35ನೇ ದಿನಕ್ಕೆ ಕಾಲಿಟ್ಟ ಅನ್ನದಾತರ ಧರಣಿ; ಇಂದು ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಮತ್ತೊಂದು ಸಭೆ

ಡಿಸೆಂಬರ್ 14ರಂದು ಒಂದು ದಿನದ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು. ಡಿಸೆಂಬರ್ 21ರಿಂದ ರಿಲೇ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಅಂದರೆ 11 ಜನ ರೈತರ ತಂಡ 24 ಗಂಟೆ ಉಪವಾಸ ಇರುವುದು ಇದಾದ ಮೇಲೆ ಮತ್ತೆ 11 ಜನ ರೈತರ ತಂಡ 24 ಗಂಟೆ ಉಪವಾಸ ಇರುವುದಾಗಿದೆ. ಡಿಸೆಂಬರ್ 25ರಿಂದ ಹರಿಯಾಣದ ಎಲ್ಲಾ ಟೋಲ್ ಗಳಲ್ಲಿ ಶುಲ್ಕ ಸಂಗ್ರಹಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಸಾರ್ವಜನಿಕರ ಸಂಚಾರಕ್ಕೆ ತೊಂದರೆಯೂ ಆಗದಂತೆ, ಸರ್ಕಾರಕ್ಕೆ ಶುಲ್ಕ ಸಿಗಬಾರದಂತೆ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸುತ್ತಿದ್ದಾರೆ.

ರೈತರ ಪ್ರತಿಭಟನೆ

ರೈತರ ಪ್ರತಿಭಟನೆ

  • Share this:
ನವದೆಹಲಿ(ಡಿ. 30): ಕೇಂದ್ರ ಸರ್ಕಾರ ಇತ್ತೀಚೆಗೆ ತಂದಿರುವ ರೈತ ವಿರೋಧಿ ಮೂರು ಕೃಷಿ ಕಾನೂನುಗಳನ್ನು ರದ್ದು ಮಾಡಬೇಕೆಂದು ಆಗ್ರಹಿಸಿ ಕಳೆದ ನವೆಂಬರ್ 26ರಿಂದ ದೆಹಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ 35ನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ರೈತ ಸಂಘಟನೆಗಳ ಪ್ರತಿನಿಧಿಗಳು ಮತ್ತು ಸರ್ಕಾರದ ನಡುವೆ ಇಂದು ಮತ್ತೊಂದು ಸಭೆ ನಡೆಯಲಿದೆ. ಈಗಾಗಲೇ ರೈತ ಸಂಘಟನೆಗಳ ಪ್ರತಿನಿಧಿಗಳು ಮತ್ತು ಸರ್ಕಾರದ ನಡುವೆ 5 ಸಭೆಗಳಾಗಿದ್ದು ಅಷ್ಟೂ‌ ಸಭೆಗಳು ವಿಫಲವಾಗಿದ್ದವು. ಕೇಂದ್ರ ಗೃಹ ಸಚಿವ ಅಮಿತ್ ಶಾ ಒಮ್ಮೆ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಅನೌಪಚಾರಿಕ ಮಾತುಕತೆ ನಡೆಸಿದ್ದರು. ಅವರು ಕೂಡ‌ ರೈತರ ವಿಶ್ವಾಸ ಗಳಿಸಲು ವಿಫಲರಾಗಿದ್ದರು. ಈ ಹಿನ್ನಲೆಯಲ್ಲಿ ದೆಹಲಿ ಗಡಿಗಳಲ್ಲಿ ರೈತರು ಅನಿರ್ದಿಷ್ಟಾವಧಿ ಪ್ರತಿಭಟನೆ ಮುಂದುವರೆಸುತ್ತಿದ್ದಾರೆ. ಇವತ್ತು ಮತ್ತೊಮ್ಮೆ ಸುತ್ತಿನ ಸಭೆ ನಡೆಯುತ್ತಿದ್ದು ಇಂದಿನ ಸಭೆಯಲ್ಲಾದರೂ ರೈತರ ಸಮಸ್ಯೆಗೆ ಪರಿಹಾರ ಸಿಗುತ್ತಾ ಎಂಬುದನ್ನು ಕಾದುನೋಡಬೇಕಾಗಿದೆ.

ನವೆಂಬರ್ 26ರಿಂದಲೂ ಶಾಂತಯುತವಾಗಿ ಪ್ರತಿಭಟನೆ ನಡೆಸುತ್ತಿರುವ ರೈತರು ಡಿಸೆಂಬರ್ 8ರಂದು 'ಭಾರತ್ ಬಂದ್'ಗೆ ಕರೆ ಕೊಟ್ಟಿದ್ದರು. ಡಿಸೆಂಬರ್ 12ರಂದು ರೈತರು ಪಂಜಾಬ್, ಹರಿಯಾಣ ಮತ್ತಿತರ ಕಡೆ ಟೋಲ್ ಪ್ಲಾಜಾಗಳನ್ನು ಬಂದ್ ಮಾಡಿ ಮುಷ್ಕರ ನಡೆಸಿದ್ದರು. ಮೊದಲಿಗೆ ಪಂಜಾಬ್, ಹರಿಯಾಣಗಳಿಂದ ದೆಹಲಿಗೆ ಬರುವ ರಸ್ತೆಗಳನ್ನು ತಡೆದಿದ್ದ ರೈತರು ಬಳಿಕ ಉತ್ತರ ಪ್ರದೇಶ ಹಾಗೂ ರಾಜಸ್ಥಾನಗಳಿಂದ ದೆಹಲಿಗೆ ಬರುವ ದೆಹಲಿ-ಜೈಪುರ್ ರಸ್ತೆಯನ್ನೂ ಬಂದ್ ಮಾಡಿದ್ದರು.

Vishnuvardhan Death Anniversary: ವಿಷ್ಣುವರ್ಧನ್​ರ 11ನೇ ವರ್ಷದ ಪುಣ್ಯ ಸ್ಮರಣೆ: ದಾದಾರನ್ನು ಸ್ಮರಿಸಿದ ಸೆಲೆಬ್ರಿಟಿಗಳು

ಡಿಸೆಂಬರ್ 14ರಂದು ಒಂದು ದಿನದ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು. ಡಿಸೆಂಬರ್ 21ರಿಂದ ರಿಲೇ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಅಂದರೆ 11 ಜನ ರೈತರ ತಂಡ 24 ಗಂಟೆ ಉಪವಾಸ ಇರುವುದು ಇದಾದ ಮೇಲೆ ಮತ್ತೆ 11 ಜನ ರೈತರ ತಂಡ 24 ಗಂಟೆ ಉಪವಾಸ ಇರುವುದಾಗಿದೆ. ಡಿಸೆಂಬರ್ 25ರಿಂದ ಹರಿಯಾಣದ ಎಲ್ಲಾ ಟೋಲ್ ಗಳಲ್ಲಿ ಶುಲ್ಕ ಸಂಗ್ರಹಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಸಾರ್ವಜನಿಕರ ಸಂಚಾರಕ್ಕೆ ತೊಂದರೆಯೂ ಆಗದಂತೆ, ಸರ್ಕಾರಕ್ಕೆ ಶುಲ್ಕ ಸಿಗಬಾರದಂತೆ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸುತ್ತಿದ್ದಾರೆ.

ಕೇಂದ್ರ ಸರ್ಕಾರ ಕೃಷಿ ಕಾನೂನುಗಳಲ್ಲಿನ ಭಿನ್ನಾಭಿಪ್ರಾಯಗಳನ್ನು ವಿಂಗಡಿಸಿ ಚರ್ಚಿಸಲು ಸಮಿತಿಯೊಂದನ್ನು ರಚಿಸುವ ಪ್ರಸ್ತಾಪವನ್ನು ಮುಂದಿಟ್ಟಿದ್ದಾರೆ. ಜೊತೆಗೆ ಕನಿಷ್ಠ ಬೆಂಬಲ ಬೆಲೆ ಪದ್ದತಿ ಮುಂದುವರೆಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಆದರೆ ಈ ಪ್ರಸ್ತಾಪಗಳಿಗೆ ಒಪ್ಪದ ರೈತ ಮುಖಂಡರು ಕೇಂದ್ರ ಸರ್ಕಾರ ಇತ್ತೀಚೆಗೆ ತಂದಿರುವ ಮೂರು ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂಪಡೆಯಲೇಬೇಕು. ರೈತರ ಎಲ್ಲಾ ಉತ್ಪನ್ನಗಳಿಗೂ ಕನಿಷ್ಠ ಬೆಂಬಲ ಬೆಲೆ ಕೊಡಬೇಕು. ಜೊತೆಗೆ ರೈತರಿಗೆ ಮಾರಕವಾಗಿರುವ ವಿದ್ಯುತ್ ಕಾನೂನನ್ನು ವಾಪಸ್ ಪಡೆಯಲೇಬೇಕು ಎಂದು ಒತ್ತಾಯಿಸಿದ್ದಾರೆ.

ಹೀಗೆ ಪರಸ್ಪರ ಒಮ್ಮತ ಮೂಡದೇ ಸಮಸ್ಯೆ ಸಮಸ್ಯೆಯಾಗಿಯೇ ಉಳಿದಿದೆ. ಅಧಿಕೃತವಾಗಿ ಹಾಗೂ ಅನೌಪಚಾರಿಕವಾಗಿ ನಡೆಸಿದ ಮಾತುಕತೆಗಳು ವಿಫಲವಾಗಿವೆ. ರೈತರು ದೆಹಲಿ ಚಲೊ, ಹೆದ್ದಾರಿ ತಡೆ, ಟೋಲ್ ಫ್ಲಾಜಾಗಳ ಬಂದ್, ಬಿಜೆಪಿ ನಾಯಕರ ಮನೆ ಮುಂದೆ ಮುಷ್ಕರ, ಭಾರತ್ ಬಂದ್, ಉಪವಾಸ ಸತ್ಯಾಗ್ರಹಗಳೆಲ್ಲವನ್ನೂ ಶಾಂತವಾಗಿ ನಡೆಸಿದ್ದರೂ ಕೇಂದ್ರ ಸರ್ಕಾರ ತನ್ನ ಹಠಮಾರಿತನದಿಂದ ಹಿಂದೆ ಸರಿದಿಲ್ಲ. ಹಾಗಾಗಿ ಮುಂದೇನಾಗುತ್ತದೆ ಎನ್ನುವುದನ್ನು ಈಗಲೇ ಹೇಳಲು‌ ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ದೇಶದ ವಿವಿಧ ಮೂಲೆಗಳಿಂದ ದೆಹಲಿಯತ್ತ ಧಾವಿಸಿದ್ದ ರೈತರು ನವೆಂಬರ್ 26ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ಪ್ರತಿಭಟನೆಗೆ ಮೊದಲು ಒಪ್ಪಿಗೆ ನೀಡಿದ್ದ ಕೇಂದ್ರ ಸರ್ಕಾರ ನಂತರ ಪ್ರತಿಭಟನೆ ಹತ್ತಿಕ್ಕಲೆಂದೇ ಕೊರೋನಾ ಕಾರಣವೊಡ್ಡಿ ಒಪ್ಪಿಗೆಯನ್ನು ಹಿಂಪಡೆದಿತ್ತು. ರೈತರು ದೆಹಲಿಯನ್ನು ಪ್ರವೇಶಿಸದಂತೆ ಗಡಿಯಲ್ಲೇ ತಡೆದಿತ್ತು. ಆದುದರಿಂದ ಸದ್ಯ ದೆಹಲಿಯ ಗಡಿಗಳಲ್ಲೇ ಇರುವ ರೈತರು ಅಲ್ಲೇ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ.
Published by:Latha CG
First published: