HOME » NEWS » National-international » FARMERS PROTEST CONTINUES IN DELHI BORDER NEXT ROUND TALK WITH UNION GOVERNMENT ON DECEMBER 5 DBDEL SCT

ದೆಹಲಿ ಗಡಿಯಲ್ಲಿ ಮುಂದುವರಿದ ರೈತರ ಪ್ರತಿಭಟನೆ; ನಾಳೆ ಕೇಂದ್ರ ಸರ್ಕಾರದ ಜೊತೆ 5ನೇ ಸುತ್ತಿನ ಮಾತುಕತೆ

ಕೇಂದ್ರ ಸರ್ಕಾರದ ಜೊತೆಗಿನ ಮಾತುಕತೆ ಫಲಪ್ರದವಾಗಿಲ್ಲದ ಕಾರಣ ದೆಹಲಿ ಗಡಿಯಲ್ಲಿ ಪ್ರತಿಭಟನೆ ಮುಂದುವರೆಸಲು ನಿರ್ಧರಿಸಿರುವ ರೈತ ಸಂಘಟನೆಗಳು ಡಿಸೆಂಬರ್ 5ರಂದು ದೇಶಾದ್ಯಂತ ಹೋರಾಟ ಮಾಡುವುದಕ್ಕೂ ಮುಂದಾಗಿವೆ.

news18-kannada
Updated:December 4, 2020, 7:37 AM IST
ದೆಹಲಿ ಗಡಿಯಲ್ಲಿ ಮುಂದುವರಿದ ರೈತರ ಪ್ರತಿಭಟನೆ; ನಾಳೆ ಕೇಂದ್ರ ಸರ್ಕಾರದ ಜೊತೆ 5ನೇ ಸುತ್ತಿನ ಮಾತುಕತೆ
ಪ್ರತಿಭಟನೆಯಲ್ಲಿ ನಿರತರಾಗಿರುವ ಪಂಜಾಬ್​ನ ರೈತರು
  • Share this:
ನವದೆಹಲಿ, (ಡಿ. 4): ರಾಷ್ಟ್ರ ರಾಜಧಾನಿ ದೆಹಲಿ ಗಡಿಯಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿರುವ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ನಡೆದ ನಾಲ್ಕನೇ ಸುತ್ತಿನ ಮಾತುಕತೆ ಕೂಡ ವಿಫಲವಾಗಿದ್ದು, ರೈತರು ತಮ್ಮ ಪ್ರತಿಭಟನೆಯನ್ನು ಮುಂದುವರೆಸಲು ನಿರ್ಧರಿಸಿದ್ದಾರೆ. ಇದರಿಂದ ದೆಹಲಿ ಗಡಿಯಲ್ಲಿ ರೈತರು ನಡೆಸುತ್ತಿದ್ದ ಪ್ರತಿಭಟನೆ 9ನೇ ದಿನಕ್ಕೆ ಕಾಲಿಟ್ಟಿದೆ.

ಕೇಂದ್ರ ಕೃಷಿ ಸಚಿವ ನರೇಂದ್ರ ತೋಮರ್, ಪಿಯೂಷ್ ಗೋಯಲ್, ಕಿರಿಯ ಕೈಗಾರಿಕಾ ಸಚಿವ ಸೋಮಪ್ರಕಾಶ್ ಹಾಗೂ ರೈತ ಸಂಘಟನೆಗಳ 30ಕ್ಕೂ ಹೆಚ್ಚು ಪ್ರತಿನಿಧಿಗಳ‌ ನಡುವೆ ಮೊನ್ನೆ‌ ನಾಲ್ಕನೇ ಸುತ್ತಿನ  ಸಭೆ ನಡೆದಿತ್ತು. ಆದರೆ, 7 ಗಂಟೆ ನಡೆದ ಸಭೆಯಲ್ಲಿ ರೈತ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕೇಂದ್ರ ಸರ್ಕಾರದ ನಡುವೆ ಸಹಮತ ಮೂಡಲೇ ಇಲ್ಲ.‌ ಆದ್ದರಿಂದ ನಾಳೆ (ಡಿಸೆಂಬರ್ 5) ಮತ್ತೊಂದು ಸುತ್ತಿನ ಸಭೆ ಕರೆಯಲಾಗಿದೆ.

ಕೇಂದ್ರ ಸರ್ಕಾರದ ಜೊತೆಗಿನ ಮಾತುಕತೆ ಫಲಪ್ರದವಾಗಿಲ್ಲದ ಕಾರಣ ದೆಹಲಿ ಗಡಿಯಲ್ಲಿ ಪ್ರತಿಭಟನೆ ಮುಂದುವರೆಸಲು ನಿರ್ಧರಿಸಿರುವ ರೈತ ಸಂಘಟನೆಗಳು ಡಿಸೆಂಬರ್ 5ರಂದು ದೇಶಾದ್ಯಂತ ಹೋರಾಟ ಮಾಡುವುದಕ್ಕೂ ಮುಂದಾಗಿವೆ.

ಹಿಂದಿನ ಸಭೆಗಳಂತೆ ನಿನ್ನೆಯ ಸಭೆಯಲ್ಲೂ ಕೇಂದ್ರ ಸಚಿವರು ಕೃಷಿ ಕಾನೂನುಗಳಲ್ಲಿನ ಭಿನ್ನಾಭಿಪ್ರಾಯಗಳನ್ನು ವಿಂಗಡಿಸಿ ಚರ್ಚಿಸಲು ಸಮಿತಿಯೊಂದನ್ನು ರಚಿಸುವ ಪ್ರಸ್ತಾಪವನ್ನು ಮುಂದಿಟ್ಟರು. ಈ ಪ್ರಸ್ತಾಪಕ್ಕೆ ಒಪ್ಪದ ರೈತ ಮುಖಂಡರು ಕೇಂದ್ರ ಸರ್ಕಾರ ಇತ್ತೀಚೆಗೆ ತಂದಿರುವ ಮೂರು ವಿವಾದಾತ್ಮಕ ಮಸೂದೆಗಳನ್ನು ಹಿಂಪಡೆಯಲೇಬೇಕು. ಜೊತೆಗೆ ರೈತರಿಗೆ ಮಾರಕವಾಗಿರುವ ವಿದ್ಯುತ್ ಕಾನೂನನ್ನು ವಾಪಾಸ್ ಪಡೆಯಲೇಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: Love Jihad; ಮತಾಂತರ ನಿಷೇಧ ಕಾಯ್ದೆಯ ಅಡಿಯಲ್ಲಿ ಉತ್ತರ ಪ್ರದೇಶದಲ್ಲಿ ಮೊದಲ ವ್ಯಕ್ತಿ ಬಂಧನ!

ಕೇಂದ್ರ ಸರ್ಕಾರ ತಮ್ಮ ಬೇಡಿಕೆಗಳನ್ನು ‌ಈಡೇರಿಸದಿದ್ದರೆ ದೆಹಲಿಯ ಎಲ್ಲಾ ಗಡಿಗಳ ರಸ್ತೆಗಳನ್ನು ಬಂದ್ ಮಾಡುತ್ತೇವೆ ಎಂದು ರೈತರು ಎಚ್ಚರಿಸಿದ್ದರು. ಇದರಿಂದ ಬೆಚ್ಚಿದ ಕೇಂದ್ರ ಸರ್ಕಾರ ಪ್ರತಿಭಟನೆ ಕೈಬಿಟ್ಟು ಮಾತುಕತೆಗೆ ಬನ್ನಿ ಎಂದು ಆಹ್ವಾನಿಸಿತ್ತು. ಆದರೆ ಈಗಾಗಲೇ ಒಮ್ಮೆ ಮಾತುಕತೆ ನಡೆದು ತಮ್ಮ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ ಸಿದ್ದವಿಲ್ಲ ಎಂದು ರೈತ ಪ್ರತಿನಿಧಿಗಳು ಸಭೆಗೆ ಒಪ್ಪಿರಲಿಲ್ಲ. ಕಡೆಗೆ ಪ್ರತಿಭಟನೆ ನಡೆಸುತ್ತಲೇ ಸಭೆಯಲ್ಲಿ ಪಾಲ್ಗೊಂಡಿದ್ದರು. ಆದರೆ ಆ ಸಭೆಯೂ ವಿಫಲವಾಗಿರುವುದರಿಂದ ನಾಳೆ ಇನ್ನೊಂದು ಸಭೆ ಕರೆಯಲಾಗಿದೆ.

ದೇಶದ ವಿವಿಧ ಮೂಲೆಗಳಿಂದ ದೆಹಲಿಯತ್ತ ಧಾವಿಸಿದ್ದ ರೈತರು ನವೆಂಬರ್ 26ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ಪ್ರತಿಭಟನೆಗೆ ಮೊದಲು ಒಪ್ಪಿಗೆ ನೀಡಿದ್ದ ಪೊಲೀಸರು ನಂತರ ಪ್ರತಿಭಟನೆ ಹತ್ತಿಕ್ಕಲೆಂದೇ ಕೊರೋನಾ ಕಾರಣವೊಡ್ಡಿ ಒಪ್ಪಿಗೆಯನ್ನು ಹಿಂಪಡೆದರು. ಇದಲ್ಲದೆ ರೈತರು ದೆಹಲಿಯನ್ನು ಪ್ರವೇಶಿಸದಂತೆ ಗಡಿಯಲ್ಲೇ ತಡೆದರು. ಸದ್ಯ ದೆಹಲಿಯ ಗಡಿಯಲ್ಲಿರುವ ರೈತರು ತಾವಿದ್ದ ಸ್ಥಳಗಳಲ್ಲೇ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ.

ದೇಶದ ಬೇರೆ ಬೇರೆ ಭಾಗಗಳಿಂದ ರೈತರು ಸಾಂಕೇತಿಕವಾಗಿ ಭಾಗವಹಿಸಿದ್ದರೆ, ದೆಹಲಿಗೆ ಸಮೀಪ ಇರುವ ಹರಿಯಾಣ, ರಾಜಸ್ಥಾನ, ಪಂಜಾಬ್ ಮತ್ತು ಉತ್ತರ ಪ್ರದೇಶಗಳಿಂದ‌ ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದಾರೆ. ಈ‌ ಹಿನ್ನೆಲೆಯಲ್ಲಿ ದೆಹಲಿ‌ ಪೊಲೀಸರು ಹರಿಯಾಣ, ರಾಜಸ್ಥಾನ, ಪಂಜಾಬ್ ಮತ್ತು ಉತ್ತರ ಪ್ರದೇಶಗಳಿಂದ‌ ಬರುವ ರಸ್ತೆಗಳಲ್ಲಿ ರೈತರನ್ನು ತಡೆದಿದ್ದಾರೆ.
Published by: Sushma Chakre
First published: December 4, 2020, 7:37 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories