರಂದು  ಸಂಯುಕ್ತ ಕಿಸಾನ್ ಮೋರ್ಚಾ ಉತ್ತರ ಪ್ರದೇಶದ (Uttar Pradesh) ಲಖನೌದಲ್ಲಿ ಇಂದು ರೈತ ಮಹಾಪಂಚಾಯಿತಿ (Raita Mahapancayath) ನಡೆಸಿತ್ತು.

ಇದನ್ನೂ ಓದಿ: Agriculture- ರೈತರ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚಿಸುತ್ತೇನೆ, ಪ್ರತಿಭಟನೆ ಕೈಬಿಡಿ- ಕೇಂದ್ರ ಮನವಿ

ಕಳೆದ ಒಂದು ವರ್ಷದಿಂದ ಕೃಷಿ ಕಾಯಿದೆ ಹೋರಾಟ ಮಾಡುತ್ತಾ ಮೃತಪಟ್ಟ 700ಕ್ಕೂ ಹೆಚ್ಚು ರೈತ ಕುಟುಂಬಗಳಿಗೆ ಪರಿಹಾರ ನೀಡುವುದು. ಇದೇ ಹೋರಾಟದಲ್ಲಿ ತೊಡಗಿದ್ದ ರೈತರ ವಿರುದ್ಧದ ದಾಖಲಿಸಿರುವ ಪ್ರಕರಣಗಳನ್ನು ವಾಪಸ್ ಪಡೆದುಕೊಳ್ಳುವುದು ಹಾಗೂ ರೈತರ ಬೆಳಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಮಾಡುವುದು ಸೇರಿದಂತೆ ರೈತರ ಪ್ರಮುಖ ಬೇಡಿಕೆಗಳ ಬಗ್ಗೆ ಅಲ್ಲಿ ಚರ್ಚೆ ನಡೆಸಲಾಗಿತ್ತು.

ಸಂಪುಟ ಒಪ್ಪಿಗೆ

ಕೃಷಿ ಉತ್ಪನ್ನಗಳ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ನೆರವು) ಕಾಯ್ದೆ, ದರ ಭರವಸೆ ಮತ್ತು ಕೃಷಿ ಸೇವೆಗಳಿಗೆ ರೈತರ (ಸಬಲೀಕರಣ ಮತ್ತು ರಕ್ಷಣೆ) ಒಪ್ಪಿಗೆ ಕಾಯ್ದೆ ಮತ್ತು ಅಗತ್ಯ ವಸ್ತುಗಳ (ತಿದ್ದುಪಡಿ) ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವುದಾಗಿ ಈಗಾಗಲೇ ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ. ಅಧಿಕೃತವಾಗಿ ಈ‌ ಕಾಯಿದೆಗಳನ್ನು ವಾಪಸ್ ಪಡೆಯಲು ಮತ್ತೆ ಮಸೂದೆಗಳ ರೂಪದಲ್ಲಿ ಸಂಸತ್ತಿನಲ್ಲಿ ಮಂಡಿಸಿ ಸಂಸತ್ತಿನ ಅಂಗೀಕಾರ ಪಡೆಯಬೇಕಾಗಿದೆ. ಈ ಹಿನ್ನೆಲೆಯಲ್ಲಿ ನವೆಂಬರ್ 24ರಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ಮಸೂದೆಗಳನ್ನು ಇಟ್ಟು ಒಪ್ಪಿಗೆ ಪಡೆಯಲಾಗಿದೆ.
Published by:Latha CG
First published: