Fire Accident: ಚೀನಾದ ಮಾರ್ಷಲ್ ಆರ್ಟ್ಸ್ ಶಾಲೆಯಲ್ಲಿ ಅಗ್ನಿ ದುರಂತ; 18 ಮಕ್ಕಳು ಸಜೀವ ದಹನ

Fire Accident in China Martial Arts Center: ಚೀನಾದ ಮಾರ್ಷಲ್ ಆರ್ಟ್ಸ್ ಶಾಲೆಯಲ್ಲಿ ಮಾರ್ಷಲ್ ಆರ್ಟ್ಸ್ ತರಬೇತಿ ಪಡೆಯುತ್ತಿದ್ದ 7ರಿಂದ 16 ವರ್ಷದೊಳಗಿನ 18 ಮಕ್ಕಳು ಸಜೀವ ದಹನವಾಗಿದ್ದಾರೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಬೀಜಿಂಗ್ (ಜೂನ್ 25): ಚೀನಾ ದೇಶದ ಮಾರ್ಷಲ್ ಆರ್ಟ್ಸ್ ಶಾಲೆಯೊಂದರಲ್ಲಿ ಇಂದು ಮುಂಜಾನೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದ್ದು, 18 ವಿದ್ಯಾರ್ಥಿಗಳಿಗೆ ಬೆಂಕಿಗೆ ಆಹುತಿಯಾಗಿದ್ದಾರೆ. 16 ವಿದ್ಯಾರ್ಥಿಗಳನ್ನು ಬೆಂಕಿಯಿಂದ ರಕ್ಷಿಸಲಾಗಿದ್ದು, ಗಾಯಗಳಾಗಿರುವುದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೆಂಟ್ರಲ್ ಚೀನಾದ ಮಾರ್ಷಲ್ ಆರ್ಟ್ಸ್ ಶಾಲೆಯಲ್ಲಿ ಮಾರ್ಷಲ್ ಆರ್ಟ್ಸ್ ತರಬೇತಿ ಪಡೆಯುತ್ತಿದ್ದ 7ರಿಂದ 16 ವರ್ಷದೊಳಗಿನ 18 ಮಕ್ಕಳು ಸಜೀವ ದಹನವಾಗಿದ್ದಾರೆ. ಈ ಘಟನೆ ನಡೆದಾಗ ಶಾಲೆಯಲ್ಲಿ 34 ವಿದ್ಯಾರ್ಥಿಗಳಿದ್ದರು ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಶುಕ್ರವಾರ ಬೆಳಗ್ಗೆ ಈ ಅಗ್ನಿ ಅವಘಡ ನಡೆದಿದ್ದು, ಬೆಂಕಿ ಹೊತ್ತಿಕೊಳ್ಳಲು ಕಾರಣವೇನೆಂದು ತಿಳಿದುಬಂದಿಲ್ಲ.

ಇದನ್ನೂ ಓದಿ: Shocking News: ಮಾಂತ್ರಿಕನಿಂದ ದಿನವೂ ಕನಸಲ್ಲೇ ಅತ್ಯಾಚಾರ!; ಮಹಿಳೆಯ ದೂರು ಕೇಳಿ ಪೊಲೀಸರೇ ಶಾಕ್

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಮಕ್ಕಳನ್ನು ರಕ್ಷಿಸಲು ಮುಂದಾದರು. ಆದರೆ, ಅಷ್ಟರಲ್ಲಾಗಲೇ ಬೆಂಕಿ ಇಡೀ ಶಾಲೆಯನ್ನು ಆವರಿಸಿಕೊಂಡಿದ್ದರಿಂದ ರಕ್ಷಣಾ ಕಾರ್ಯಾಚರಣೆ ಸಾಧ್ಯವಾಗಲಿಲ್ಲ. ಬೆಂಕಿಯನ್ನು ಆರಿಸಿ, ಒಳಗೆ ಹೋಗುವಷ್ಟರಲ್ಲಿ 18 ಮಕ್ಕಳು ಸುಟ್ಟು ಕರಕಲಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದ 16 ಮಕ್ಕಳನ್ನು ರಕ್ಷಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ.

ಈ ಕುರಿತು ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಿದೆ.
Published by:Sushma Chakre
First published: