Fire Accident: ಮಹಾರಾಷ್ಟ್ರದ ಅಹ್ಮದ್​​ನಗರ ಆಸ್ಪತ್ರೆಯಲ್ಲಿ ಬೆಂಕಿ ಅನಾಹುತ; 10 ಕೋವಿಡ್​ ರೋಗಿಗಳು ಸಾವು

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದು, ಅವರಿಗೆ ಸಾಧ್ಯವಿರುವ ಎಲ್ಲ ಬೆಂಬಲದ ಭರವಸೆ ನೀಡಿದ್ದಾರೆ ಎಂದು ಇದೇ ವೇಳೆ ಸಚಿವರು ತಿಳಿಸಿದ್ದಾರೆ.

ಘಟನೆ ಚಿತ್ರ. ಫೋಟೋ ಎಎನ್​ಐ

ಘಟನೆ ಚಿತ್ರ. ಫೋಟೋ ಎಎನ್​ಐ

  • Share this:
    ಮುಂಬೈ (ನ.6): ಮಹಾರಾಷ್ಟ್ರದ ಅಹ್ಮದ್‌ನಗರದಲ್ಲಿರುವ (Ahmednagar Civil Hospital )ಸಿವಿಲ್ ಆಸ್ಪತ್ರೆಯ ತೀವ್ರ ನಿಗಾಘಟಕದಲ್ಲಿ ಇಂದು ಬೆಳಗ್ಗೆ ಬೆಂಕಿ (Fire Breaks out) ಕಾಣಿಸಿಕೊಂಡಿದ್ದ ಬೆಂಕಿಗೆ 10 ರೋಗಿಗಳು ಸಾವನ್ನಪ್ಪಿದ್ದಾರೆ. ಮತ್ತೊಬ್ಬ ರೋಗಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಆಸ್ಪತ್ರೆಯ ಕೋವಿಡ್​ ವಾರ್ಡ್​ನಲ್ಲಿ ಈ ಬೆಂಕಿ ಕಾಣಿಸಿಕೊಂಡಿದ್ದು, ಅನಾಹುತ ಸೃಷ್ಟಿಯಾಗಿದೆ. ಈ ವಾರ್ಡ್​ನಲ್ಲಿ 17 ರೋಗಿಗಳು ದಾಖಲಾಗಿದ್ದರು. ಬೆಂಕಿ ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಯ ಮತ್ತೊಂದು ಕೋವಿಡ್​ ವಾರ್ಡ್​ಗೆ (Covid Ward) ರೋಗಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ ರಾಜೇಂದ್ರ ಬೋಸ್ಲೆ ತಿಳಿಸಿದ್ದಾರೆ. ಕೋವಿಡ್ ವಾರ್ಡ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದ ಕಾರಣ ಇನ್ನು ಪತ್ತೆ ಆಗಿಲ್ಲ. ವಿದ್ಯುತ್​ ಶಾರ್ಟ್​ ಸರ್ಕ್ಯೂಟ್​ನಿಂದ ಈ ಘಟನೆ ಸಂಭವಿಸಿರುವ ಸಾಧ್ಯತೆ ಇದೆ ಎನ್ನಲಾಗಿದೆ.

    ಘಟನೆ ವರದಿಯಾಗುತ್ತಿದ್ದಂತೆ ತಕ್ಷಣಕ್ಕೆ ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಯತ್ನ ನಡೆಸಿದ್ದಾರೆ. ಆಸ್ಪತ್ರೆಯ ಕೆಳಭಾಗದಲ್ಲಿ ದಟ್ಟ ಹೊಗೆ ಆವರಿಸಿದ್ದು, ರೋಗಿಗಳನ್ನು ಸ್ಥಳಾಂತರ ಮಾಡುವ ಯತ್ನಗಳ ದೃಶ್ಯಗಳು ಕಂಡು ಬಂದಿದ್ದವು. ಘಟನೆ ಕುರಿತು ವಿಚಾರಣೆ ನಡೆಯಲಿದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ.



    ಫೈರ್​ ಆಡಿಟ್​ಗೆ ಸೂಚನೆ

    ಇನ್ನು ಘಟನೆ ಕುರಿತು ಪ್ರತಿಕ್ರಿಯಿಸಿರುವ ಸಚಿವ ನವಾಬ್​ ಮಲಿಕ್​, ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುವ ಉದ್ದೇಶದಿಂದಾಗಿ ಹೊಸದಾಗಿ ಐಸಿಯು ನಿರ್ಮಾಣ ಮಾಡಲಾಗಿತ್ತು. ಈ ವಾರ್ಡ್​ನಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ಗಂಭೀರ ಸಮಸ್ಯೆ ಸೃಷ್ಟಿಸಿದೆ ಎಂದಿದ್ದಾರೆ.
    ಎಲ್ಲಾ ಆಸ್ಪತ್ರೆಗಳಲ್ಲಿ ಫೈರ್​ ಆಡಿಟ್​ ಕೈಗೊಳ್ಳಲು ಸೂಚಿಸಲಾಗಿದೆ. ಈ ಸಂಬಂಧ ಅಹ್ಮದ್‌ನಗರ ಸಿವಿಲ್ ಆಸ್ಪತ್ರೆಯ ವರದಿಯನ್ನು ಪರಿಶೀಲಿಸಲಾಗುವುದು  ಸಂಪೂರ್ಣ ತನಿಖೆ ನಡೆಸಲಾಗುವುದು ಎಂದು ಮಲಿಕ್ ಹೇಳಿದರು. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದು, ಅವರಿಗೆ ಸಾಧ್ಯವಿರುವ ಎಲ್ಲ ಬೆಂಬಲದ ಭರವಸೆ ನೀಡಿದ್ದಾರೆ ಎಂದು ಇದೇ ವೇಳೆ ಸಚಿವರು ತಿಳಿಸಿದ್ದಾರೆ.

    ಇದನ್ನು ಓದಿ: ಪೆಟ್ರೋಲ್​-ಡೀಸೆಲ್​ ಬಳಿಕ ಅಡುಗೆ ಎಣ್ಣೆ ಬೆಲೆ ಇಳಿಸಿದ ಕೇಂದ್ರ ಸರ್ಕಾರ

    ತನಿಖೆಗೆ ಆಗ್ರಹ

    ಘಟನೆ ಕುರಿತು ಸಂತಾಪ ವ್ಯಕ್ತಪಡಿಸಿದ ಮಾತನಾಡಿರುವ ಎನ್​ಸಿಪಿ ನಾಯಕ ಸಂಗ್ರಾಮ್​ ಜಗತಾಪ್​, ಸಂತ್ರಸ್ತ ಕುಟುಂಬಗಳಿಗೆ ಪರಿಹಾರವನ್ನು ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಅಹಮದ್‌ನಗರದ ಸಿವಿಲ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡದಿಂದಾಗಿ ಹಲವಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಘಟನೆ ಕುರಿತುವಿಚಾರಣೆ ನಡೆಯುತ್ತದೆ, ಆದರೆ ಅದು (ರಾಜ್ಯ) ಸರ್ಕಾರಿ ಸಮಿತಿಯಾಗಿರಬೇಕು. ಸ್ಥಳೀಯ (ಜಿಲ್ಲಾ) ಸಮಿತಿಯಲ್ಲ. ಬೆಂಕಿ ಅನಾಹುತಕ್ಕೆ ಕಾರಣವೇನು. ಇದರ ಹೊಣೆಯನ್ನು ಯಾರ ಹೊರಬೇಕು ಎಂಬುದನ್ನು ಪತ್ತೆ ಹಚ್ಚಬೇಕು ಎಂದು ಒತ್ತಾಯಿಸಿದರು.

    ಇದನ್ನು ಓದಿ: ಜೈಲಿನಲ್ಲಿ ಚೀನಾ ಪತ್ರಕರ್ತೆಯ ನರಕಯಾತನೆ, ಕೊರೋನಾ ಬಗ್ಗೆ ವರದಿ ಮಾಡಿದ್ದಕ್ಕೆ ಘೋರ ಶಿಕ್ಷೆನಾ?

    ವಿಚಾರಣೆಗೆ ಒತ್ತಾಯ

    ಮಾಜಿ ಸಿಎಂ ದೇವೇಂದ್ರ ಫಡ್ನವೀಸ್​ ಟ್ವೀಟ್​ ಮಾಡಿ ಘಟನೆ ಕುರಿತು ಆಘಾತ ವ್ಯಕ್ತಪಡಿಸಿದ್ದಾರೆ. ನಗರ ಸಿವಿಲ್ ಆಸ್ಪತ್ರೆಯ ಐಸಿಯು ಅಗ್ನಿ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಘಟನೆ ಕುರಿತು ವಿಚಾರಣೆ ನಡೆಸಬೇಕು. ಘಟನೆ ಕುರಿತು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
    Published by:Seema R
    First published: