ನಮಗೆ ತೊಂದರೆ ನೀಡುವುದನ್ನು ನಿಲ್ಲಿಸುವವರೆಗೆ ಮಾತುಕತೆ ಇಲ್ಲ: ದೆಹಲಿ ಪ್ರತಿಭಟನಾನಿರತ ರೈತರ ಸ್ಪಷ್ಟನೆ

ಹೀಗೆ ತೊಂದರೆ ಕೊಡುತ್ತಿರುವ ಹಿನ್ನೆಲೆಯಲ್ಲಿ 'ಮಾತುಕತೆ ವಿರೋಧಿಸಿ' ಸಂಯುಕ್ತ್ ಕಿಸಾನ್ ಮೋರ್ಚಾ ಹೇಳಿಕೆ ಬಿಡುಗಡೆ ಮಾಡಿದೆ. ಇದಲ್ಲದೆ ರೈತ ವಿರೋಧಿಯಾಗಿರುವ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು ಎಂಬುದನ್ನು ಬಿಟ್ಟು ರೈತರು ಕೇಂದ್ರ ಸರ್ಕಾರದಿಂದ ಮತ್ತೇ ಇನ್ನೇನನ್ನೂ ನಿರೀಕ್ಷೆ ಮಾಡುವುದಿಲ್ಲ ಎಂಬುದಾಗಿಯೂ ಸಂಯುಕ್ತ್ ಕಿಸಾನ್ ಮೋರ್ಚಾ ಸ್ಪಷ್ಟಪಡಿಸಿದೆ.

ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ.

ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ.

  • Share this:
ನವದೆಹಲಿ (ಫೆ. 2): ಇತ್ತೀಚೆಗೆ ಕೇಂದ್ರ ಸರ್ಕಾರ ತಂದಿರುವ ಮೂರು ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿ ಗಡಿಯಲ್ಲಿ ಹೋರಾಟ ಮಾಡುತ್ತಿರುವ ರೈತರು 'ಕೇಂದ್ರ ಸರ್ಕಾರ ಮತ್ತು ಪೊಲೀಸರು ತಮಗೆ ನೀಡುತ್ತಿರುವ ಕಿರುಕುಳಗಳನ್ನು ನಿಲ್ಲಿಸುವವರೆಗೆ ಸರ್ಕಾರದ ಜೊತೆ ಯಾವುದೇ ರೀತಿಯ ಮಾತುಕತೆ ನಡೆಸಲು ಸಾಧ್ಯವಿಲ್ಲ' ಎಂದು ಹೇಳಿದ್ದಾರೆ.

ಈಗಾಗಲೇ ಕೇಂದ್ರ ಸರ್ಕಾರ ಮತ್ತು ಹೋರಾಟ ನಡೆಸುತ್ತಿರುವ ರೈತ ಸಂಘಟನೆಗಳ ಪದಾಧಿಕಾರಿಗಳ ಜೊತೆ 11 ಸುತ್ತು ಮಾತುಕತೆ ಆಗಿ ಅಷ್ಟೂ ಸುತ್ತಿನ ಮಾತುಕತೆ ವಿಫಲವಾಗಿದೆ. ರೈತರು ಮೂರು ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂಪಡೆಯುವ ನಮ್ಮ ನಿಲುವಿನಲ್ಲಿ ಬದಲಾವಣೆ ಇಲ್ಲ. ತಾವು ಹೋರಾಟವನ್ನು ತೀವ್ರಗೊಳಿಸುವುದಾಗಿ ಹೇಳಿದ್ದಾರೆ. ರೈತರ ಹೋರಾಟ ಹೆಚ್ಚುತ್ತಿರುವುದರಿಂದ ಕೇಂದ್ರ ಸರ್ಕಾರ ಈಗ ರೈತರ  ಜೊತೆ ಔಪಚಾರಿಕ ಚರ್ಚೆ ನಡೆಸುವ ಪ್ರಯತ್ನ ಮಾಡುತ್ತಿದೆ. ಆದರೆ ರೈತ ಸಂಘಟನೆಗಳನ್ನು ಮುನ್ನಡೆಸುತ್ತಿರುವ ಸಂಯುಕ್ತ್ ಕಿಸಾನ್ ಮೋರ್ಚಾ ಕೇಂದ್ರ ಸರ್ಕಾರ ಮತ್ತು'ಪೊಲೀಸರು ತಮಗೆ ನೀಡುತ್ತಿರುವ ಕಿರುಕುಳಗಳನ್ನು ನಿಲ್ಲಿಸುವವರೆಗೆ' ಸರ್ಕಾರದ ಜೊತೆ ಯಾವುದೇ ರೀತಿಯ ಮಾತುಕತೆ ನಡೆಸಲು ಸಾಧ್ಯವಿಲ್ಲ' ಎಂದು ಸ್ಪಷ್ಟಪಡಿಸಿದೆ.

ಇದನ್ನು ಓದಿ: Farmers Protest: ಸೇತುವೆಗಳನ್ನು ಕಟ್ಟಿ ಗೋಡೆಗಳನ್ನಲ್ಲ; ರೈತ ಹೋರಾಟವನ್ನು ಹಣಿಯುತ್ತಿರುವ ಕೇಂದ್ರಕ್ಕೆ ರಾಹುಲ್ ಕಿವಿಮಾತು

ರೈತರು ದೆಹಲಿ ಪ್ರವೇಶ ಮಾಡುತ್ತಾರೆ ಎನ್ನುವ ಕಾರಣಕ್ಕೆ ಪ್ರತಿಭಟನೆ ನಡೆಯುತ್ತಿರುವ ರಸ್ತೆಗಳಲ್ಲಿ ಹಲವು ಸುತ್ತಿನ ಬ್ಯಾರಿಕೇಡ್‌ ಹಾಕಲಾಗಿದೆ. ಅದರ ಮೇಲೆ ಮುಳ್ಳು ತಂತಿ ಬೇಲಿಗಳನ್ನು ಹಾಕಲಾಗಿದೆ. ರಸ್ತೆಗಳಲ್ಲಿ ಕಂದಕ ಸೃಷ್ಟಿಸಲಾಗಿದೆ. ಭಾರೀ ಜನರಿರುವ ಕಡೆ ದೊಡ್ಡ ಮಟ್ಟದ ಅಪಾಯ ತಂದೊಡ್ಡಬಹುದು ಎಂಬ ಪರಿವೆಯೇ ಇಲ್ಲದೆ ರಸ್ತೆಗಳಲ್ಲಿ ಮೊಳೆಗಳನ್ನು ನೆಡಲಾಗಿದೆ. ಜೊತೆಗೆ ತಾತ್ಕಾಲಿಕವಾಗಿ ಇಂಟರ್​ನೆಟ್, ಕರೆಂಟ್ ಮತ್ತು ನೀರನ್ನು ಸ್ಥಗಿತಗೊಳಿಸಲಾಗುತ್ತಿದೆ. ಹೀಗೆ ತೊಂದರೆ ಕೊಡುತ್ತಿರುವ ಹಿನ್ನೆಲೆಯಲ್ಲಿ 'ಮಾತುಕತೆ ವಿರೋಧಿಸಿ' ಸಂಯುಕ್ತ್ ಕಿಸಾನ್ ಮೋರ್ಚಾ ಹೇಳಿಕೆ ಬಿಡುಗಡೆ ಮಾಡಿದೆ.
ಇದಲ್ಲದೆ ರೈತ ವಿರೋಧಿಯಾಗಿರುವ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು ಎಂಬುದನ್ನು ಬಿಟ್ಟು ರೈತರು ಕೇಂದ್ರ ಸರ್ಕಾರದಿಂದ ಮತ್ತೇ ಇನ್ನೇನನ್ನೂ ನಿರೀಕ್ಷೆ ಮಾಡುವುದಿಲ್ಲ ಎಂಬುದಾಗಿಯೂ ಸಂಯುಕ್ತ್ ಕಿಸಾನ್ ಮೋರ್ಚಾ ಸ್ಪಷ್ಟಪಡಿಸಿದೆ.

ಕೇಂದ್ರ ಸರ್ಕಾರ ಮತ್ತು ಪೊಲೀಸರು ರೈತರಿಗೆ ಕಿರುಕುಳ ನೀಡುವ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ಅವರು 'ಸೇತುವೆಗಳನ್ನು ಕಟ್ಟಿ, ಗೋಡೆಗಳನ್ನಲ್ಲ' ಎಂಬ ಮಾರ್ಮಿಕವಾದ ಮಾತನ್ನಾಡಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರು 'ಪ್ರಧಾನ್ ಮಂತ್ರಿ ಜೀ, ಅಪನೆ ಕಿಸಾನೊ ಸೆ ಹೀ ಯುದ್ಧ್?’ (ಪ್ರಧಾನ ಮಂತ್ರಿಯವರೇ, ನಮ್ಮ ರೈತರೊಂದಿಗೇ ಯುದ್ಧವಾ?) ಎಂದು ಟ್ವೀಟ್ ಮಾಡಿದ್ದಾರೆ. ಜೊತೆಗೆ ದೆಹಲಿ ಗಡಿಯಲ್ಲಿ ಪೊಲೀಸರು ನಿರ್ಮಿಸಿರುವ ಮುಳ್ಳು ತಂತಿಯುಳ್ಳ ಬೇಲಿ ಹಾಗೂ ಬ್ಯಾರಿಕೇಡ್ ಗೋಡೆಯ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇಂದು ಸಂಸತ್ ಕಲಾಪದ ವೇಳೆ ಕೂಡ ದೆಹಲಿ ಗಡಿಗಳಲ್ಲಿ ಗೋಡೆ ನಿರ್ಮಿಸಿರುವ, ಮುಳ್ಳು ಬೇಲಿ ಹಾಕಿರುವ ಕೇಂದ್ರ ಸರ್ಕಾರದ ಅಮಾನುಷ ವರ್ತನೆ ಬಗ್ಗೆ ವಿರೋಧ ವ್ಯಕ್ತವಾಯಿತು.
Published by:HR Ramesh
First published: