ಸಂಸತ್ತಿನ ಆರನೇ ಅಂತಸ್ತಿನಲ್ಲಿ ಅಗ್ನಿ ಅವಘಡ; ನಿಯಂತ್ರಣಕ್ಕೆ ಬಂದ ಬೆಂಕಿ

ಅಗ್ನಿ ಅವಘಡಕ್ಕೆ ಶಾರ್ಟ್​ ಸರ್ಕ್ಯೂಟ್​ ಕಾರಣ ಎಂದು ಹೇಳಾಗುತ್ತಿದೆ. ಈಗಾಗಲೇ ಬೆಂಕಿ ನಿಯಂತ್ರಣಕ್ಕೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಸತ್ತು

ಸಂಸತ್ತು

  • Share this:
    ನವದೆಹಲಿ (ಆ.17): ಇಲ್ಲಿರುವ ಸಂಸತ್​ ಕಟ್ಟಡದ ಆರನೇ ಅಂರಸ್ತಿನಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಐದಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.

    ಅಗ್ನಿ ಅವಘಡಕ್ಕೆ ಶಾರ್ಟ್​ ಸರ್ಕ್ಯೂಟ್​ ಕಾರಣ ಎಂದು ಹೇಳಾಗುತ್ತಿದೆ. ಈಗಾಗಲೇ ಬೆಂಕಿ ನಿಯಂತ್ರಣಕ್ಕೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ.

    ಇನ್ನು, ಮುಂಜಾನೇಯೇ ಅಗ್ನಿ ಅವಘಡ ಸಂಭವಿಸಿರುವುದರಿಂದ ಈ ಅಂತಸ್ತಿನಲ್ಲಿ ಯಾರೂ ಇರಲಿಲ್ಲ. ಹೀಗಾಗಿ ಅಗ್ನಿ ಅವಘಡದಿಂದ ಯಾವುದೇ ಪ್ರಾಣ ಹಾನಿಯಾಗಿಲ್ಲ.

    ದಿನ ಬಿಟ್ಟು ದಿನ ಅಧೀವೇಶನ:

    ಈ ಬಾರಿಯ ಮಳೆಗಾಲದ ಸಂಸತ್​ ಅಧಿವೇಶನ ಸೆಪ್ಟೆಂಬರ್​ನಲ್ಲಿ ನಡೆಯಲಿದೆ ಎನ್ನಲಾಗಿದೆ. ಕೊರೊನಾ ಕಾರಣಕ್ಕೆ ಈ ಬಾರಿಯ ಸಂಸತ್ತಿನ ಮುಂಗಾರು ಅಧಿವೇಶನವನ್ನು ಹೇಗೆ ನಡೆಸಬೇಕೆಂಬ ಗೊಂದಲ ಉಂಟಾಗಿತ್ತು. ಸಂಸತ್ ಸಚಿವಾಲಯದ ಅಧಿಕಾರಿಗಳು ವರ್ಚ್ಯುಯಲ್, ಸೆಮಿ ವರ್ಚ್ಯುಯಲ್, ಬೇರೆ ಬೇರೆ ಪ್ರದೇಶಗಳಲ್ಲಿ ಸಂಸದನ್ನು ಕೂರಿಸಿ, ಕೆಲವರನ್ನು ಮಾತ್ರ ಸೇರಿಸಿಕೊಂಡು ಎಂಬ ಹಲವು ಮಾದರಿಗಳನ್ನು ನೀಡಿದ್ದರು. ಆದರೆ ಅಂತಿಮವಾಗಿ ಶಿಫ್ಟ್ ಅಥವಾ ದಿನ ಬಿಟ್ಟು ದಿನ ಅಧಿವೇಶನ ನಡೆಸಲು‌ ನಿರ್ಧರಿಸಲಾಗಿದೆ ಎಂದು ಗೊತ್ತಾಗಿದೆ.

    ರಾಜ್ಯಸಭೆಯ ಸಭಾಪತಿ ಎಂ.‌ ವೆಂಕಯ್ಯನಾಯ್ಡು ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸಂಸತ್ ಸಚಿವಾಲಯದ ಅಧಿಕಾರಿಗಳ ಜೊತೆ ಹಲವು‌ ಸುತ್ತಿನ ಮಾತುಕತೆ ನಡೆಸಿ, ಹಲವು ಸಾಧ್ಯತೆಗಳನ್ನು ಪರಿಶೀಲಿದ್ದಾರೆ. ಈ ವೇಳೆ ಶಿಫ್ಟ್ ಅಥವಾ ದಿನ ಬಿಟ್ಟು ದಿನ ಅಧಿವೇಶನ ನಡೆಸುವ ನಿರ್ಧಾರಕ್ಕೆ ಬಂದಿದ್ದಾರಂತೆ.
    Published by:Rajesh Duggumane
    First published: