ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಆಕಸ್ಮಿಕ ಬೆಂಕಿ; ಯಾವುದೇ ಪ್ರಾಣಹಾನಿ ಇಲ್ಲ
ಕೇತ್ವಾಡಿ ಹಿಂಬದಿ ರಸ್ತೆಯ ರಿಲಯನ್ಸ್ ಆಸ್ಪತ್ರೆಯಲ್ಲಿನ ನೆಲ ಮಹಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ.
news18-kannada Updated:August 1, 2020, 4:56 PM IST

ಪ್ರಾತಿನಿಧಿಕ ಚಿತ್ರ
- News18 Kannada
- Last Updated: August 1, 2020, 4:56 PM IST
ಮುಂಬೈ(ಆ.01): ದಕ್ಷಿಣ ಮುಂಬೈನ ಗ್ರ್ಯಾಂಟ್ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಕೇತ್ವಾಡಿ ಹಿಂಬದಿ ರಸ್ತೆಯ ರಿಲಯನ್ಸ್ ಆಸ್ಪತ್ರೆಯಲ್ಲಿನ ನೆಲ ಮಹಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಶುಕ್ರವಾರ ರಾತ್ರಿ ಸುಮಾರು 11.44 ಗಂಟೆಯಲ್ಲಿ ಈ ದುರಂತ ನಡೆದಿದೆ ಎಂದು ತಿಳಿದು ಬಂದಿದೆ. ನಿರ್ಗಮಿತ ಪೊಲೀಸ್ ಕಮೀಷನರ್ ಭಾಸ್ಕರ್ ರಾವ್ ಹೆಸರಲ್ಲಿ ಉದ್ಯಮಿಗೆ ವಂಚನೆ; ಸಿಸಿಬಿ ಪೊಲೀಸರಿಂದ ಆರೋಪಿಯ ಬಂಧನ
ಆಸ್ಪತ್ರೆಯ ನೆಲ ಮಹಡಿಯ ಅಡುಗೆ ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಎಚ್ಚರಿಕೆ ಗಂಟೆ ಬಾರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಸುಮಾರು 6 ಅಗ್ನಿಶಾಮಕ ವಾಹನಗಳು ದೌಡಾಯಿಸಿವೆ. ಅಗ್ನಿಶಾಮಕ ಸಿಬ್ಬಂದಿ ಮಧ್ಯರಾತ್ರಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.
ಈ ಅಗ್ನಿ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಬೆಂಕಿ ಅನಾಹುತಕ್ಕೆ ಕಾರಣ ಏನೆಂಬುದು ಇನ್ನೂ ತಿಳಿದು ಬಂದಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಕೇತ್ವಾಡಿ ಹಿಂಬದಿ ರಸ್ತೆಯ ರಿಲಯನ್ಸ್ ಆಸ್ಪತ್ರೆಯಲ್ಲಿನ ನೆಲ ಮಹಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಶುಕ್ರವಾರ ರಾತ್ರಿ ಸುಮಾರು 11.44 ಗಂಟೆಯಲ್ಲಿ ಈ ದುರಂತ ನಡೆದಿದೆ ಎಂದು ತಿಳಿದು ಬಂದಿದೆ.