Fire Accident: ಮುಂಬೈನ ಶಾಪಿಂಗ್ ಕಾಂಪ್ಲೆಕ್ಸ್​ನಲ್ಲಿ ಬೆಂಕಿ ಅವಘಡ; ಬೆಳ್ಳಂಬೆಳಗ್ಗೆ ಹೊತ್ತಿ ಉರಿದ ಅಂಗಡಿಗಳು

Mumbai Fire Attack: ಮುಂಬೈನ ಬೆಂಕಿ ಅನಾಹುತ ಸಂಭವಿಸಿದ ವೇಳೆ ಶಾಪಿಂಗ್ ಕಾಂಪ್ಲೆಕ್ಸ್​ನಲ್ಲಿ ಯಾರೂ ಇಲ್ಲದ ಕಾರಣ ಪ್ರಾಣಾಪಾಯ ಸಂಭವಿಸಿಲ್ಲ.

Sushma Chakre | news18-kannada
Updated:July 11, 2020, 11:45 AM IST
Fire Accident: ಮುಂಬೈನ ಶಾಪಿಂಗ್ ಕಾಂಪ್ಲೆಕ್ಸ್​ನಲ್ಲಿ ಬೆಂಕಿ ಅವಘಡ; ಬೆಳ್ಳಂಬೆಳಗ್ಗೆ ಹೊತ್ತಿ ಉರಿದ ಅಂಗಡಿಗಳು
ಮುಂಬೈ ಶಾಪಿಂಗ್ ಕಾಫ್ಲೆಕ್ಸ್​ನಲ್ಲಿ ಹರಡಿರುವ ಬೆಂಕಿ
  • Share this:
ಮುಂಬೈ (ಜು. 11): ಮಹಾರಾಷ್ಟ್ರದ ಮುಂಬೈ ಶಾಪಿಂಗ್ ಕಾಂಪ್ಲೆಕ್ಸ್​ನಲ್ಲಿ ಭಾರೀ ಅಗ್ನಿ ಅವಘಢ ಸಂಭವಿಸಿದೆ. ಇಂದು ಮುಂಜಾನೆ ಮುಂಬೈನ ಬೊರಿವಲಿಯಲ್ಲಿರುವ ಶಾಪಿಂಗ್ ಕಾಂಪ್ಲೆಕ್ಸ್​ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ. 14ಕ್ಕೂ ಹೆಚ್ಚು ಅಗ್ನಿಶಾಮಕ ದಳದ ವಾಹನಗಳು ಬೆಂಕಿಯನ್ನು ಆರಿಸುವ ಕಾರ್ಯದಲ್ಲಿ ನಿರತವಾಗಿವೆ.

ಮುಂಬೈನ ಬೆಂಕಿ ಅನಾಹುತ ಸಂಭವಿಸಿದ ವೇಳೆ ಶಾಪಿಂಗ್ ಕಾಂಪ್ಲೆಕ್ಸ್​ನಲ್ಲಿ ಯಾರೂ ಇಲ್ಲದ ಕಾರಣ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆ ನಡೆದ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ 14 ಅಗ್ನಿಶಾಮಕ ದಳದ ವಾಹನಗಳು, 13 ಜಂಬೋ ಟ್ಯಾಂಕರ್​ಗಳು ಆಗಮಿಸಿ, ಬೆಂಕಿಯನ್ನು ಆರಿಸಿವೆ. ಇನ್ನೂ ಕಾರ್ಯಾಚರಣೆ ನಡೆಯುತ್ತಲೇ ಇವೆ. ಶಾಪಿಂಗ್ ಕಾಂಪ್ಲೆಕ್ಸ್​ನಲ್ಲಿ ಉಂಟಾದ ಶಾರ್ಟ್​ ಸರ್ಕ್ಯೂಟ್​ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ಕಾಂಪ್ಲೆಕ್ಸ್​ನ ಸೆಕ್ಯುರಿಟಿ ಮೇಲ್ವಿಚಾರಕ ತಿಳಿಸಿದ್ದಾರೆ.
ಇದನ್ನೂ ಓದಿ: ಉಡುಪಿ, ಉತ್ತರ ಕನ್ನಡ, ಕೊಡಗಿನಲ್ಲಿ ಭಾರೀ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆಇಂದು ಬೆಳಗಿನ ಜಾವ 2.55ಕ್ಕೆ ಶಾಪಿಂಗ್ ಕಾಂಪ್ಲೆಕ್ಸ್​ನಲ್ಲಿ ಬೆಂಕಿ ದುರಂತ ಸಂಭವಿಸಿದೆ. ತಕ್ಷಣ ಸೆಕ್ಯುರಿಟಿ ಸಿಬ್ಬಂದಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಈ ಕಾಂಪ್ಲೆಕ್ಸ್​ನಲ್ಲಿ 77 ಅಂಗಡಿಗಳಿವೆ. ಅವುಗಳಲ್ಲಿ ಬಹುತೇಕ ಅಂಗಡಿಗಳು ಮೊಬೈಲ್​ನದ್ದಾಗಿವೆ. ಶಾರ್ಟ್​ ಸರ್ಕ್ಯೂಟ್​ನಿಂದಲೇ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಅಲ್ಲಿನ ಭದ್ರತಾ ಸಿಬ್ಬಂದಿ ತಿಳಿಸಿದ್ದಾರೆ.

ಕಳೆದ ತಿಂಗಳು ಕೂಡ ಮುಂಬೈನ ಮಾರುಕಟ್ಟೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಜನಸಂದಣಿ ಇದ್ದ ವೇಳೆಯಲ್ಲೇ ಬೆಂಕಿ ಕಾಣಿಸಿಕೊಂಡು, ಆತಂಕಕ್ಕೆ ಕಾರಣವಾಗಿತ್ತು. ತಕ್ಷಣ ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ, ಮಾರುಕಟ್ಟೆಯ ಬೆಂಕಿಯನ್ನು ಆರಿಸಿದ್ದರು.
Published by: Sushma Chakre
First published: July 11, 2020, 11:44 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading