Farmers Protest| ರೈತ ಹೋರಾಟಕ್ಕೆ ಬಗ್ಗದ ಕೇಂದ್ರ ಸರ್ಕಾರ ಸೆ.27 ರಂದು ಭಾರತ್ ಬಂದ್​ಗೆ ಕರೆ ನೀಡಿದ ರೈತ ಒಕ್ಕೂಟ

ರೈತರ ಒಕ್ಕೂಟ ಸರ್ಕಾರದೊಂದಿಗೆ 10 ಕ್ಕೂ ಹೆಚ್ಚು ಬಾರಿ ಮಾತುಕತೆ ನಡೆಸಿದ್ದು, ಯಾವುದು ಸಫಲವಾಗಿಲ್ಲ. ಕೃಷಿ ಕಾನೂನನ್ನು ಸರ್ಕಾರ ಹಿಂಪಡೆಯುವವರೆಗೂ ಹೋರಾಟ ವಾಪಾಸು ಪಡೆಯುವುದಿಲ್ಲ ಎಂದು ರೈತ ಸಂಘಟನೆಗಳು ಹೇಳಿವೆ.

ರೈತ ಹೋರಾಟ (ಪ್ರಾತಿನಿಧಿಕ ಚಿತ್ರ)

ರೈತ ಹೋರಾಟ (ಪ್ರಾತಿನಿಧಿಕ ಚಿತ್ರ)

 • Share this:
  ನವ ದೆಹಲಿ (ಸೆಪ್ಟೆಂಬರ್​ 18); ಕೇಂದ್ರ ಸರ್ಕಾರದ (Central Government) ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು (Agriculture Act) ವಿರೋಧಿಸಿ ರೈತರು ದೇಶದಾದ್ಯಂತ ಹೋರಾಟ ನಡೆಸುತ್ತಿದ್ದಾರೆ. ಆದರೆ, ರೈತ ಹೋರಾಟ (Farmers Protest) ಆರಂಭವಾಗಿ ಒಂದು ವರ್ಷವೇ ಮುಗಿದರೂ ಸಹ ಕೇಂದ್ರ ಸರ್ಕಾರ ಮಾತ್ರ ರೈತರ ಕೋರಿಕೆಗೆ ಬಗ್ಗುವ ಹಾಗೆ ಕಾಣಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ರೈತ ಹೋರಾಟದ ಒಕ್ಕೂಟವಾಗಿರುವ ಸಂಯುಕ್ತ ಕಿಸಾನ್ ಮೋರ್ಚಾ (Samyukt Kisan Morcha) ಸೆಪ್ಟೆಂಬರ್ 27 ಕ್ಕೆ (September 27) "ಭಾರತ ಬಂದ್‌"ಗೆ (Bharat Bandh) ಕರೆ ನೀಡಿದೆ. ಇದಕ್ಕಾಗಿ ಒಕ್ಕೂಟವು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಬಂದ್‌ ಶಾಂತಿಯುತವಾಗಿರುತ್ತದೆ ಮತ್ತು ಜನರು ಯಾವುದೇ ಅನಾನುಕೂಲತೆಯನ್ನು ಅನುಭವಿಸದಂತೆ ರೈತರು ನೋಡಿಕೊಳ್ಳುತ್ತಾರೆ ಎಂದು ಹೇಳಿದೆ.

  "ಎಸ್‌ಕೆಎಂ ಎಲ್ಲಾ ಸಂಘಟನೆಗಳಿಗೆ ರೈತರೊಂದಿಗೆ ಕೈಜೋಡಿಸುವಂತೆ ಕೇಳಿಕೊಂಡಿದೆ. ಜೊತೆಗೆ ಸಾರ್ವಜನಿಕರಿಗೆ ತೊಂದರೆ ಆಗದಂತೆ ಮುಂಚಿತವಾಗಿಯೆ ‘ಭಾರತ ಬಂದ್‌’ ಅನ್ನು ಪ್ರಚಾರ ಮಾಡುವಂತೆ ಮನವಿ ಮಾಡಿದೆ. ಬಂದ್ ಶಾಂತಿಯುತವಾಗಿರುತ್ತದೆ ಹಾಗೂ ಸ್ವಯಂಪ್ರೇರಿತವಾಗಿರುತ್ತದೆ. ತುರ್ತು ಸೇವೆಗಳಿಗೆ ವಿನಾಯಿತಿ ನೀಡಲಾಗಿದೆ" ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

  "ಒಕ್ಕೂಟ ಸರ್ಕಾರದ ರಾಜ್ಯ ಕಚೇರಿಗಳು, ಮಾರುಕಟ್ಟೆಗಳು, ಅಂಗಡಿಗಳು, ಕಾರ್ಖಾನೆಗಳು, ಶಾಲೆಗಳು, ಕಾಲೇಜುಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳು ಅಂದು ಬಂದ್‌ ಆಗಲಿದೆ. ಬಂದ್‌‌ ಬೆಳಿಗ್ಗೆ 6 ಗಂಟೆಯಿಂದ ಆರಂಭವಾಗಿ ಸಂಜೆ 4 ಗಂಟೆಯವರೆಗೆ ಜಾರಿಯಲ್ಲಿರುತ್ತದೆ" ಎಂದು ಎಸ್‌ಕೆಎಂ ಶುಕ್ರವಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಯಲ್ಲಿ ತಿಳಿಸಿದೆ.

  ಸಾರ್ವಜನಿಕ ಮತ್ತು ಖಾಸಗಿ ಸಾರಿಗೆ ಕೂಡಾ ಬಂದ್‌ ಆಗಲಿದೆ ಎಂದು ಎಸ್‌ಕೆಎಂ ಹೇಳಿದ್ದು, ಆಂಬುಲೆನ್ಸ್ ಮತ್ತು ಅಗ್ನಿಶಾಮಕ ಸೇವೆಗಳು ಸೇರಿದಂತೆ ತುರ್ತು ಸೇವೆಗಳು ಮಾತ್ರ ಬಂದ್ ಸಮಯದಲ್ಲಿ ಕಾರ್ಯನಿರ್ವಸಲಿದೆ ಎಂದು ಅದು ತಿಳಿಸಿದೆ.

  ಬಂದ್‌ಗೆ ಸಂಬಂಧಿಸಿದಂತೆ ಮುಂದಿನ ಯೋಜನೆಗಾಗಿ ಸೆಪ್ಟೆಂಬರ್ 20 ರಂದು ಮುಂಬೈನಲ್ಲಿ "ರಾಜ್ಯ ಮಟ್ಟದ ಪೂರ್ವಸಿದ್ಧತಾ ಸಭೆ" ನಡೆಯಲಿದೆ ಎಂದು ಎಸ್‌ಕೆಎಂ ಹೇಳಿದೆ.

  ಅದೇ ದಿನ ಉತ್ತರ ಪ್ರದೇಶದ ಸೀತಾಪುರದಲ್ಲಿ ‘ಕಿಸಾನ್ ಮಜ್ದೂರ್ ಮಹಾಪಂಚಾಯತ್’ ಆಯೋಜಿಸಲಾಗುವುದು ಮತ್ತು ಅದರ ನಂತರ ಸೆಪ್ಟೆಂಬರ್ 22 ರಂದು ಉತ್ತರಾಖಂಡದ ರೂರ್ಕಿಯಲ್ಲಿ ‘ಕಿಸಾನ್ ಮಹಾಪಂಚಾಯತ್’ ನಡೆಯಲಿದೆ.

  ಪ್ರತಿಭಟನಾ ನಿರತ ರೈತರು ಸೆಪ್ಟೆಂಬರ್ 22 ರಿಂದ ಟಿಕ್ರಿ ಮತ್ತು ಸಿಂಘು ಗಡಿಯ ಪ್ರತಿಭಟನಾ ಸ್ಥಳಗಳಲ್ಲಿ ಐದು ದಿನಗಳ ಕಬಡ್ಡಿ ಲೀಗ್ ಅನ್ನು ಆಯೋಜಿಸಲಿದೆ. ಸ್ಪರ್ಧೆಯಲ್ಲಿ ವಿವಿಧ ರಾಜ್ಯಗಳ ತಂಡಗಳು ಭಾಗವಹಿಸುವ ನಿರೀಕ್ಷೆಯಿದೆ. ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ಕಳೆದ ಒಂದು ವರ್ಷದಿಂದ ದೆಹಲಿಯ ಗಡಿಗಲು ಸೇರಿದಂತೆ ದೇಶದ ಇತರ ಭಾಗಗಳಲ್ಲೂ ಹೋರಾಟ ಮಾಡುತ್ತಿದ್ದಾರೆ.

  ಇದನ್ನೂ ಓದಿ: Subramanian Swamy| ದೇಶದ ಆರ್ಥಿಕ ಚೇತರಿಗೆ 12 ಪತ್ರ ಬರೆದರೂ ಪ್ರಧಾನಿ ಮೋದಿ ಕ್ಯಾರೆ ಎಂದಿಲ್ಲ; ಸುಬ್ರಮಣಿಯನ್ ಸ್ವಾಮಿ ಕಿಡಿ

  ರೈತರ ಒಕ್ಕೂಟ ಸರ್ಕಾರದೊಂದಿಗೆ 10 ಕ್ಕೂ ಹೆಚ್ಚು ಬಾರಿ ಮಾತುಕತೆ ನಡೆಸಿದ್ದು, ಯಾವುದು ಸಫಲವಾಗಿಲ್ಲ. ಕೃಷಿ ಕಾನೂನನ್ನು ಸರ್ಕಾರ ಹಿಂಪಡೆಯುವವರೆಗೂ ಹೋರಾಟ ವಾಪಾಸು ಪಡೆಯುವುದಿಲ್ಲ ಎಂದು ರೈತ ಸಂಘಟನೆಗಳು ಹೇಳಿವೆ.

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
  Published by:MAshok Kumar
  First published: