ದೇಶದ ಜನರ ಗಮನಸೆಳೆಯುವ ಮೂಲಕ ಭಾರೀ ನಿರೀಕ್ಷೆ ಹುಟ್ಟುಹಾಕಿರುವ ಪಂಚ ರಾಜ್ಯಗಳ ಚುನಾವಣೆಗಳು ಅಂತ್ಯವಾಗಿದೆ. ಇಂದು ಪಶ್ಚಿಮ ಬಂಗಾಳದಲ್ಲಿ ಕಡೆಯ ಹಂತದ ಮತದಾನ ಮುಗಿಯುತ್ತಿದ್ದಂತೆ ಸಂಜೆ 7 ಗಂಟೆ ಬಳಿಕ ಚುನಾವಣೋತ್ತರ ಸಮೀಕ್ಷೆಗಳು ಹೊರ ಬರಲಿದೆ. ಪಂಚ ರಾಜ್ಯಗಳಾದ ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿ, ಕೇರಳದಲ್ಲಿ ಗೆಲುವಿನ ಲೆಕ್ಕಾಚಾರಗಳು ಶುರುವಾಗಲಿದೆ. ನಾಲ್ಕು ರಾಜ್ಯಗಳಲ್ಲಿ ಈಗಾಗಲೇ ಮತದಾನ ಮುಗಿದಿದ್ದು, ಇಂದು ಪಶ್ಚಿಮ ಬಂಗಾಳದಲ್ಲಿ ಮಾತ್ರ ಕಡೆಯ ಹಂತದ ಮತದಾನ ನಡೆದಿದೆ. ಮತದಾನ ಅಂತ್ಯವಾಗುತ್ತಿದ್ದಂತೆ ಚುನಾವಣೋತ್ತರ ಸಮೀಕ್ಷೆಗಳು ಹೊರ ಬೀಳಲಿದ್ದು, ಗೆಲುವಿನ ಲೆಕ್ಕಾಚಾರ ಶುರುವಾಗಿದೆ. ಈ ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶದ ಕುರಿತ ಕ್ಷಣ ಕ್ಷಣ ಸುದ್ದಿ ಇಲ್ಲಿದೆ...