ನವದೆಹಲಿ(ಸೆ.19): ಕೋಲಾರ ಸಂಸದ ಮುನಿಸ್ವಾಮಿ ನೇತೃತ್ವದ ಕೋಲಾರ ಜಿಲ್ಲೆಯ ಈರುಳ್ಳಿ ಬೆಳೆಗಾರರು ಇಂದು ಕೇಂದ್ರ ರಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದಗೌಡ ಅವರನ್ನು ಭೇಟಿ ಮಾಡಿ ರೋಸ್ ಈರುಳ್ಳಿಯ 'ರಫ್ತು ಸ್ಥಗಿತ'ವನ್ನು ತೆರವುಗೊಳಿಸುವಂತೆ ಮನವಿ ಮಾಡಿದರು.
ಕೇಂದ್ರ ಸರ್ಕಾರವು ರೋಸ್ ಈರುಳ್ಳಿ ರಫ್ತು ಸ್ಥಗಿತಗೊಳಿಸಿದೆ. ಇದರಿಂದ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬೆಳೆದ ಸುಮಾರು 10 ಸಾವಿರ ಟನ್ ರೊಸ್ ಈರುಳ್ಳಿ ಹಾಳಾಗಲಿದೆ. ಆದುದರಿಂದ ಕೇಂದ್ರ ಸರ್ಕಾರದ ಸಂಬಂಧಪಟ್ಟ ಇಲಾಖೆಯೊಂದಿಗೆ ಸಮಾಲೋಚಿಸಿ ಕ್ರಮ ತೆಗೆದುಕೊಳ್ಳಬೇಕೆಂದು ಕೇಂದ್ರ ಸಚಿವ ಸದಾನಂದಗೌಡರಲ್ಲಿ ರೈತರ ನಿಯೋಗ ಮನವಿ ಮಾಡಿತು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸದಾನಂದಗೌಡ, ಕೂಡಲೆ ಕೇಂದ್ರದ ಸಂಬಂಧಪಟ್ಟ ಸಚಿವರೊಂದಿಗೆ ಮಾತನಾಡಿ ಶೀಘ್ರಕ್ರಮಕೈಗೊಳ್ಳಲು ಒತ್ತಾಯಿಸುವುದಾಗಿ ರೈತರಿಗೆ ಭರವಸೆ ನೀಡಿದರು.
ಕೇಂದ್ರದ ವಾಣಿಜ್ಯ ಮತ್ರು ಕೈಗಾರಿಕ ಸಚಿವರು ಮತ್ತು ಕೃಷಿ ಸಚಿವರಿಗೆ ಸದಾನಂದಗೌಡ ಪತ್ರ ಬರೆದು ರೋಸ್ ಈರುಳ್ಳಿಯ 'ರಫ್ತು ಸ್ಥಗಿತ'ವನ್ನು ತೆರವುಗೊಳಿಸುವಂತೆ ಮನವಿ ಮಾಡಲಿದ್ದಾರೆ ಎನ್ನಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ