ದೆಹಲಿಯ ಜಾಮಿಯಾ ನಗರ್​ ಬಳಿ ಸಿಎಎ ವಿರೋಧಿ ಪ್ರತಿಭಟನೆ ವೇಳೆ ಫೈರಿಂಗ್; ವಿದ್ಯಾರ್ಥಿ ಕಾಲಿಗೆ ಗಂಭೀರ ಗಾಯ

ಪ್ರತಿಭಟನೆ ವೇಳೆ ಸ್ಥಳಕ್ಕೆ ಆಗಮಿಸಿದ್ದ ಬಂದೂಕುಧಾರಿ ವ್ಯಕ್ತಿ ನೋಡ ನೋಡುತ್ತಿದ್ದಂತೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಗುಂಡು ಹಾರಿಸಿದ್ದಾನೆ. ಪರಿಣಾಮ ಓರ್ವ ವಿದ್ಯಾರ್ಥಿ ಕಾಲಿಗೆ ಗಂಭೀರ ಗಾಯವಾಗಿದೆ ಎನ್ನಲಾಗುತ್ತಿದೆ.

ಜಾಮಿಯಾ ವಿವಿ ಆವರಣದಲ್ಲಿ ನಡೆದ ಪ್ರತಿಭಟನೆಯ ದೃಶ್ಯ

ಜಾಮಿಯಾ ವಿವಿ ಆವರಣದಲ್ಲಿ ನಡೆದ ಪ್ರತಿಭಟನೆಯ ದೃಶ್ಯ

  • Share this:
ನವ ದೆಹಲಿ (ಜನವರಿ 30); ಕೇಂದ್ರ ಸರ್ಕಾರದ ವಿವಾದಾತ್ಮಕ ಸಿಎಎ ಮತ್ತು ಎನ್ಆರ್​ಸಿ ಕಾಯ್ದೆಯ ವಿರುದ್ಧ ನಿರಂತರವಾಗಿ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಲೇ ಇವೆ. ಇಂದೂ ಸಹ ದೆಹಲಿಯ ಜಾಮಿಯ ನಗರ್ ಬಳಿ ಸಿಎಎ ವಿರೋಧಿ ಪ್ರತಿಭಟನೆ ಆಯೋಜಿಸಲಾಗಿತ್ತು. ಆದರೆ, ಈ ಪ್ರತಿಭಟನೆ ವೇಳೆ ವ್ಯಕ್ತಿಯೋರ್ವ ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ನಡೆಸುವ ಮೂಲಕ ಆತಂಕ ಸೃಷ್ಟಿಸಿದ್ದಾನೆ. 

ಪ್ರತಿಭಟನೆ ವೇಳೆ ಸ್ಥಳಕ್ಕೆ ಆಗಮಿಸಿದ್ದ ಬಂದೂಕುಧಾರಿ ವ್ಯಕ್ತಿ ನೋಡ ನೋಡುತ್ತಿದ್ದಂತೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಗುಂಡು ಹಾರಿಸಿದ್ದಾನೆ. ಪರಿಣಾಮ ಓರ್ವ ವಿದ್ಯಾರ್ಥಿ ಕಾಲಿಗೆ ಗಂಭೀರ ಗಾಯವಾಗಿದೆ.

ಘಟನೆ ನಡೆಯುತ್ತಿದ್ದಂತೆ ವಿದ್ಯಾರ್ಥಿಗಳ ಮೇಲೆ ಫೈರ್ ಮಾಡಿದ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ. ಆದರೆ, ಆತ ಯಾರು? ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಗುಂಡಿನ ದಾಳಿ ನಡೆಸಲು ಕಾರಣ ಏನು? ಎಂಬುದು ಪೊಲೀಸ್ ವಿಚಾರಣೆ ನಂತರ ಬೆಳಕಿಗೆ ಬರಬೇಕಿದೆ.

ಇದನ್ನೂ ಓದಿ : ಜೆಡಿಯು ಉಚ್ಛಾಟಿತ ನಾಯಕ ಪ್ರಶಾಂತ್​ ಕಿಶೋರ್ ಜೆಡಿಎಸ್​ ತೆಕ್ಕೆಗೆ?; ಚುನಾವಣಾ ತಂತ್ರಜ್ಞನನ್ನು ಸೆಳೆಯಲು ಮುಂದಾದ ತೆನೆ!
First published: