HOME » NEWS » National-international » FARMERS PROTEST 45TH DAY OF FARMERS PROTEST AT NEW DELHI STILL CONTINUE DBDEL LG

Farmers Protest: 45ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ; ನಾಳೆ ಮತ್ತೊಂದು ಸುತ್ತಿನ ಸಭೆ

ಮಾತುಕತೆಗಳು ವಿಫಲವಾದದ್ದರಿಂದ ದೆಹಲಿ ಗಡಿಗಳಲ್ಲಿ ರೈತರು ಅನಿರ್ದಿಷ್ಟಾವಧಿ ಪ್ರತಿಭಟನೆ ಮುಂದುವರೆಸಿದ್ದಾರೆ.  ಈ ನಡುವೆ ರೈತ ಸಂಘಟನೆಗಳ ಪ್ರತಿನಿಧಿಗಳು ಮತ್ತು ಕೇಂದ್ರ ಸರ್ಕಾರದ ಮಧ್ಯೆ ನಾಳೆ ಇನ್ನೊಂದು ಸುತ್ತಿನ ಮಾತುಕತೆ ನಡೆಯಲಿದೆ.

news18-kannada
Updated:January 7, 2021, 10:44 AM IST
Farmers Protest: 45ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ; ನಾಳೆ ಮತ್ತೊಂದು ಸುತ್ತಿನ ಸಭೆ
ಸಾಂದರ್ಭಿಕ ಚಿತ್ರ.
  • Share this:
ನವದೆಹಲಿ (ಜ. 7): ಕೇಂದ್ರ ಸರ್ಕಾರ ಇತ್ತೀಚೆಗೆ ತಂದಿರುವ ರೈತ ವಿರೋಧಿ ಮೂರು ಕೃಷಿ ಕಾನೂನುಗಳನ್ನು ರದ್ದು ಮಾಡಬೇಕೆಂದು ಆಗ್ರಹಿಸಿ ಕಳೆದ ನವೆಂಬರ್ 26ರಿಂದ ದೆಹಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ 44ನೇ ದಿನಕ್ಕೆ ಕಾಲಿಟ್ಟಿದೆ. ಈವರೆಗೆ ರೈತ ಸಂಘಟನೆಗಳ ಪ್ರತಿನಿಧಿಗಳು ಮತ್ತು ಸರ್ಕಾರದ ನಡುವೆ 7 ಸಭೆಗಳಾಗಿದ್ದು 7 ಸಭೆಗಳೂ ವಿಫಲವಾಗಿವೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ನಡೆಸಿದ್ದ ಅನೌಪಚಾರಿಕ ಮಾತುಕತೆಯೂ ವಿಫಲವಾಗಿದೆ. ಮಾತುಕತೆಗಳು ವಿಫಲವಾದದ್ದರಿಂದ ದೆಹಲಿ ಗಡಿಗಳಲ್ಲಿ ರೈತರು ಅನಿರ್ದಿಷ್ಟಾವಧಿ ಪ್ರತಿಭಟನೆ ಮುಂದುವರೆಸಿದ್ದಾರೆ.  ಈ ನಡುವೆ ರೈತ ಸಂಘಟನೆಗಳ ಪ್ರತಿನಿಧಿಗಳು ಮತ್ತು ಕೇಂದ್ರ ಸರ್ಕಾರದ ಮಧ್ಯೆ ನಾಳೆ ಇನ್ನೊಂದು ಸುತ್ತಿನ ಮಾತುಕತೆ ನಡೆಯಲಿದೆ.

ಜನವರಿ 4ರ ಸಭೆ ವಿಫಲವಾದರೆ ಹರಿಯಾಣದಲ್ಲಿರುವ ಎಲ್ಲಾ ಶಾಪಿಂಗ್ ಮಾಲ್ ಗಳು ಟೋಲ್ ಫ್ಲಾಜಾಗಳನ್ನು ಬಂದ್ ಮಾಡಿಸುವುದಾಗಿ ಜೊತೆಗೆ ಗಣರಾಜ್ಯೋತ್ಸವದ ದಿನ‌ ದೆಹಲಿಯಲ್ಲಿ ಟ್ರ್ಯಾಕ್ಟರ್ ಮೆರವಣಿಗೆ ಮಾಡುವುದಾಗಿ ಪ್ರತಿಭಟನಾನಿರತ ರೈತರು ಎಚ್ಚರಿಸಿದ್ದರು. ಈಗ ಸಭೆ ವಿಫಲವಾಗಿದೆ. ಈ ಹಿನ್ನಲೆಯಲ್ಲಿ ರೈತರು ಪ್ರತಿಭಟನೆಯನ್ನು ತೀವ್ರಗೊಳಿಸುವ ಸಾಧ್ಯತೆ ಇದೆ.

ನವೆಂಬರ್ 26ರಿಂದಲೂ ಶಾಂತಯುತವಾಗಿ ಪ್ರತಿಭಟನೆ ನಡೆಸುತ್ತಿರುವ ರೈತರು ಡಿಸೆಂಬರ್ 8ರಂದು 'ಭಾರತ್ ಬಂದ್'ಗೆ ಕರೆ ಕೊಟ್ಟಿದ್ದರು. ಡಿಸೆಂಬರ್ 12ರಂದು ರೈತರು ಪಂಜಾಬ್, ಹರಿಯಾಣ ಮತ್ತಿತರ ಕಡೆ ಟೋಲ್ ಪ್ಲಾಜಾಗಳನ್ನು ಬಂದ್ ಮಾಡಿ ಮುಷ್ಕರ ನಡೆಸಿದ್ದರು. ಮೊದಲಿಗೆ ಪಂಜಾಬ್, ಹರಿಯಾಣಗಳಿಂದ ದೆಹಲಿಗೆ ಬರುವ ರಸ್ತೆಗಳನ್ನು ತಡೆದಿದ್ದ ರೈತರು ಬಳಿಕ ಉತ್ತರ ಪ್ರದೇಶ ಹಾಗೂ ರಾಜಸ್ಥಾನಗಳಿಂದ ದೆಹಲಿಗೆ ಬರುವ ದೆಹಲಿ-ಜೈಪುರ್ ರಸ್ತೆಯನ್ನೂ ಬಂದ್ ಮಾಡಿದ್ದರು.

ಮಂಗಳೂರಿನಲ್ಲಿ ಗಾಂಜಾ ವ್ಯಸನಿಗಳನ್ನ ಮೂರು ರೌಂಡ್ ಓಡಿಸಿದ ಪೊಲೀಸ್ ಕಮಿಷನರ್

ಡಿಸೆಂಬರ್ 14ರಂದು ಒಂದು ದಿನದ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು. ಡಿಸೆಂಬರ್ 21ರಿಂದ ರಿಲೇ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಅಂದರೆ 11 ಜನ ರೈತರ ತಂಡ 24 ಗಂಟೆ ಉಪವಾಸ ಇರುವುದು ಇದಾದ ಮೇಲೆ ಮತ್ತೆ 11 ಜನ ರೈತರ ತಂಡ 24 ಗಂಟೆ ಉಪವಾಸ ಇರುವುದಾಗಿದೆ.

ಕೇಂದ್ರ ಸರ್ಕಾರ ಕೃಷಿ ಕಾನೂನುಗಳಲ್ಲಿನ ಭಿನ್ನಾಭಿಪ್ರಾಯಗಳನ್ನು ವಿಂಗಡಿಸಿ ಚರ್ಚಿಸಲು ಸಮಿತಿಯೊಂದನ್ನು ರಚಿಸುವ ಪ್ರಸ್ತಾಪವನ್ನು ಮುಂದಿಟ್ಟಿದ್ದಾರೆ. ಜೊತೆಗೆ ಕನಿಷ್ಠ ಬೆಂಬಲ ಬೆಲೆ ಪದ್ದತಿ ಮುಂದುವರೆಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಆದರೆ ಈ ಪ್ರಸ್ತಾಪಗಳಿಗೆ ಒಪ್ಪದ ರೈತ ಮುಖಂಡರು ಕೇಂದ್ರ ಸರ್ಕಾರ ಇತ್ತೀಚೆಗೆ ತಂದಿರುವ ಮೂರು ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂಪಡೆಯಲೇಬೇಕು. ರೈತರ ಎಲ್ಲಾ ಉತ್ಪನ್ನಗಳಿಗೂ ಕನಿಷ್ಠ ಬೆಂಬಲ ಬೆಲೆ ಕೊಡಬೇಕು. ಜೊತೆಗೆ ರೈತರಿಗೆ ಮಾರಕವಾಗಿರುವ ವಿದ್ಯುತ್ ಕಾನೂನನ್ನು ವಾಪಸ್ ಪಡೆಯಲೇಬೇಕು ಎಂದು ಒತ್ತಾಯಿಸಿದ್ದಾರೆ.

ಹೀಗೆ ಪರಸ್ಪರ ಒಮ್ಮತ ಮೂಡದೇ ಸಮಸ್ಯೆ ಸಮಸ್ಯೆಯಾಗಿಯೇ ಉಳಿದಿದೆ. ಅಧಿಕೃತವಾಗಿ ಹಾಗೂ ಅನೌಪಚಾರಿಕವಾಗಿ ನಡೆಸಿದ ಮಾತುಕತೆಗಳು ವಿಫಲವಾಗಿವೆ. ರೈತರು ದೆಹಲಿ ಚಲೊ, ಹೆದ್ದಾರಿ ತಡೆ, ಟೋಲ್ ಫ್ಲಾಜಾಗಳ ಬಂದ್, ಬಿಜೆಪಿ ನಾಯಕರ ಮನೆ ಮುಂದೆ ಮುಷ್ಕರ, ಭಾರತ್ ಬಂದ್, ಉಪವಾಸ ಸತ್ಯಾಗ್ರಹಗಳೆಲ್ಲವನ್ನೂ ಶಾಂತವಾಗಿ ನಡೆಸಿದ್ದರೂ ಕೇಂದ್ರ ಸರ್ಕಾರ ತನ್ನ ಹಠಮಾರಿತನದಿಂದ ಹಿಂದೆ ಸರಿದಿಲ್ಲ. ಹಾಗಾಗಿ ಮುಂದೇನಾಗುತ್ತದೆ ಎನ್ನುವುದನ್ನು ಈಗಲೇ ಹೇಳಲು‌ ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.ದೇಶದ ವಿವಿಧ ಮೂಲೆಗಳಿಂದ ದೆಹಲಿಯತ್ತ ಧಾವಿಸಿದ್ದ ರೈತರು ನವೆಂಬರ್ 26ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ಪ್ರತಿಭಟನೆಗೆ ಮೊದಲು ಒಪ್ಪಿಗೆ ನೀಡಿದ್ದ ಕೇಂದ್ರ ಸರ್ಕಾರ ನಂತರ ಪ್ರತಿಭಟನೆ ಹತ್ತಿಕ್ಕಲೆಂದೇ ಕೊರೋನಾ ಕಾರಣವೊಡ್ಡಿ ಒಪ್ಪಿಗೆಯನ್ನು ಹಿಂಪಡೆದಿತ್ತು. ರೈತರು ದೆಹಲಿಯನ್ನು ಪ್ರವೇಶಿಸದಂತೆ ಗಡಿಯಲ್ಲೇ ತಡೆದಿತ್ತು. ಆದುದರಿಂದ ಸದ್ಯ ದೆಹಲಿಯ ಗಡಿಗಳಲ್ಲೇ ಇರುವ ರೈತರು ಅಲ್ಲೇ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ.
Youtube Video

ಸಭೆ ಬಳಿಕ ಮಾತನಾಡಿದ್ದ ಕೇಂದ್ರ ಕೃಷಿ ಸಚಿವ ನರೇಂದ್ರ ಥೋಮರ್, 'ಜನವರಿ 8ರಂದು ಮತ್ತೆ ಸಭೆ ಸೇರಿ ಚರ್ಚೆ ನಡೆಸುತ್ತೇವೆ. ಇಂದು ಕೃಷಿ ಕಾನೂನುಗಳನ್ನು ಹಿಂಪಡೆಯುವ ಬಗ್ಗೆ ಚರ್ಚೆ ಆಗಿಲ್ಲ. ರೈತರು ಕೇಂದ್ರ ಸರ್ಕಾರ ಮಧ್ಯಮ ಮಾರ್ಗ ಹುಡಕಲೆಂದು ಬಯಸಿದ್ದಾರೆ. ಎರಡೂ ಕೈ ಕೂಡಿದರೇನೇ ಚಪ್ಪಾಳೆ ತಟ್ಟಲು ಆಗುವುದು' ಎಂದು ಹೇಳಿದ್ದರು.
Published by: Latha CG
First published: January 7, 2021, 10:44 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories