• Home
 • »
 • News
 • »
 • national-international
 • »
 • Gujarat Election 2022: 10 ಲಕ್ಷ ಉದ್ಯೋಗ ಸೃಷ್ಟಿ, ಮಹಿಳೆಯರಿಗೆ 50ರಷ್ಟು ಮೀಸಲಾತಿ! ಕೈ ಪ್ರಣಾಳಿಕೆಯಲ್ಲಿ ಭರಪೂರ ಭರವಸೆ!

Gujarat Election 2022: 10 ಲಕ್ಷ ಉದ್ಯೋಗ ಸೃಷ್ಟಿ, ಮಹಿಳೆಯರಿಗೆ 50ರಷ್ಟು ಮೀಸಲಾತಿ! ಕೈ ಪ್ರಣಾಳಿಕೆಯಲ್ಲಿ ಭರಪೂರ ಭರವಸೆ!

ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

Gujarat Election 2022: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ 'ನರೇಂದ್ರ ಮೋದಿ ಕ್ರೀಡಾಂಗಣ' ಹೆಸರನ್ನು 'ಸರ್ದಾರ್ ಪಟೇಲ್ ಕ್ರೀಡಾಂಗಣ' ಎಂದು ಮರುನಾಮಕರಣ ಮಾಡುವುದಾಗಿ ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ!

 • News18 Kannada
 • Last Updated :
 • Gujarat, India
 • Share this:

  ಅಹಮದಾಬಾದ್: ಗುಜರಾತ್ ನಲ್ಲಿ (Gujarat) ಅಧಿಕಾರಕ್ಕೆ (Power) ಬಂದರೆ ಅಹಮದಾಬಾದ್ ನ (Ahmadabad) ನರೇಂದ್ರ ಮೋದಿ (Narendra Modi) ಸ್ಟೇಡಿಯಂ ಹೆಸರನ್ನು ಸರ್ದಾರ್ ಪಟೇಲ್ ಸ್ಟೇಡಿಯಂ ಎಂದು ಬದಲಾವಣೆ ಮಾಡುತ್ತೇವೆ ಅಂತಾ ಕಾಂಗ್ರೆಸ್ (Congress) ಗುಜರಾತ್ ಜನತೆಗೆ ಭರವಸೆ ನೀಡಿದೆ. ಈಗಾಗಲೇ ಕಾಂಗ್ರೆಸ್ ಪಕ್ಷ ಮುಂಬರುವ ವಿಧಾನಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಕಾಂಗ್ರೆಸ್ ಹಿರಿಯ ನಾಯಕ ಮತ್ತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮಾತನಾಡಿ, ಕಾಂಗ್ರೆಸ್ ಪಕ್ಷವು ಗುಜರಾತ್ ನಲ್ಲಿ ಸರ್ಕಾರ ರಚಿಸಿದರೆ ಮೊದಲ ಸಂಪುಟ ಸಭೆಯಲ್ಲಿಯೇ ಚುನಾವಣಾ ಪ್ರಣಾಳಿಕೆ ಅಧಿಕೃತ ದಾಖಲೆಯಾಗಿ ಕಾಂಗ್ರೆಸ್ ಸ್ವೀಕರಿಸಲಿದೆ ಅಂತಾ ಹೇಳಿದರು.


  ಗುಜರಾತ್ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಿಡುಗಡೆ


  ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ಅಹಮದಾಬಾದ್‌ ನ ಮೊಟೆರಾ ಪ್ರದೇಶದಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದ ಹೆಸರನ್ನು ಸರ್ದಾರ್ ಪಟೇಲ್ ಕ್ರೀಡಾಂಗಣ ಎಂದು ಮರುನಾಮಕರಣ ಮಾಡುವುದಾಗಿ ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ಜನತೆಗೆ ಭರವಸೆ ನೀಡಿದೆ.


  ನರೇಂದ್ರ ಮೋದಿ ಕ್ರೀಡಾಂಗಣ


  ಗುಜರಾತ್ ಚುನಾವಣೆಗೆ ಪಕ್ಷದ ಹಿರಿಯ ವೀಕ್ಷಕರಾಗಿರುವ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದ್ರು. ಗುಜರಾತ್‌ ನಲ್ಲಿ 182 ಸದಸ್ಯ ಬಲ ಹೊಂದಿರುವ ವಿಧಾನಸಭೆಗೆ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.


  ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಅಧ್ಯಕ್ಷ ದೀಪಕ್ ಬಬಾರಿಯಾ ಮಾತನಾಡಿ, ಕರಮಸಾದ್ ಪಟ್ಟಣದ ಕೆಲವು ಸಾಮಾಜಿಕ ಕಾರ್ಯಕರ್ತರು, ಕ್ರೀಡಾಂಗಣದ ಹೆಸರನ್ನು ಅದರ ಮೂಲ ಹೆಸರಾದ ಸರ್ದಾರ್ ಪಟೇಲ್ ಕ್ರೀಡಾಂಗಣ ಎಂದು ಬದಲಾಯಿಸಲು ಒತ್ತಾಯಿಸಿ ಜ್ಞಾಪಕ ಪತ್ರ ನೀಡಿದ್ದಾರೆ.


  ನಮ್ಮ ಸರ್ಕಾರದ ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಕ್ರೀಡಾಂಗಣದ ಹೆಸರನ್ನು ಸರ್ದಾರ್ ಪಟೇಲ್ ಕ್ರೀಡಾಂಗಣ ಎಂದು ಬದಲಾಯಿಸಲಾಗುವುದು ಎಂದು ಭರವಸೆ ನೀಡುವುದಾಗಿ ತಿಳಿಸಿದ್ದಾರೆ.


  ಹಿರಿಯ ಕಾಂಗ್ರೆಸ್ ನಾಯಕ ಮಧುಸೂದನ್ ಮಿಸ್ತ್ರಿ ಮಾತನಾಡಿ, ಪ್ರಧಾನಿ ಮೋದಿ ಅವರು ಸರ್ದಾರ್ ಪಟೇಲ್ ಅವರೊಂದಿಗೆ ತಮ್ಮನ್ನು ಹೋಲಿಕೆ ಮಾಡಿ, ಕ್ರೀಡಾಂಗಣದ ಹೆಸರನ್ನು ಬದಲಾಯಿಸಿದ್ದಾರೆ. ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಕ್ರೀಡಾಂಗಣದ ಹೆಸರನ್ನು ಬದಲಾಯಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.


  ಗುಜರಾತಿಗಳಿಗೆ ರಾಜ್ಯದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ


  ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಎಲ್ಲಾ ಗುಜರಾತಿಗಳಿಗೆ ರಾಜ್ಯದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿದೆ. ಮಹಿಳೆಯರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇ. 50 ರಷ್ಟು ಮೀಸಲಾತಿ ಮತ್ತು ರಾಜ್ಯದ ಪ್ರತಿಯೊಬ್ಬ ಮಹಿಳೆ, ವಿಧವೆ ಮತ್ತು ವೃದ್ಧ ಮಹಿಳೆಗೆ ಮಾಸಿಕ 2,000 ರೂ. ಅನುದಾನ ನೀಡುವುದಾಗಿ ಹೇಳಿದೆ.


  ಸರ್ಕಾರದಿಂದ ಮೂರು ಸಾವಿರ ಇಂಗ್ಲಿಷ್ ಮಾಧ್ಯಮ ಶಾಲೆ ತೆರೆಯುವುದು ಮತ್ತು ರಾಜ್ಯದಲ್ಲಿ ಹೆಣ್ಣುಮಕ್ಕಳಿಗೆ ಅವರ ಸ್ನಾತಕೋತ್ತರ ಪದವಿಯವರೆಗೆ ಉಚಿತ ಶಿಕ್ಷಣ ನೀಡುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ,


  ಇದನ್ನೂ ಓದಿ: ರಾಜೀವ್ ಗಾಂಧಿ ಹಂತಕರ ರಿಲೀಸ್​: ನಳಿನಿ ಸೇರಿ 6 ಅಪರಾಧಿಗಳ ಬಿಡುಗಡೆಗೆ ಸುಪ್ರೀಂ ಆದೇಶ!


  ಸ್ಟೇಡಿಯಂ ಹೆಸರು ಬದಲಾವಣೆಗೆ ಬಿಜೆಪಿ ತಿರುಗೇಟು


  ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಸ್ಟೇಡಿಯಂ ಹೆಸರನ್ನು ಬದಲಾಯಿಸುವ ಭರವಸೆ ನೀಡಿರುವ ಕಾಂಗ್ರೆಸ್ ಪಕ್ಷಕ್ಕೆ, ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ವಕ್ತಾರ ಸುಧಾಂಶು ತ್ರಿವೇದಿ ತಿರುಗೇಟು ಕೊಟ್ಟಿದ್ದಾರೆ. ಸ್ವತಂತ್ರ ಭಾರತದ ಮೊದಲ ಗೃಹ ಸಚಿವರು ಮತ್ತು ಉಪ ಪ್ರಧಾನಿ ಆಗಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಬಗ್ಗೆ ಮಾತನಾಡಲು ವಿರೋಧ ಪಕ್ಷ ಕಾಂಗ್ರೆಸ್ ಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದಿದ್ದಾರೆ.

  Published by:renukadariyannavar
  First published: