ನವದೆಹಲಿ (ಡಿ.2): ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಲು ಕೇಂದ್ರ ಸರ್ಕಾರ ವಿಶೇಷ ಸಂಸತ್ ಅಧಿವೇಶನ ಕರೆಯಬೇಕು ಎಂದು ಪ್ರತಿಭಟನಾ ನಿರತ ರೈತರು ಆಗ್ರಹಿಸಿದ್ದಾರೆ. ಒಂದು ವೇಳೆ ತಮ್ಮ ಬೇಡಿಕೆ ಈಡೇರಿಸದಿದ್ದರೆ ದೇಶದ ರಾಜಧಾನಿಯ ಎಲ್ಲಾ ರಸ್ತೆಗಳನ್ನು ಬಂದ್ ಮಾಡುವ ಎಚ್ಚರಿಕೆ ನೀಡಿದ್ದಾರೆ. ಪ್ರತಿಭಟನೆ ಕೈ ಬಿಡುವಂತೆ ಕುರಿತು ನಾಳೆ ಕೇಂದ್ರ ಸರ್ಕಾರದ ಸಚಿವ ನಿಯೋಗದೊಂದಿಗೆ ರೈತರು ಮಾತುಕತೆ ನಡೆಸಲಿದ್ದಾರೆ. ಇದಕ್ಕೂ ಮುನ್ನ ಇಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ರೈತ ಮುಖಂಡ ದರ್ಶನ್ ಪಾಲ್, ಸರ್ಕಾರ ರೈತ ಸಂಘಟನೆಗಳನ್ನು ಇಬ್ಬಾಗವಾಗಿಸುತ್ತಿವೆ ಎಂಬ ಆರೋಪ ಹೊರಿಸಿದ್ದಾರೆ. ಮೂರು ಕಾಯ್ದೆಗಳನ್ನು ರದ್ದು ಪಡಿಸುವವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ. ಈ ಮೂರು ಮಸೂದೆ ರದ್ದುಗೊಳಿಸಲಿಉ ಕೇಂದ್ರ ಸರ್ಕಾರ ವಿಶೇಷ ಸಂಸತ್ ಅಧಿವೇಶನ ನಡೆಸಬೇಕು ಎಂದಿದ್ದಾರೆ.
We demand that the Central government should call a special Parliament Session to repeal the farm laws: Darshan Pal, President of Krantikari Kisan Union pic.twitter.com/IPlOXKKeNH
— ANI (@ANI) December 2, 2020
We also held talks with Tikait Ji (of Bharatiya Kisan Union), he told us that he is with us. We are together in this struggle: Darshan Pal, President of Krantikari Kisan Union https://t.co/jjQq0YzoQ2 pic.twitter.com/3mHxzoUWuA
— ANI (@ANI) December 2, 2020
ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರುದ್ಧ ಪಂಜಾಬ್, ಹರಿಯಾಣ ಮತ್ತು ಇತರೆ ರಾಜ್ಯಗಳ ಸಾವಿರಾರು ರೈತರು ದೆಹಲಿ ಚಲೋ ಪ್ರತಿಭಟನೆ ನಡೆಸಿದ್ದಾರೆ. ಕಳೆದ ಏಳು ದಿನಗಳಿಂದ ಈ ಪ್ರತಿಭಟನೆ ನಡೆಯುತ್ತಿದೆ. ಈ ಕಾಯ್ದೆಗಳು ಕನಿಷ್ಠ ಬೆಂಬಲ ಬೆಲೆ ಹಾಗೂ ಮಂಡಿ ವ್ಯವಸ್ಥೆಗೆ ಅಂತ್ಯ ಹಾಡಲಿದೆ ಎಂಬ ಬಗ್ಗೆ ರೈತರು ಕಳವಳ ವ್ಯಕ್ತಪಡಿಸಿದ್ದಾರೆ.
ಆದರೆ, ಸರ್ಕಾರ ಮಾತ್ರ ಈ ಕಾಯ್ದೆಗಳು ರೈತರಿಗೆ ಅನುಕೂಲ ಮಾಡಿಕೊಡಲಿದೆ. ಅಂತರಾಷ್ಟ್ರೀಯ ಮಾರುಕಟ್ಟೆ ಅವಕಾಶ ನೀಡಲಿದೆ. ರೈತರಿಗೆ ಉತ್ತಮ ಅವಕಾಶಗಳನ್ನು ಇವು ಒದಗಿಸಲಿದೆ ಎಂದು ಸಮರ್ಥಿಸಿಕೊಳ್ಳುತ್ತಿದೆ. ಅಲ್ಲದೇ ವಿರೋಧ ಪಕ್ಷಗಳು ರೈತರನ್ನು ದಾರಿ ತಪ್ಪಿಸುವ ಪ್ರಯತ್ನ ನಡೆಸಿವೆ ಎಂದು ಟೀಕಿಸಿವೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ